5 ಹಿಜ್ಕೀಯನು ಇಸ್ರಾಯೇಲಿನ ಯೆಹೋವ ದೇವರಲ್ಲಿ ಭರವಸೆವುಳ್ಳವನಾಗಿದ್ದನು. ಅವನಿಗೆ ಮುಂಚೆ ಇದ್ದವರಲ್ಲಿಯೂ, ಅವನ ತರುವಾಯ ಯೆಹೂದದ ಸಮಸ್ತ ಅರಸುಗಳಲ್ಲಿಯೂ ಅವನ ಹಾಗೆ ಒಬ್ಬರೂ ಇರಲಿಲ್ಲ. 6 ಅವನು ಯೆಹೋವ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟುಬಿಡದೆ, ದೇವರನ್ನೇ ಆತುಕೊಂಡು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಆಜ್ಞೆಗಳನ್ನು ಕೈಗೊಂಡನು. 7 ಯೆಹೋವ ದೇವರು ಅವನ ಸಂಗಡ ಇದ್ದರು. ಹಿಜ್ಕೀಯನು ಯಾವ ಕಡೆಗೆ ಹೋದರೂ ಅವನಿಗೆ ಸಫಲವಾಯಿತು. ಅವನು ಅಸ್ಸೀರಿಯದ ಅರಸನನ್ನು ಸೇವಿಸದೆ, ಅವನ ಮೇಲೆ ತಿರುಗಿಬಿದ್ದನು. 8 ಅವರು ಕಾವಲು ಗೋಪುರದಿಂದ ಕೋಟೆಯುಳ್ಳ ಪಟ್ಟಣಗಳವರೆಗೂ ಫಿಲಿಷ್ಟಿಯರನ್ನು ಗಾಜಪ್ರಾಂತ್ಯದವರೆಗೆ ಸಂಹರಿಸಿದನು.
9 ಇಸ್ರಾಯೇಲಿನ ಅರಸನಾದ ಏಲನ ಮಗ ಹೋಶೇಯನ ಆಳ್ವಿಕೆಯ ಏಳನೆಯ ವರ್ಷ, ಹಿಜ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಶಲ್ಮನೆಸೆರನು ಸಮಾರ್ಯಕ್ಕೆ ವಿರೋಧವಾಗಿ ಬಂದು ಅದಕ್ಕೆ ಮುತ್ತಿಗೆಹಾಕಿದನು. 10 ಮೂರು ವರ್ಷದ ತರುವಾಯ ಸಮಾರ್ಯವನ್ನು ಅಸ್ಸೀರಿಯದವರು ಸ್ವಾಧೀನಮಾಡಿಕೊಂಡರು. ಇಸ್ರಾಯೇಲಿನ ಅರಸನಾದ ಹೋಶೇಯನ ಒಂಬತ್ತನೆಯ ವರ್ಷವಾದ, ಹಿಜ್ಕೀಯನ ಆರನೆಯ ವರ್ಷದಲ್ಲಿ ಸಮಾರ್ಯವು ಸ್ವಾಧೀನವಾಯಿತು. 11 ಅಸ್ಸೀರಿಯದ ಅರಸನು ಇಸ್ರಾಯೇಲರನ್ನು ಅಸ್ಸೀರಿಯ ದೇಶಕ್ಕೆ ಸೆರೆಯಾಗಿ ಒಯ್ದು ಹಲಹ ಪ್ರಾಂತದಲ್ಲಿಯೂ, ಹಾಬೋರ್ ನದಿಯಿರುವ ಗೋಜಾನ್ ಪ್ರಾಂತದಲ್ಲಿಯೂ ಮತ್ತು ಮೇದ್ಯರ ಪಟ್ಟಣಗಳಲ್ಲಿಯೂ ಇರಿಸಿದನು. 12 ಏಕೆಂದರೆ ಅವರು ತಮ್ಮ ದೇವರಾದ ಯೆಹೋವ ದೇವರ ಮಾತನ್ನು ಕೇಳದೆ, ಅವರ ಒಡಂಬಡಿಕೆಯನ್ನೂ, ಯೆಹೋವ ದೇವರ ಸೇವಕನಾದ ಮೋಶೆಯು ಆಜ್ಞಾಪಿಸಿದ್ದ ಸಮಸ್ತವನ್ನೂ ಮೀರಿದರು. ಅವರು ದೇವರ ಆಜ್ಞೆಗಳಿಗೆ ಕಿವಿಗೊಡಲಿಲ್ಲ, ಅವುಗಳಂತೆ ನಡೆಯಲಿಲ್ಲ.
13 ಅರಸನಾದ ಹಿಜ್ಕೀಯನ ಆಳಿಕೆಯ ಹದಿನಾಲ್ಕನೆಯ ವರ್ಷದಲ್ಲಿ ಅಸ್ಸೀರಿಯದ ಅರಸನಾದ ಸನ್ಹೇರೀಬನು ಬಂದು, ಯೆಹೂದದ ಎಲ್ಲಾ ಕೋಟೆಯ ಪಟ್ಟಣಗಳನ್ನು ಸ್ವಾಧೀನಮಾಡಿಕೊಂಡನು. 14 ಆಗ ಯೆಹೂದದ ಅರಸನಾದ ಹಿಜ್ಕೀಯನು ಲಾಕೀಷಿನಲ್ಲಿದ್ದ ಅಸ್ಸೀರಿಯದ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನಾನು ತಪ್ಪು ಮಾಡಿದ್ದೇನೆ. ನನ್ನನ್ನು ಬಿಟ್ಟು ಹಿಂದಿರುಗಿ ಹೋಗು. ನೀನು ನನ್ನ ಮೇಲೆ ವಿಧಿಸುವುದನ್ನು ನಾನು ಕೊಡುತ್ತೇನೆ,” ಎಂದು ಹೇಳಿ ಕಳುಹಿಸಿದನು. ಆಗ ಅಸ್ಸೀರಿಯದ ಅರಸನು ಯೆಹೂದದ ಅರಸನಾದ ಹಿಜ್ಕೀಯನು ಹತ್ತು ಸಾವಿರ ಕಿಲೋಗ್ರಾಂ ಬೆಳ್ಳಿಯನ್ನೂ, ಒಂದು ಸಾವಿರ ಕಿಲೋಗ್ರಾಂ ಬಂಗಾರವನ್ನೂ ಕೊಡಬೇಕೆಂದು ನೇಮಕಮಾಡಿದನು. 15 ಆದ್ದರಿಂದ ಹಿಜ್ಕೀಯನು ಯೆಹೋವ ದೇವರ ಆಲಯದಲ್ಲಿಯೂ, ಅರಸನ ಮನೆಯ ಬೊಕ್ಕಸಗಳಲ್ಲಿಯೂ, ಸಿಕ್ಕಿದ ಸಮಸ್ತ ಬೆಳ್ಳಿಯನ್ನೂ ಕೊಟ್ಟನು.
16 ಈ ಸಮಯದಲ್ಲಿ ಯೆಹೂದದ ಅರಸನಾದ ಹಿಜ್ಕೀಯನು, ಯೆಹೋವ ದೇವರ ಮಂದಿರದ ಕದಗಳ ಮೇಲೆಯೂ, ಸ್ತಂಭಗಳ ಮೇಲೆಯೂ ತಾನು ಹೊದಿಸಿದ್ದ ಬಂಗಾರವನ್ನೂ ಕತ್ತರಿಸಿ, ಅಸ್ಸೀರಿಯದ ಅರಸನಿಗೆ ಕೊಟ್ಟನು.
19 ರಬ್ಷಾಕೆಯು ಅವರಿಗೆ, “ನೀವು ಹಿಜ್ಕೀಯನಿಗೆ ಹೀಗೆ ಹೇಳಬೇಕು:
26 ಆಗ ಹಿಲ್ಕೀಯನ ಮಗ ಎಲ್ಯಾಕೀಮ್, ಶೆಬ್ನ, ಯೋವ ಎಂಬುವರು ರಬ್ಷಾಕೆಗೆ, “ನೀನು ಮಾತನಾಡುವುದು ಗೋಡೆಯ ಮೇಲಿರುವವರಿಗೆ ಕೇಳಿಸುತ್ತದೆ ಆದ್ದರಿಂದ ದಯವಿಟ್ಟು ನಿನ್ನ ಸೇವಕರಾದ ನಮ್ಮೊಡನೆ ಅರಾಮ್ಯ ಭಾಷೆಯಲ್ಲಿ ಮಾತನಾಡು: ಅದು ನಮಗೆ ತಿಳಿಯುತ್ತದೆ ಆದರೆ ಹಿಬ್ರಿಯ ಭಾಷೆಯಲ್ಲಿ ಮಾತನಾಡಬೇಡ,” ಎಂದು ಹೇಳಿದರು.
27 ಆದರೆ ರಬ್ಷಾಕೆಯು ಅವರಿಗೆ, “ನನ್ನ ಯಜಮಾನನು ನಿಮ್ಮ ಸಂಗಡವಾಗಲಿ, ನಿಮ್ಮ ಯಜಮಾನನ ಸಂಗಡವಾಗಲಿ ಮಾತ್ರ ಈ ಮಾತುಗಳನ್ನು ಹೇಳುವುದಕ್ಕೆ ಕಳುಹಿಸಲಿಲ್ಲ. ಈ ಗೋಡೆಯ ಮೇಲೆ ಕುಳಿತ ಜನರ ಸಂಗಡವೂ ಮಾತನಾಡುವುದಕ್ಕಾಗಿ ಕಳುಹಿಸಿದ್ದಾರೆ. ಈ ಜನರು ನಿಮ್ಮ ಸಂಗಡ ಇದ್ದರೆ ನಿಮ್ಮ ಹಾಗೆ ಇವರೂ ಸಹ ತಮ್ಮ ಸ್ವಂತ ಮಲಮೂತ್ರವನ್ನು ತಿಂದು ಕುಡಿಯಬೇಕಾಗುತ್ತದೆ,” ಎಂದು ಹೇಳಿದನು.
28 ಆಗ ರಬ್ಷಾಕೆ ನಿಂತುಕೊಂಡು ಯೆಹೂದ್ಯರ ಭಾಷೆಯಾದ ಹಿಬ್ರಿಯದಲ್ಲಿ ಗಟ್ಟಿಯಾದ ಶಬ್ದದಿಂದ ಕೂಗಿ ಹೇಳಿದ್ದೇನೆಂದರೆ, “ನೀವು ಅಸ್ಸೀರಿಯದ ಮಹಾರಾಜನ ಮಾತನ್ನು ಕೇಳಿರಿ. 29 ಅರಸನು ಹೇಳುವುದೇನೆಂದರೆ: ಹಿಜ್ಕೀಯನ ಮಾತನ್ನು ಕೇಳಿ ಮೋಸಹೋಗಬೇಡಿರಿ. ಏಕೆಂದರೆ ಅವನು ನನ್ನ ಕೈಯಿಂದ ನಿಮ್ಮನ್ನು ಬಿಡಿಸಲು ಶಕ್ತನಲ್ಲ. 30 ಇದಲ್ಲದೆ, ‘ಯೆಹೋವ ದೇವರು ನಮ್ಮನ್ನು ನಿಶ್ಚಯವಾಗಿ ರಕ್ಷಿಸುವರು, ಈ ಪಟ್ಟಣವು ಅಸ್ಸೀರಿಯದ ಅರಸನ ಕೈಯಲ್ಲಿ ಒಪ್ಪಿಸುವುದಿಲ್ಲ,’ ಎಂದು ಹೇಳಿ, ಹಿಜ್ಕೀಯನು ನಿಮಗೆ ಯೆಹೋವ ದೇವರಲ್ಲಿ ಭರವಸೆ ಇಡುವಂತೆ ಮಾಡುವನು.
31 “ಹಿಜ್ಕೀಯನ ಮಾತುಗಳಿಗೆ ಕಿವಿಗೊಡಬೇಡಿರಿ. ಏಕೆಂದರೆ ಅಸ್ಸೀರಿಯದ ಅರಸನು ಹೇಳುವುದೇನೆಂದರೆ: ನನ್ನ ಸಂಗಡ ಒಡಂಬಡಿಕೆ ಮಾಡಿಕೊಂಡು, ನನ್ನ ಬಳಿಗೆ ಹೊರಟುಬನ್ನಿರಿ, ಆಗ ನಿಮ್ಮಲ್ಲಿ ಪ್ರತಿ ಮನುಷ್ಯನು ತನ್ನ ತನ್ನ ದ್ರಾಕ್ಷಾಫಲವನ್ನೂ, ಅಂಜೂರದ ಫಲವನ್ನೂ ತಿಂದು ತನ್ನ ತನ್ನ ಬಾವಿಯ ನೀರನ್ನು ಕುಡಿಯುವನು. 32 ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ.
36 ಆದರೆ ಜನರು ಅವನಿಗೆ ಪ್ರತ್ಯುತ್ತರ ಕೊಡದೆ ಸುಮ್ಮನಿದ್ದರು. ಏಕೆಂದರೆ ಅವನಿಗೆ ಉತ್ತರ ಕೊಡಬೇಡಿರೆಂದು ಅರಸನ ಆಜ್ಞೆಯಾಗಿತ್ತು.
37 ಆಗ ಅರಮನೆಯ ಮೇಲ್ವಿಚಾರಕನಾದ ಹಿಲ್ಕೀಯನ ಮಗ ಎಲ್ಯಾಕೀಮನೂ, ಕಾರ್ಯದರ್ಶಿಯಾದ ಶೆಬ್ನನೂ, ದಾಖಲೆಗಾರನಾದ ಆಸಾಫನ ಮಗ ಯೋವ ಎಂಬವನೂ ತಮ್ಮ ಬಟ್ಟೆಗಳನ್ನು ಹರಿದುಕೊಂಡು ಹಿಜ್ಕೀಯನ ಬಳಿಗೆ ಬಂದು ಸೈನ್ಯಾಧಿಕಾರಿಯಾದ ರಬ್ಷಾಕೆ ಹೇಳಿದ ಮಾತುಗಳನ್ನು ಅವನಿಗೆ ತಿಳಿಸಿದರು.
<- 2 ಅರಸುಗಳು 172 ಅರಸುಗಳು 19 ->- a ಅಬೀಯಾ ಹೀಬ್ರೂ ಭಾಷೆಯಲ್ಲಿ ಅಬೀ