Link to home pageLanguagesLink to all Bible versions on this site
3
ಸೊಲೊಮೋನನು ದೇವಾಲಯವನ್ನು ಕಟ್ಟಿಸಿದ್ದು
1 ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು. 2 ತನ್ನ ಆಳಿಕೆಯ ನಾಲ್ಕನೆಯ ವರ್ಷದ ಎರಡನೆಯ ತಿಂಗಳಿನ ಎರಡನೆಯ ದಿವಸದಲ್ಲಿ ಕಟ್ಟುವುದಕ್ಕೆ ಆರಂಭಿಸಿದನು.

3 ದೇವರ ಆಲಯವನ್ನು ಕಟ್ಟುವುದಕ್ಕೆ ಸೊಲೊಮೋನನು ಹಾಕಿಸಿದ ಅಸ್ತಿವಾರಗಳು ಏನೆಂದರೆ ಮೊದಲಿನ ಅಳತೆಯ ಪ್ರಕಾರವಾಗಿ ಅದರ ಉದ್ದ ಸುಮಾರು 27 ಮೀಟರ್ ಮತ್ತು ಅದರ ಅಗಲ 9 ಮೀಟರ್; 4 ಮುಂದೆ ಇರುವ ದ್ವಾರಾಂಗಳ ಆಲಯದ ಅಗಲದ ಪ್ರಕಾರ ಸುಮಾರು 9 ಮೀಟರ್ ಉದ್ದವಾಗಿತ್ತು; 54 ಮೀಟರ್ ಎತ್ತರವಾಗಿತ್ತು.

ಅವನು ಅದನ್ನು ಒಳಗಡೆ ಶುದ್ಧ ಬಂಗಾರದಿಂದ ಹೊದಿಸಿದನು. 5 ಅವನು ದೊಡ್ಡ ತುರಾಯಿ ಮರಗಳಿಂದ ಮುಚ್ಚಿದ ಕೋಣೆಯನ್ನು ಶುದ್ಧ ಬಂಗಾರದಿಂದ ಹೊದಿಸಿ, ಅದರ ಮೇಲೆ ಖರ್ಜೂರದ ಗಿಡಗಳನ್ನೂ, ಸರಪಣಿಗಳನ್ನೂ ಕೆತ್ತಿಸಿದನು. 6 ಇದಲ್ಲದೆ ಸೌಂದರ್ಯದ ನಿಮಿತ್ತವಾಗಿ ಅಮೂಲ್ಯವಾದ ರತ್ನಗಳಿಂದ ಆ ಆಲಯವನ್ನು ಮುಚ್ಚಿದನು. ಅದರ ಬಂಗಾರವು ಪರ್ವಯಿಮ್ ದೇಶದ್ದು. 7 ಆಲಯದ ತೊಲೆಗಳನ್ನೂ, ಸ್ತಂಭಗಳನ್ನೂ, ಗೋಡೆಗಳನ್ನೂ, ಬಾಗಿಲುಗಳನ್ನೂ, ಅವನು ಬಂಗಾರದಿಂದ ಹೊದಿಸಿ, ಗೋಡೆಗಳ ಮೇಲೆ ಕೆರೂಬಿಗಳನ್ನೂ ಕೆತ್ತಿಸಿದನು.

8 ಅವನು ಮಹಾಪರಿಶುದ್ಧವಾದ ಸ್ಥಳವನ್ನು ಕಟ್ಟಿದನು. ಅದರ ಉದ್ದವು ಆಲಯದ ಅಗಲದ ಪ್ರಕಾರ 9 ಮೀಟರ್; ಅದರ ಅಗಲ 9 ಮೀಟರ್. ಅವನು ಅದನ್ನು 20,000 ಕಿಲೋಗ್ರಾಂ ಶುದ್ಧ ಬಂಗಾರದಿಂದ ಹೊದಿಸಿದನು. 9 ಅದರ ಮೊಳೆಗಳು ಐನೂರ ಎಪ್ಪತ್ತು ಕಿಲೋಗ್ರಾಂಗಳ ತೂಕ ಬಂಗಾರದ್ದಾಗಿತ್ತು. ಹಾಗೆಯೇ ಮೇಲಿನ ಕೊಠಡಿಗಳನ್ನು ಬಂಗಾರದಿಂದ ಹೊದಿಸಿದನು.

10 ಮಹಾಪರಿಶುದ್ಧವಾದ ಸ್ಥಳದಲ್ಲಿ ಎರಡು ಕೆರೂಬಿಗಳನ್ನು ಮಾಡಿಸಿ, ಬಂಗಾರದಿಂದ ಅವುಗಳನ್ನು ಹೊದಿಸಿದನು. 11 ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದವಾಗಿದ್ದವು. ಒಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಮತ್ತೊಂದು ರೆಕ್ಕೆ ಎರಡೂವರೆ ಮೀಟರ್ ಉದ್ದವಾಗಿದ್ದು, ಇನ್ನೊಂದು ಕೆರೂಬಿಯ ರೆಕ್ಕೆಯವರೆಗೂ ಮುಟ್ಟಿತ್ತು. 12 ಹಾಗೆಯೇ ಮತ್ತೊಂದು ಕೆರೂಬಿಯ ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಆಲಯದ ಗೋಡೆಯವರೆಗೆ ಮುಟ್ಟಿತ್ತು; ಇನ್ನೊಂದು ರೆಕ್ಕೆಯು ಎರಡೂವರೆ ಮೀಟರ್ ಉದ್ದವಾಗಿದ್ದು, ಬೇರೆ ಇರುವ ಕೆರೂಬಿಯ ರೆಕ್ಕೆಗೆ ಕೂಡಿಕೊಂಡಿತ್ತು. 13 ಈ ಕೆರೂಬಿಗಳ ರೆಕ್ಕೆಗಳು 9 ಮೀಟರ್ ಉದ್ದಕ್ಕೆ ಚಾಚಿಕೊಂಡವು. ಅವು ತಮ್ಮ ಕಾಲುಗಳ ಮೇಲೆ ನಿಂತವು. ಅವುಗಳ ಮುಖಗಳು ಒಳಗಡೆಯಾಗಿದ್ದವು.

14 ಪರದೆಯನ್ನು ನೀಲಿ, ಧೂಮ್ರ, ರಕ್ತವರ್ಣದ ದಾರದಿಂದ ಮತ್ತು ನಯವಾದ ಹೊಸೆದ ನಾರಿನಿಂದ ಮಾಡಿಸಿ, ಅದರಲ್ಲಿ ಕೆರೂಬಿಗಳುಳ್ಳದ್ದನ್ನಾಗಿ ಮಾಡಿಸಿದನು.

15 ಇದಲ್ಲದೆ ಅವನು ಕಟ್ಟಡದ ಪ್ರವೇಶದ್ವಾರದಲ್ಲಿ ಎರಡು ಸ್ತಂಭಗಳನ್ನು ನಿರ್ಮಿಸಿದನು, ಪ್ರತಿಯೊಂದೂ ಹದಿನೈದು ಮೀಟರ್ ಎಪ್ಪತ್ತೈದು ಸೆಂಟಿಮೀಟರ್ ಎತ್ತರ, ಪ್ರತಿಯೊಂದರ ಮೇಲೆಯೂ ನಿರ್ಮಿಸಲಾದ ಪ್ರತಿಯೊಂದು ತಲೆಗಳು ಎರಡೂವರೆ ಮೀಟರ್ ಉದ್ದವಿತ್ತು. 16 ಗರ್ಭಗುಡಿಯಲ್ಲಿ ಸರಪಣಿಗಳಂತೆ ಮಾಡಿ, ಸ್ತಂಭಗಳ ತುದಿಗಳ ಮೇಲೆ ಇಟ್ಟು, ನೂರು ದಾಳಿಂಬೆ ಹಣ್ಣುಗಳನ್ನು ಮಾಡಿ, ಸರಪಣಿಗಳ ಮೇಲೆ ಇರಿಸಿದನು. 17 ಆ ಸ್ತಂಭಗಳನ್ನು ಮಂದಿರದ ಮುಂಭಾಗದಲ್ಲಿ ಒಂದನ್ನು ಬಲಗಡೆಯಲ್ಲಿಯೂ, ಇನ್ನೊಂದನ್ನು ಎಡಗಡೆಯಲ್ಲಿಯೂ ನಿಲ್ಲಿಸಿದನು. ಬಲಗಡೆಯಲ್ಲಿ ನಿಲ್ಲಿಸಿದ ಸ್ತಂಭಕ್ಕೆ ಯಾಕೀನ್*ಯಾಕೀನ್ ಎಂದರೆ ಅವನು ಸ್ಥಾಪಿಸುವನು ಎಂದೂ, ಎಡಗಡೆಯ ಸ್ತಂಭಕ್ಕೆ ಬೋವಾಜ್ಬೋವಾಜ್ ಎಂದರೆ ಅವನಲ್ಲಿ ಶಕ್ತಿ ಇದೆ. ಎಂದೂ ಹೆಸರಿಟ್ಟನು.

<- 2 ಪೂರ್ವಕಾಲ ವೃತ್ತಾಂತ 22 ಪೂರ್ವಕಾಲ ವೃತ್ತಾಂತ 4 ->