1 ಸ್ವದೇಶದವನ ಎತ್ತಾಗಲಿ, ಕುರಿಯಾಗಲಿ ದಾರಿತಪ್ಪಿ ಹೋಗಿರುವುದನ್ನು ನೀವು ಕಂಡರೆ, ಕಾಣದವರಂತೆ ಅದನ್ನು ಬಿಟ್ಟುಹೋಗಬಾರದು. ಅವನ ಬಳಿಗೆ ಅಟ್ಟಿಕೊಂಡು ಹೋಗಿ ಕೊಡಲೇಬೇಕು. 2 ಅವನು ನಿಮಗೆ ದೂರ ಆಗಿದ್ದರೆ, ಇಲ್ಲವೆ ಅವನು ಯಾರು ಎಂದು ನಿಮಗೆ ತಿಳಿಯದೆ ಹೋದರೆ, ಆ ಪ್ರಾಣಿಯನ್ನು ನಿಮ್ಮ ಮನೆಗೆ ಹೊಡೆದುಕೊಂಡು ಬಂದು ಕಾಯಬೇಕು. ಅವನು ಅದನ್ನು ಹುಡುಕುತ್ತಾ ಬಂದಾಗ, ನೀವು ಅದನ್ನು ಅವನಿಗೆ ಮರಳಿ ಕೊಡಬೇಕು. 3 ಅವನ ಕತ್ತೆಯಾಗಲಿ, ಅವನ ವಸ್ತ್ರವಾಗಲಿ, ನಿನ್ನ ಸಹೋದರನು ಕಳೆದುಕೊಂಡ ಯಾವ ವಸ್ತುಗಳೇ ಆಗಲಿ ನೀನು ಕಂಡುಕೊಂಡರೆ, ಹಾಗೆಯೇ ಮಾಡಬೇಕು. ನೀನು ಕಾಣದವರಂತೆ ಇರಬಾರದು.
4 ನಿನ್ನ ಸಹೋದರನ ಕತ್ತೆಯಾಗಲಿ, ಎತ್ತಾಗಲಿ, ಮಾರ್ಗದಲ್ಲಿ ಬಿದ್ದಿರುವುದನ್ನು ನೋಡಿದರೆ ಅಲಕ್ಷ್ಯ ಮಾಡಬೇಡ. ಅದನ್ನು ಎಬ್ಬಿಸಲು ಅವನಿಗೆ ಸಹಾಯಮಾಡಬೇಕು.
5 ಸ್ತ್ರೀಯು ಪುರುಷನ ವಸ್ತ್ರ ಉಟ್ಟುಕೊಳ್ಳಬಾರದು, ಪುರುಷನು ಸ್ತ್ರೀ ವಸ್ತ್ರ ಹಾಕಿಕೊಳ್ಳಬಾರದು. ಏಕೆಂದರೆ ಹೀಗೆ ಮಾಡುವವರೆಲ್ಲ ಯೆಹೋವ ದೇವರಿಗೆ ಅಸಹ್ಯ.
6 ನೀನು ದಾರಿಯಲ್ಲಿ ಯಾವುದಾದರೊಂದು ಗಿಡದಲ್ಲಾಗಲಿ, ನೆಲದ ಮೇಲಾಗಲಿ, ನಿನಗೆ ಮರಿಗಳುಳ್ಳ ಇಲ್ಲವೆ ಮೊಟ್ಟೆಗಳುಳ್ಳ ಪಕ್ಷಿಯ ಗೂಡು ಸಿಕ್ಕಿದರೆ, ಮರಿಗಳ ಮೇಲೆಯಾಗಲಿ, ಮೊಟ್ಟೆಗಳ ಮೇಲೆಯಾಗಲಿ ತಾಯಿ ಕೂತುಕೊಂಡಿದ್ದರೆ, ಮರಿಗಳ ಸಂಗಡ ತಾಯಿಯನ್ನು ತೆಗೆದುಕೊಳ್ಳಬಾರದು. 7 ನಿನಗೆ ಒಳ್ಳೆಯದಾಗುವ ಹಾಗೆಯೂ ಬಹುಕಾಲ ಬಾಳುವ ಹಾಗೆಯೂ ಹೇಗಾದರೂ ತಾಯಿಯನ್ನು ಕಳುಹಿಸಿಬಿಟ್ಟು, ಮರಿಗಳನ್ನು ತೆಗೆದುಕೊಳ್ಳಬಹುದು.
8 ನೀನು ಹೊಸ ಮನೆಯನ್ನು ಕಟ್ಟಿದಾಗ, ಯಾರೂ ಅದರ ಮೇಲಿನಿಂದ ಬಿದ್ದು ನಿನ್ನ ಮನೆಗೆ ರಕ್ತಾಪರಾಧ ಹೊರಿಸದ ಹಾಗೆ ನಿನ್ನ ಮಾಳಿಗೆಯ ಮೇಲೆ ಸುತ್ತಲೂ ಸಣ್ಣ ಕೈಗೋಡೆಯನ್ನು ಕಟ್ಟಬೇಕು.
9 ನಿನ್ನ ದ್ರಾಕ್ಷಿತೋಟದಲ್ಲಿ ಎರಡು ತರವಾದ ಬೀಜ ಬಿತ್ತಬಾರದು; ಬಿತ್ತಿದರೆ ನೀನು ಬಿತ್ತಿದ ಬೀಜವೂ, ಬಿತ್ತಿದ ಬೀಜದ ಪೈರೂ, ದ್ರಾಕ್ಷಿತೋಟದ ಹುಟ್ಟುವಳಿಯೂ ಅಶುದ್ಧವಾಗುವುದು.
10 ಎತ್ತನ್ನೂ, ಕತ್ತೆಯನ್ನೂ ಜೊತೆ ಮಾಡಿ, ನೇಗಿಲಿಗೆ ಕಟ್ಟಬಾರದು.
11 ನಾರು ಮತ್ತು ಉಣ್ಣೆ ಎರಡೂ ಕೂಡಿರುವ ಬಟ್ಟೆಯನ್ನೂ ಧರಿಸಬಾರದು.
12 ನೀನು ಹೊದ್ದುಕೊಳ್ಳುವ ಬಟ್ಟೆಯ ನಾಲ್ಕು ಮೂಲೆಗಳಿಗೆ ಗೊಂಡೆಗಳನ್ನು ಮಾಡಿಸಿಕೊಳ್ಳಬೇಕು.
20 ಆದರೆ ಆ ಮಾತು ಸತ್ಯವಾಗಿದ್ದರೆ, ಆ ಹುಡುಗಿಯಲ್ಲಿ ಕನ್ಯಾಲಕ್ಷಣ ಕಾಣದೆ ಇದ್ದರೆ, 21 ಆ ಹುಡುಗಿಯನ್ನು ಅವಳ ತಂದೆಯ ಮನೆ ಬಾಗಿಲಿಗೆ ತರಬೇಕು. ಅವಳ ಪಟ್ಟಣದ ಮನುಷ್ಯರು ಅವಳನ್ನು ಸಾಯುವ ಹಾಗೆ ಕಲ್ಲೆಸೆಯಬೇಕು. ಏಕೆಂದರೆ ಅವಳು ತಂದೆಯ ಮನೆಯಲ್ಲಿರುವಾಗಲೇ ಅಕ್ರಮವಾಗಿ ನಡೆದು, ಇಸ್ರಾಯೇಲಿನಲ್ಲಿ ಸೂಳೆತನ ಮಾಡಿದ್ದಾಳೆ. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಿಂದ ತೆಗೆದುಹಾಕಬೇಕು.
22 ಒಬ್ಬ ಮನುಷ್ಯನು ಪರನ ಹೆಂಡತಿಯೊಡನೆ ಮಲಗಿಕೊಂಡವನಾಗಿ ಸಿಕ್ಕಿಬಿದ್ದರೆ, ಆ ಸ್ತ್ರೀಯ ಸಂಗಡ ಮಲಗಿಕೊಂಡ ಮನುಷ್ಯನೂ ಆ ಸ್ತ್ರೀಯೂ ಇಬ್ಬರೂ ಸಾಯಬೇಕು. ಹೀಗೆ ಕೆಟ್ಟದ್ದನ್ನು ಇಸ್ರಾಯೇಲಿನಿಂದ ತೆಗೆದುಹಾಕಬೇಕು.
23 ಕನ್ನಿಕೆಯಾದ ಒಬ್ಬ ಹುಡುಗಿ ಒಬ್ಬ ಮನುಷ್ಯನಿಗೆ ನಿಶ್ಚಯ ಮಾಡಿರಲಾಗಿ, ಮತ್ತೊಬ್ಬ ಮನುಷ್ಯನು ಆ ಪಟ್ಟಣದಲ್ಲಿ ಅವಳನ್ನು ಕಂಡು ಅವಳ ಸಂಗಡ ಮಲಗಿದರೆ, 24 ಅವರಿಬ್ಬರನ್ನೂ ಆ ಪಟ್ಟಣದ ಬಾಗಿಲಿನ ಹೊರಗೆ ತಂದು, ಅವರು ಸಾಯುವ ಹಾಗೆ ಕಲ್ಲೆಸೆಯಬೇಕು. ಆ ಹುಡುಗಿಯು ಪಟ್ಟಣದಲ್ಲಿ ಇದ್ದರೂ, ಕೂಗದೆ ಇದ್ದದ್ದರಿಂದಲೂ, ಆ ಮನುಷ್ಯನು ತನ್ನ ನೆರೆಯವನ ಹೆಂಡತಿಯನ್ನು ಕೆಡಿಸಿದ್ದರಿಂದಲೂ ಅವರನ್ನು ಸಾಯಿಸಬೇಕು. ಹೀಗೆ ಕೆಟ್ಟದ್ದನ್ನು ನಿಮ್ಮ ಮಧ್ಯದಲ್ಲಿಂದ ತೆಗೆದುಹಾಕಬೇಕು.
25 ಆದರೆ ಆ ಮನುಷ್ಯನು ನಿಶ್ಚಯಮಾಡಿದ ಹುಡುಗಿಯನ್ನು ಹೊಲದಲ್ಲಿ ಕಂಡು ಅವಳನ್ನು ಬಲಾತ್ಕರಿಸಿ, ಅವಳ ಸಂಗಡ ಮಲಗಿದರೆ, ಅವಳ ಸಂಗಡ ಮಲಗಿದ ಮನುಷ್ಯನು ಮಾತ್ರ ಸಾಯಬೇಕು. ಆದರೆ ಆ ಹುಡುಗಿಗೆ ಏನೂ ಮಾಡಬಾರದು. 26 ಆ ಹುಡುಗಿಯಲ್ಲಿ ಮರಣಕ್ಕೆ ಯೋಗ್ಯವಾದ ಪಾಪವಿಲ್ಲ. ಆ ಕಾರ್ಯವು ಒಬ್ಬನು ತನ್ನ ನೆರೆಯವನಿಗೆ ವಿರೋಧವಾಗಿ ಎದ್ದು ಅವನನ್ನು ಕೊಂದುಹಾಕಿದ ಹಾಗಿದೆ. 27 ಏಕೆಂದರೆ ಅವನು ಹೊಲದಲ್ಲಿ ಅವಳನ್ನು ಕಂಡನು, ನಿಶ್ಚಯಮಾಡಿದ ಆ ಹುಡುಗಿ ಕೂಗಿದಳು. ಆದರೆ ರಕ್ಷಿಸುವವನು ಅವಳಿಗೆ ಯಾರೂ ಇರಲಿಲ್ಲ.
28 ಒಬ್ಬ ಮನುಷ್ಯನು ನಿಶ್ಚಯ ಮಾಡದಿರುವ ಕನ್ಯೆಯನ್ನು ಕಂಡು, ಅವಳನ್ನು ಹಿಡಿದು, ಅವಳ ಸಂಗಡ ಮಲಗಿ ಸಿಕ್ಕಿಬಿದ್ದರೆ, 29 ಅವಳ ಸಂಗಡ ಮಲಗಿದ ಮನುಷ್ಯನು ಆ ಹುಡುಗಿಯ ತಂದೆಗೆ ಐವತ್ತು ಬೆಳ್ಳಿ ಶೆಕೆಲ್‌ಗಳನ್ನು[b] ಕೊಟ್ಟು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬೇಕು, ಏಕೆಂದರೆ ಅವನು ಅವಳನ್ನು ಕೆಡಿಸಿದ್ದರಿಂದ, ಬದುಕುವ ದಿವಸಗಳೆಲ್ಲಾ ಅವಳನ್ನು ಪರಿತ್ಯಾಗಮಾಡಬಾರದು.
30 ಯಾರೂ ತನ್ನ ತಂದೆಯ ಹೆಂಡತಿಯನ್ನು ಮದುವೆ ಮಾಡಿಕೊಳ್ಳಬಾರದು. ತನ್ನ ತಂದೆಯ ಹಾಸಿಗೆಯನ್ನು ಅಗೌರವಿಸಬಾರದು.
<- ಧರ್ಮೋಪದೇಶಕಾಂಡ 21ಧರ್ಮೋಪದೇಶಕಾಂಡ 23 ->