1 ಸೊಲೊಮೋನನು ತನ್ನ ತಂದೆಗೆ ಬದಲಾಗಿ ಅರಸನಾಗಲು ಅಭಿಷೇಕ ಪಡೆದಿದ್ದಾನೆಂದು ಟೈರಿನ ಅರಸನಾದ ಹೀರಾಮನು ಕೇಳಿದಾಗ, ಅವನು ತನ್ನ ರಾಜದೂತರನ್ನು ಸೊಲೊಮೋನನ ಬಳಿಗೆ ಕಳುಹಿಸಿದನು. ಏಕೆಂದರೆ ಹೀರಾಮನು ಯಾವಾಗಲೂ ದಾವೀದನಿಗೆ ಆಪ್ತಮಿತ್ರನಾಗಿದ್ದನು. 2 ಸೊಲೊಮೋನನು ರಾಜದೂತರ ಮುಖಾಂತರ ಹೀರಾಮನಿಗೆ ಈ ಸಂದೇಶವನ್ನು ಕಳುಹಿಸಿದನು:
7 ಹೀರಾಮನು ಸೊಲೊಮೋನನ ಮಾತುಗಳನ್ನು ಕೇಳಿದಾಗ ಬಹು ಸಂತೋಷಪಟ್ಟು, “ಈ ಮಹಾಜನರ ಮೇಲೆ ಜ್ಞಾನವುಳ್ಳ ಮಗನನ್ನು ದಾವೀದನಿಗೆ ಕೊಟ್ಟ ಯೆಹೋವ ದೇವರಿಗೆ ಇಂದು ಸ್ತೋತ್ರವಾಗಲಿ,” ಎಂದನು.
8 ಹೀರಾಮನು ಸೊಲೊಮೋನನಿಗೆ ಸಂದೇಶವನ್ನು ಕಳುಹಿಸಿ,
10 ಹೀಗೆಯೇ ಹೀರಾಮನು ದೇವದಾರು ಮರಗಳನ್ನೂ, ತುರಾಯಿ ಮರಗಳನ್ನೂ, ಸೊಲೊಮೋನನ ಇಚ್ಛೆಯ ಪ್ರಕಾರವೆಲ್ಲಾ ಕೊಟ್ಟನು. 11 ಸೊಲೊಮೋನನು ಹೀರಾಮನಿಗೆ ಅವನ ಮನೆಯವರ ಆಹಾರಕ್ಕೋಸ್ಕರ ಸುಮಾರು ಮೂರು ಸಾವಿರ ಆರನೂರು ಟನ್ ಗೋಧಿಯನ್ನೂ, ನಾಲ್ಕು ಲಕ್ಷ ನಲವತ್ತು ಸಾವಿರ ಲೀಟರ್ ಅಪ್ಪಟವಾದ ಎಣ್ಣೆಯನ್ನೂ ಕೊಟ್ಟನು. ಹೀಗೆಯೇ ಸೊಲೊಮೋನನು ಹೀರಾಮನಿಗೆ ಪ್ರತಿ ವರುಷ ಕೊಡುತ್ತಾ ಇದ್ದನು. 12 ಇದಲ್ಲದೆ ಯೆಹೋವ ದೇವರು ಸೊಲೊಮೋನನಿಗೆ ವಾಗ್ದಾನ ಮಾಡಿದಂತೆ ಜ್ಞಾನವನ್ನು ಕೊಟ್ಟರು. ಹೀರಾಮನಿಗೂ, ಸೊಲೊಮೋನನಿಗೂ ಸಮಾಧಾನ ಉಂಟಾಗಿತ್ತು. ಅವರಿಬ್ಬರೂ ಒಡಂಬಡಿಕೆಯನ್ನು ಮಾಡಿಕೊಂಡರು.
13 ಆಗ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲರೊಳಗಿಂದ ಆಳುಗಳನ್ನು ತೆಗೆದುಕೊಂಡನು. ಆ ಆಳುಗಳ ಲೆಕ್ಕವು ಮೂವತ್ತು ಸಾವಿರ ಜನವಾಗಿತ್ತು. 14 ಅವನು ಅವರನ್ನು ಲೆಬನೋನಿಗೆ ಕಳುಹಿಸಿದನು. ತಿಂಗಳು ತಿಂಗಳಿಗೂ ನೇಮಕದ ಪ್ರಕಾರ, ಹತ್ತು ಸಾವಿರ ಜನರನ್ನು ಕಳುಹಿಸಿದನು. ಅವರು ಒಂದು ತಿಂಗಳು ಲೆಬನೋನಿನಲ್ಲಿದ್ದು, ಎರಡು ತಿಂಗಳು ತಮ್ಮ ಮನೆಗಳಲ್ಲಿದ್ದರು. ಅದೋನೀರಾಮನು ಆಳುಗಳ ಮೇಲೆ ಯಜಮಾನನಾಗಿದ್ದನು. 15 ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು. 16 ಇದರ ಹೊರತಾಗಿ ಸೊಲೊಮೋನನ ಮುಖ್ಯವಾದ ಅಧಿಪತಿಗಳು ಕೆಲಸದ ಮೇಲೆ ಇದ್ದರು. ಕೆಲಸ ಮಾಡುವ ಜನರ ಮೇಲೆ ಮೂರು ಸಾವಿರದ ಮುನ್ನೂರು ಮೇಸ್ತ್ರಿಗಳಿದ್ದರು. 17 ಅರಸನು ಆಜ್ಞಾಪಿಸಿದ್ದರಿಂದ ದೊಡ್ಡ ಕಲ್ಲುಗಳನ್ನೂ, ಬೆಲೆಯುಳ್ಳ ಕಲ್ಲುಗಳನ್ನೂ ದೇವಾಲಯ ಅಸ್ತಿವಾರವನ್ನು ಹಾಕಲು ಕೆತ್ತಿದ ಕಲ್ಲುಗಳನ್ನು ತಂದರು. 18 ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.
<- 1 ಅರಸುಗಳು 41 ಅರಸುಗಳು 6 ->