4 ಗಿಬ್ಯೋನಿನ ಅತಿಮುಖ್ಯವಾದ ಉನ್ನತ ಸ್ಥಳಕ್ಕೆ ಅರಸನಾದ ಸೊಲೊಮೋನನು ಬಲಿಗಳನ್ನರ್ಪಿಸಲು ಹೋಗಿ, ಆ ಬಲಿಪೀಠದ ಮೇಲೆ ಸಾವಿರ ದಹನಬಲಿಗಳನ್ನು ಅರ್ಪಿಸಿದನು. 5 ಅವನು ಗಿಬ್ಯೋನಿನಲ್ಲಿರುವಾಗ ರಾತ್ರಿಯಲ್ಲಿ ಸ್ವಪ್ನದೊಳಗೆ ಯೆಹೋವ ದೇವರು ಸೊಲೊಮೋನನಿಗೆ ಕಾಣಿಸಿಕೊಂಡರು. ದೇವರು ಅವನಿಗೆ, “ನಾನು ನಿನಗೆ ಏನು ವರ ಕೊಡಬೇಕು? ಕೇಳಿಕೋ,” ಎಂದರು.
6 ಅದಕ್ಕೆ ಸೊಲೊಮೋನನು, “ನನ್ನ ತಂದೆಯಾಗಿರುವ ನಿಮ್ಮ ಸೇವಕನಾದ ದಾವೀದನು ನಿಮ್ಮ ಮುಂದೆ ನೀತಿಯಿಂದಲೂ, ಯಥಾರ್ಥವಾದ ಹೃದಯವುಳ್ಳವನಾಗಿಯೂ ನಡೆದದ್ದರಿಂದ, ನೀವು ಅವನಿಗೆ ಮಹಾಕರುಣೆಯನ್ನು ತೋರಿಸಿದ್ದೀರಿ. ಈ ಮಹಾಕರುಣೆಯನ್ನು ಮುಂದುವರೆಸುತ್ತಾ ಈ ದಿನ ಅವನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ಮಗನನ್ನು ಕೊಟ್ಟಿದ್ದೀರಿ.
7 “ಈಗ ನನ್ನ ದೇವರಾದ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಬದಲಾಗಿ ನಿಮ್ಮ ಸೇವಕನನ್ನು ಅರಸನನ್ನಾಗಿ ಮಾಡಿದ್ದೀರಿ. ಆದರೆ ನಾನು ಚಿಕ್ಕ ಬಾಲಕನಾಗಿದ್ದು, ನನ್ನ ಕರ್ತವ್ಯವನ್ನು ಹೇಗೆ ನಿರ್ವಹಿಸಬೇಕೆಂದು ತಿಳಿದಿಲ್ಲ. 8 ಇದಲ್ಲದೆ ನಿಮ್ಮ ಸೇವಕನಾದ ನಾನು ನೀವು ಆಯ್ದುಕೊಂಡಂಥ ಅಸಂಖ್ಯಾತ ಜನರ ಮಧ್ಯದಲ್ಲಿ ಇದ್ದೇನೆ. 9 ಆದ್ದರಿಂದ ನಿಮ್ಮ ಜನರನ್ನು ಪರಿಪಾಲಿಸುವುದಕ್ಕೆ, ಒಳ್ಳೆಯದನ್ನೂ ಕೆಟ್ಟದ್ದನ್ನೂ ತಿಳಿಯುವ ಹಾಗೆ, ನಿಮ್ಮ ಸೇವಕನಿಗೆ ತಿಳುವಳಿಕೆಯುಳ್ಳ ಹೃದಯವನ್ನು ಕೊಡಬೇಕು. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.
10 ಸೊಲೊಮೋನನು ಕೇಳಿದ ಈ ಮಾತು ಯೆಹೋವ ದೇವರ ದೃಷ್ಟಿಗೆ ಒಳ್ಳೆಯದಾಗಿತ್ತು. 11 ಆದ್ದರಿಂದ ದೇವರು ಅವನಿಗೆ, “ನೀನು ನಿನಗಾಗಿ ದೀರ್ಘಾಯುಷ್ಯ ಅಥವಾ ಸಂಪತ್ತನ್ನು ಕೇಳಲಿಲ್ಲ, ಅಥವಾ ನಿನ್ನ ಶತ್ರುಗಳ ಮರಣವನ್ನು ಕೇಳಿಲ್ಲ, ಆದರೆ ನ್ಯಾಯವನ್ನು ನಿರ್ವಹಿಸುವುದಕ್ಕಾಗಿ ನಿನಗೋಸ್ಕರ ವಿವೇಕವನ್ನು ಕೇಳಿದ್ದರಿಂದ, 12 ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ನಿನಗೆ ಜ್ಞಾನವನ್ನೂ, ವಿವೇಚನೆಯುಳ್ಳ ಹೃದಯವನ್ನೂ ಕೊಟ್ಟಿದ್ದೇನೆ. ನಿನಗೆ ಸಮನಾದ ಜ್ಞಾನಿಯು ಈ ಮುಂಚೆಯೂ ಇರಲಿಲ್ಲ, ನಿನ್ನ ತರುವಾಯವೂ ಇರುವುದಿಲ್ಲ. 13 ನೀನು ಕೇಳದ ಐಶ್ವರ್ಯವನ್ನೂ, ಘನವನ್ನೂ ಕೊಟ್ಟಿದ್ದೇನೆ. ಆದ್ದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸುಗಳಲ್ಲಿ ಒಬ್ಬನೂ ಇರುವುದಿಲ್ಲ. 14 ನೀನು, ನಿನ್ನ ತಂದೆ ದಾವೀದನಂತೆ ನನ್ನ ಮಾರ್ಗದಲ್ಲೇ ನಡೆದು, ನನ್ನ ಕಟ್ಟಳೆಗಳನ್ನು ಮತ್ತು ಆಜ್ಞೆಗಳನ್ನು ಕೈಗೊಂಡರೆ, ನಿನ್ನ ದಿವಸಗಳನ್ನು ಹೆಚ್ಚಿಸುವೆನು,” ಎಂದರು. 15 ತರುವಾಯ ಸೊಲೊಮೋನನು ನಿದ್ರೆಯಿಂದ ಎಚ್ಚೆತ್ತಾಗ, ಅದು ಸ್ವಪ್ನವೆಂದು ತಿಳಿದುಕೊಂಡನು.
19 “ಆದರೆ ಅವಳು ಕೂಸಿನ ಮೇಲೆ ಮಲಗಿದ್ದರಿಂದ, ರಾತ್ರಿಯಲ್ಲಿ ಆಕೆಯ ಮಗು ಸತ್ತು ಹೋಯಿತು. 20 ಇವಳು ಮಧ್ಯರಾತ್ರಿಯಲ್ಲಿ ಎದ್ದು, ನಿನ್ನ ದಾಸಿಯು ನಿದ್ರೆಗೈಯುತ್ತಿರುವಾಗ, ನನ್ನ ಹತ್ತಿರ ಮಲಗಿದ್ದ ನನ್ನ ಮಗನನ್ನು ತೆಗೆದುಕೊಂಡು, ಅದನ್ನು ತನ್ನ ಎದೆಯ ಮೇಲೆ ಮಲಗಿಸಿಕೊಂಡು, ತನ್ನ ಸತ್ತ ಮಗುವನ್ನು ನನ್ನ ಎದೆಯ ಮೇಲೆ ಮಲಗಿಸಿದಳು. 21 ಉದಯದಲ್ಲಿ ನನ್ನ ಕೂಸಿಗೆ ಹಾಲು ಕುಡಿಸಲು ಎದ್ದಾಗ, ಅದು ಸತ್ತಿತ್ತು! ಉದಯದಲ್ಲಿ ಅದನ್ನು ಕಂಡಾಗ, ಅದು ನಾನು ಹೆತ್ತ ಮಗುವಾಗಿರಲಿಲ್ಲ,” ಎಂದಳು.
22 ಆಗ ಆ ಬೇರೆ ಹೆಣ್ಣು ಮಗಳು, “ಇಲ್ಲ ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,” ಎಂದಳು.
23 ಆಗ ಅರಸನು, “ ‘ಇವಳು ಬದುಕಿರುವವನು ನನ್ನ ಮಗನು, ಸತ್ತವನು ನಿನ್ನ ಮಗನು,’ ಎನ್ನುತ್ತಾಳೆ. ಅವಳು, ಹಾಗಲ್ಲ, ‘ಸತ್ತವನು ನಿನ್ನ ಮಗನು, ಬದುಕಿರುವವನು ನನ್ನ ಮಗನು,’ ಎನ್ನುತ್ತಾಳೆ,” ಎಂದು ಹೇಳಿ,
24 ಅರಸನು, “ಖಡ್ಗವನ್ನು ನನ್ನ ಬಳಿಗೆ ತೆಗೆದುಕೊಂಡು ಬಾ,” ಎಂದನು. ಅವರು ಖಡ್ಗವನ್ನು ಅರಸನ ಬಳಿಗೆ ತಂದರು. 25 ಆಗ ಅರಸನು, “ಬದುಕಿರುವ ಕೂಸನ್ನು ಎರಡು ತುಂಡಾಗಿ ಕಡಿದು, ಇವಳಿಗೆ ಅರ್ಧ ಪಾಲನ್ನೂ, ಅವಳಿಗೆ ಅರ್ಧ ಪಾಲನ್ನೂ ಕೊಡಿರಿ,” ಎಂದನು.
26 ಆಗ ಬದುಕಿರುವ ಕೂಸಿನ ತಾಯಿಯಾಗಿರುವವಳ ಕರುಳುಗಳು ತನ್ನ ಮಗನಿಗಾಗಿ ಮರುಗಿದ್ದರಿಂದ ಅವಳು ಅರಸನಿಗೆ, “ನನ್ನ ಒಡೆಯನೇ, ಬದುಕಿರುವ ಕೂಸನ್ನು ಇವಳಿಗೆ ಕೊಡು, ಕೊಲ್ಲಬೇಡ,” ಎಂದಳು.
27 ಆಗ ಅರಸನು ಉತ್ತರವಾಗಿ, “ಬದುಕಿರುವ ಕೂಸನ್ನು ಮೊದಲನೆಯವಳಿಗೆ ಕೊಡಿರಿ, ಕೊಲ್ಲಬೇಡಿರಿ, ಇವಳೇ ಅದರ ತಾಯಿ,” ಎಂದನು.
28 ಅರಸನು ತೀರಿಸಿದ ನ್ಯಾಯವನ್ನು ಕುರಿತು ಸಮಸ್ತ ಇಸ್ರಾಯೇಲರು ಕೇಳಿ, ಅರಸನಿಗೆ ಭಯಪಟ್ಟರು. ಏಕೆಂದರೆ ನ್ಯಾಯತೀರಿಸಲು ಅವನಲ್ಲಿ ದೇವರ ಜ್ಞಾನವಿದೆ ಎಂದು ಕಂಡರು.
<- 1 ಅರಸುಗಳು 21 ಅರಸುಗಳು 4 ->