5 ಯೆಹೋವ ದೇವರ ಮಾತಿನ ಹಾಗೆ ಅವರ ದಾಸನಾದ ಮೋಶೆಯು ಅಲ್ಲಿ ಮೋವಾಬಿನ ದೇಶದಲ್ಲಿ ಮರಣಹೊಂದಿದನು. 6 ದೇವರು ಅವನನ್ನು ಮೋವಾಬಿನ ದೇಶದ ಬೇತ್ ಪೆಗೋರಿಗೆ ಎದುರಾಗಿರುವ ಕಣಿವೆಯಲ್ಲಿ ಹೂಣಿಟ್ಟರು. ಆದರೆ ಅವನ ಸಮಾಧಿ ಎಲ್ಲಿದೆಯೆಂದು ಇಂದಿನವರೆಗೆ ಯಾರಿಗೂ ಗೊತ್ತಿಲ್ಲ. 7 ಮೋಶೆಯು ಸಾಯುವಾಗ ನೂರಿಪ್ಪತ್ತು ವರ್ಷದವನಾಗಿದ್ದನು. ಅವನ ಕಣ್ಣು ಮೊಬ್ಬಾಗಲಿಲ್ಲ. ಅವನ ಬಲ ಕುಂದಿಹೋಗಿರಲಿಲ್ಲ. 8 ಇಸ್ರಾಯೇಲರು ಮೋವಾಬಿನ ಬಯಲಿನಲ್ಲಿ ಮೋಶೆಯ ನಿಮಿತ್ತ ಮೂವತ್ತು ದಿವಸ ದುಃಖಿಸಿದರು. ಈ ಪ್ರಕಾರ ಮೋಶೆಯ ನಿಮಿತ್ತವಾದ ಸಂತಾಪದ ದಿವಸಗಳು ಮುಗಿದವು.
9 ಇದಲ್ಲದೆ ನೂನನ ಮಗ ಯೆಹೋಶುವನು ಜ್ಞಾನದ ಆತ್ಮದಿಂದ ತುಂಬಿದವನಾಗಿದ್ದನು. ಏಕೆಂದರೆ ಮೋಶೆ ಅವನ ಮೇಲೆ ತನ್ನ ಕೈಗಳನ್ನು ಇಟ್ಟಿದ್ದನು. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಇಸ್ರಾಯೇಲರು ಯೆಹೋಶುವನ ಮಾತು ಕೇಳಿದರು.
10 ಯೆಹೋವ ದೇವರ ಸಂಗಡ ಮುಖಾಮುಖಿಯಾಗಿ ಮಾತನಾಡುತ್ತಿದ್ದ ಮೋಶೆಯಂಥ ಪ್ರವಾದಿ ಇಸ್ರಾಯೇಲರಲ್ಲಿ ಮತ್ತೆ ಹುಟ್ಟಲೇ ಇಲ್ಲ. 11 ಈಜಿಪ್ಟಿನಲ್ಲಿ ಫರೋಹನ ಮುಂದೆಯೂ, ಅವನ ಎಲ್ಲಾ ಅಧಿಕಾರಿಗಳ ಮುಂದೆಯೂ, ಜನರ ಮುಂದೆಯೂ ಸೂಚಕಕಾರ್ಯಗಳನ್ನೂ, ಅದ್ಭುತಕಾರ್ಯಗಳನ್ನೂ ಮಾಡುವುದಕ್ಕೆ ಯೆಹೋವ ದೇವರು ಮೋಶೆಯನ್ನು ಕಳುಹಿಸಿದ್ದರು. 12 ಇಸ್ರಾಯೇಲರ ಮುಂದೆ ಮೋಶೆಯು ನಡೆಸಿದ ವಿಶೇಷವಾದ ಕಾರ್ಯಗಳನ್ನು ಮತ್ತು ಭುಜಪರಾಕ್ರಮವನ್ನು ಯಾರೂ ಎಂದೂ ತೋರಿಸಿರಲಿಲ್ಲ ಅಥವಾ ಮಾಡಿರಲ್ಲ.
<- ಧರ್ಮೋಪದೇಶಕಾಂಡ 33