1 ದೇವರ ನಾಮವೂ ನಮ್ಮ ಬೋಧನೆಯೂ ದೂಷಣೆಗೆ ಗುರಿಯಾಗದಂತೆ ದಾಸತ್ವದ ನೊಗ ಹೊತ್ತಿರುವವರು ತಮ್ಮ ಸ್ವಂತ ಯಜಮಾನರನ್ನು ಪೂರ್ಣ ಗೌರವಕ್ಕೆ ಯೋಗ್ಯರೆಂದೆಣಿಸಲಿ. 2 ವಿಶ್ವಾಸಿಗಳಾದ ಯಜಮಾನರಿರುವವರು ಆ ಯಜಮಾನರು ಸಹೋದರನಾಗಿರುವುದರಿಂದ ಅವರನ್ನು ತಾತ್ಸಾರ ಮಾಡದಿರಲಿ. ಏಕೆಂದರೆ ತಮ್ಮ ಸೇವೆಯಿಂದ ಲಾಭ ಹೊಂದುವವರು ವಿಶ್ವಾಸಿಗಳು ಮತ್ತು ತಮಗೆ ಪ್ರಿಯರಾಗಿದ್ದಾರೆ ಎಂದು ತಿಳಿದು ಅವರಿಗೆ ಉತ್ತಮ ಸೇವೆಮಾಡಲಿ. ಇವುಗಳನ್ನು ಅವರಿಗೆ ಬೋಧಿಸಿ ಎಚ್ಚರಿಸು.
6 ಸಂತೃಪ್ತಿಯೊಂದಿಗಿರುವ ದೇವಭಕ್ತಿಯೇ ದೊಡ್ಡ ಲಾಭವು. 7 ನಾವು ಲೋಕದೊಳಗೆ ಏನನ್ನೂ ತೆಗೆದುಕೊಂಡು ಬರಲಿಲ್ಲ. ಅದರೊಳಗಿಂದ ಏನೂ ತೆಗೆದುಕೊಂಡು ಹೋಗಲಾರೆವು. 8 ಆದರೆ ಅನ್ನವಸ್ತ್ರಗಳು ನಮಗಿರುವುದಾದರೆ, ನಾವು ಅದರಲ್ಲಿ ತೃಪ್ತರಾಗಿರೋಣ. 9 ಆದರೆ ಐಶ್ವರ್ಯವಂತರಾಗಬೇಕೆಂದು ಬಯಸುವವರು ಶೋಧನೆಯಲ್ಲಿಯೂ ಉರುಲಿನಲ್ಲಿಯೂ ಬಿದ್ದು ಅನೇಕ ಬುದ್ಧಿಹೀನವಾದ ಹಾಗೂ ಹಾನಿಕರವಾದ ಆಶೆಗಳಲ್ಲಿ ಬೀಳುತ್ತಾರೆ. ಇಂಥ ಆಶೆಗಳು ಮನುಷ್ಯರನ್ನು ಸಂಹಾರ ವಿನಾಶನಗಳಲ್ಲಿ ಮುಳುಗಿಸುತ್ತವೆ. 10 ಹಣದ ಪ್ರೀತಿಯು ಸಕಲ ವಿಧವಾದ ಕೆಟ್ಟತನಕ್ಕೆ ಬೇರಾಗಿದೆ. ಕೆಲವರು ಹಣಕ್ಕಾಗಿ ಆತುರಪಟ್ಟು ನಂಬಿಕೆಯಿಂದ ದೂರಹೋಗಿ ಅನೇಕ ದುಃಖಗಳಿಂದ ತಮ್ಮನ್ನು ತಿವಿಸಿಕೊಳ್ಳುತ್ತಾರೆ.
17 ಈ ಲೋಕದಲ್ಲಿ ಅಹಂಕಾರಿಗಳಾಗಿರದೆ, ಅಸ್ತಿರವಾದ ಐಶ್ವರ್ಯದ ಮೇಲೆ ನಿರೀಕ್ಷೆಯನ್ನಿಡದೆ ನಮ್ಮ ಸುಖಕ್ಕೋಸ್ಕರ ಎಲ್ಲವನ್ನೂ ಸಮೃದ್ಧಿಯಾಗಿ ದಯಪಾಲಿಸುವ ದೇವರ ಮೇಲೆ ನಿರೀಕ್ಷೆಯನ್ನಿಡಬೇಕೆಂದು ಐಶ್ವರ್ಯವಂತರಿಗೆ ಆಜ್ಞಾಪಿಸು. 18 ಅಂಥವರು ಒಳ್ಳೆಯದನ್ನು ಮಾಡುವವರೂ ಸತ್ಕಾರ್ಯಗಳಲ್ಲಿ ಐಶ್ವರ್ಯವಂತರೂ ಪಾಲು ಕೊಡುವುದರಲ್ಲಿ ಸಿದ್ಧರಾಗಿರುವವರೂ ಪರೋಪಕಾರ ಮಾಡುವವರೂ ಆಗಿರಬೇಕೆಂದು ಅವರನ್ನು ಪ್ರಬೋಧಿಸು. 19 ಹೀಗೆ ಮುಂದಿನ ಕಾಲಕ್ಕೆ ಯಥಾರ್ಥ ಜೀವವಾಗಿರುವ ನಿತ್ಯಜೀವವನ್ನು ಹಿಡಿದುಕೊಳ್ಳುವಂತೆ ತಮಗೋಸ್ಕರ ಸ್ಥಿರವಾದ ಅಸ್ತಿವಾರಕ್ಕಾಗಿ ನಿಕ್ಷೇಪಗಳನ್ನು ಕೂಡಿಸಿಟ್ಟುಕೊಳ್ಳಲಿ.
20 ತಿಮೊಥೆಯನೇ, ನಿನ್ನ ವಶಕ್ಕೆ ಕೊಟ್ಟಿರುವುದನ್ನು ಕಾಪಾಡು. ದೇವಭಕ್ತಿಗೆ ಅನುಗುಣವಾಗದ ಹರಟೆ ಮಾತುಗಳಿಗೂ ಜ್ಞಾನದಿಂದ ವಿಚಾರಪಡಿಸುವ ಸುಳ್ಳು ತರ್ಕಗಳಿಗೂ ಒಳಪಡದಿರು. 21 ಕೆಲವರು ಇಂಥವುಗಳಿಗೆ ಒಳಪಟ್ಟು ನಂಬಿಕೆಯಿಂದ ಗುರಿತಪ್ಪಿ ಹೋಗಿದ್ದಾರೆ.