2 ಅರಸನು ಚೀಬನಿಗೆ, “ಇವು ಏಕೆ,” ಎಂದನು.
3 ಆಗ ಅರಸನು ಅವನನ್ನು, “ನಿನ್ನ ಯಜಮಾನನ ಪುತ್ರನು ಎಲ್ಲಿದ್ದಾನೆ?” ಎಂದು ಕೇಳಿದನು.
4 ಆಗ ಅರಸನು ಚೀಬನಿಗೆ, “ಇಗೋ, ಮೆಫೀಬೋಶೆತನಿಗೆ ಉಂಟಾದದ್ದೆಲ್ಲವೂ ನಿನಗುಂಟಾಯಿತು,” ಎಂದನು.
9 ಆಗ ಚೆರೂಯಳ ಮಗ ಅಬೀಷೈಯನು ಅರಸನಿಗೆ, “ಈ ಸತ್ತ ನಾಯಿ, ಅರಸನಾದ ನನ್ನ ಒಡೆಯನನ್ನು ದೂಷಿಸುವುದೇನು? ನಾನು ದಾಟಿ ಹೋಗಿ ಅವನ ತಲೆಯನ್ನು ತೆಗೆದುಕೊಳ್ಳಲು ಅಪ್ಪಣೆ ಆಗಲಿ,” ಎಂದನು.
10 ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.
11 ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ. 12 ಒಂದು ವೇಳೆ ಯೆಹೋವ ದೇವರು ನನ್ನ ಕಷ್ಟವನ್ನು ಕಂಡು, ಈ ದಿನದಲ್ಲಿ ಅವನು ಮಾಡಿದ ಶಾಪಕ್ಕೆ ಪ್ರತಿಯಾಗಿ, ನನಗೆ ಒಳ್ಳೆಯದನ್ನು ಮಾಡಬಹುದು,” ಎಂದನು.
13 ದಾವೀದನೂ, ಅವನ ಸೇವಕರೂ ಹಾದಿ ಹಿಡಿದು ಹೋಗುವಾಗ, ಶಿಮ್ಮಿ ಬೆಟ್ಟದ ಓರೆಯಲ್ಲಿ ಬಂದು, ಅವನಿಗೆದುರಾಗಿ ನಡೆದನು. ಅವನು ದಾವೀದನನ್ನು ದೂಷಿಸಿ, ಮಣ್ಣನ್ನು ತೂರಿ, ಕಲ್ಲುಗಳನ್ನು ದಾವೀದನ ಮೇಲೆ ಎಸೆದನು. 14 ಅರಸನೂ, ಅವನ ಸಂಗಡದಲ್ಲಿರುವ ಸಮಸ್ತ ಜನರೂ ನಡೆದು ದಣಿದಿದ್ದರಿಂದ ಅಲ್ಲಿ ವಿಶ್ರಮಿಸಿಕೊಂಡರು.
17 ಆಗ ಅಬ್ಷಾಲೋಮನು ಹೂಷೈಯಿಗೆ, “ಸ್ನೇಹಿತನ ಮೇಲೆ ನಿನಗಿದ್ದ ಪ್ರೀತಿ ಇಷ್ಟೇಯೇನು? ನೀನು ನಿನ್ನ ಸ್ನೇಹಿತನ ಸಂಗಡ ಏಕೆ ಹೋಗಲಿಲ್ಲ,” ಎಂದನು.
18 ಹೂಷೈ ಅಬ್ಷಾಲೋಮನಿಗೆ, “ಹಾಗಲ್ಲ, ಯೆಹೋವ ದೇವರು ಈ ಜನರೂ, ಇಸ್ರಾಯೇಲಿನ ಸಮಸ್ತ ಮನುಷ್ಯರೂ ಯಾರನ್ನು ಆಯ್ದುಕೊಳ್ಳುವರೋ, ನಾನೂ ಅವನ ಪಕ್ಷದವನಾಗಿರುವೆನು. ನಾನು ಅವನ ಬಳಿಯಲ್ಲಿ ಇರುವೆನು. 19 ಇದಲ್ಲದೆ ನಾನು ಯಾರನ್ನು ಸೇವಿಸತಕ್ಕದ್ದು? ಅವನ ಮಗನ ಸಮ್ಮುಖದಲ್ಲಿ ಅಲ್ಲವೇ? ನಾನು ನಿನ್ನ ತಂದೆಯ ಸಮ್ಮುಖದಲ್ಲಿ ಹೇಗೆ ಸೇವಿಸಿದೆನೋ ಹಾಗೆಯೇ ನಿನ್ನ ಸಮ್ಮುಖದಲ್ಲಿ ಇರುವೆನು,” ಎಂದನು.
20 ಆಗ ಅಬ್ಷಾಲೋಮನು ಅಹೀತೋಫೆಲನಿಗೆ, “ನಾವು ಮಾಡಬೇಕಾದದ್ದನ್ನು ನೀವು ಯೋಚನೆ ಮಾಡಿ ಹೇಳಿರಿ,” ಎಂದನು.
21 ಅಹೀತೋಫೆಲನು ಅಬ್ಷಾಲೋಮನಿಗೆ, “ಮನೆಗೆ ಕಾವಲಿಟ್ಟ ನಿನ್ನ ತಂದೆಯ ಉಪಪತ್ನಿಯರ ಸಂಗಡ ಮಲಗು; ಆಗ ನಿನ್ನ ತಂದೆ ನಿನ್ನನ್ನು ತನ್ನ ಶತ್ರುವನ್ನಾಗಿ ಮಾಡಿದನೆಂದು ಎಲ್ಲ ಇಸ್ರಾಯೇಲರಿಗೆ ತಿಳಿಯುವುದು. ಆಗ ನಿನ್ನ ಜನರ ಕೈಗಳೂ ಬಲವಾಗುವುವು,” ಎಂದನು. 22 ಹಾಗೆಯೇ ಅವರು ಅಬ್ಷಾಲೋಮನ ಮನೆಯ ಮೇಲೆ ಡೇರೆ ಹಾಕಿದರು. ಅಲ್ಲಿ ಅಬ್ಷಾಲೋಮನು ಸಮಸ್ತ ಇಸ್ರಾಯೇಲರ ಕಣ್ಣುಗಳ ಮುಂದೆ ತನ್ನ ತಂದೆಯ ಉಪಪತ್ನಿಗಳ ಸಂಗಡ ಮಲಗಿದನು.
23 ಆ ದಿವಸಗಳಲ್ಲಿ ಅಹೀತೋಫೆಲನು ತಿಳಿಸಿದ ಆಲೋಚನೆಯು ದೇವರನ್ನು ವಿಚಾರಿಸುವ ಹಾಗೆ ಇತ್ತು. ಅಹೀತೋಫೆಲನ ಆಲೋಚನೆಗಳನ್ನು ದಾವೀದನೂ, ಅಬ್ಷಾಲೋಮನೂ ಹಾಗೆಯೇ ಗೌರವಿಸುತ್ತಿದ್ದರು.
<- 2 ಸಮುಯೇಲ 152 ಸಮುಯೇಲ 17 ->