9 ಹಾಗಾದರೆ, ಪ್ರಯಾಸ ಪಡುವುದರಲ್ಲಿ ದುಡಿಯುವವನಿಗೆ ಲಾಭವೇನಿದೆ? 10 ದೇವರು ಮಾನವ ಜನಾಂಗದ ಮೇಲೆ ಹೊರಿಸಿರುವ ಭಾರವನ್ನು ನಾನು ನೋಡಿದ್ದೇನೆ. 11 ದೇವರು ಪ್ರತಿಯೊಂದನ್ನು ತಮ್ಮ ಸೂಕ್ತ ಸಮಯದಲ್ಲಿ ಸುಂದರವಾಗಿ ನಿರ್ಮಿಸಿದ್ದಾರೆ. ಜನರ ಹೃದಯದಲ್ಲಿ ನಿತ್ಯತೆಯನ್ನು ದೇವರೇ ಇಟ್ಟಿದ್ದಾರೆ. ಆದರೂ ಆದಿಯಿಂದ ಅಂತ್ಯದವರೆಗೂ ದೇವರು ಏನು ಮಾಡಿದ್ದಾರೆಂದು ಯಾರಿಗೂ ಗ್ರಹಿಸಲು ಸಾಧ್ಯವಿಲ್ಲ. 12 ಜನರು ತಮ್ಮ ಜೀವಮಾನದಲ್ಲಿ ಸಂತೋಷವಾಗಿದ್ದು ಒಳ್ಳೆಯದನ್ನು ಮಾಡುವುದಕ್ಕಿಂತ ಉತ್ತಮವಾದದ್ದೇನೂ ಇಲ್ಲವೆಂದು ನಾನು ಬಲ್ಲೆನು. 13 ಇದಲ್ಲದೆ ಪ್ರತಿಯೊಬ್ಬನು ಅನ್ನಪಾನಗಳನ್ನು ಸೇವಿಸಿ, ತನ್ನ ಎಲ್ಲಾ ಪ್ರಯಾಸಗಳಲ್ಲಿ ಸುಖವನ್ನು ಅನುಭವಿಸುವುದು ದೇವರ ದಾನದಿಂದಲೇ. 14 ದೇವರು ಮಾಡುವ ಕಾರ್ಯವೆಲ್ಲವೂ ಶಾಶ್ವತವಾಗಿರುವುದೆಂದು ನಾನು ಬಲ್ಲೆನು; ಅದಕ್ಕೆ ಯಾವುದನ್ನೂ ಕೂಡಿಸಲಾಗದು ಮತ್ತು ಯಾವುದನ್ನೂ ತೆಗೆಯಲಾಗದು. ತಮ್ಮ ಸನ್ನಿಧಿಯಲ್ಲಿ ಮನುಷ್ಯರು ಭಯಭಕ್ತಿಯಿಂದ ಜೀವಿಸಬೇಕೆಂದು ದೇವರು ಇದನ್ನು ಮಾಡಿದ್ದಾರೆ.
16 ಇದಕ್ಕಿಂತಲೂ ಬೇರೆಯಾದದ್ದನ್ನು ಸೂರ್ಯನ ಕೆಳಗೆ ನೋಡಿದೆನು:
17 ನಾನು ನನ್ನ ಹೃದಯದಲ್ಲಿ ಹೀಗೆ ಅಂದುಕೊಂಡೆನು,
18 ಮತ್ತೆ ನನ್ನ ಮನಸ್ಸಿನಲ್ಲಿ ಯೋಚಿಸಿದೆ, “ಮನುಷ್ಯರು ಮೃಗಗಳಂತೆ ಇದ್ದಾರೆಂದು ತಿಳಿದುಕೊಳ್ಳಲು ದೇವರು ಅವರನ್ನು ಪರೀಕ್ಷಿಸುತ್ತಾರೆ. 19 ಏಕೆಂದರೆ ಮೃಗಗಳಿಗೆ ಸಂಭವಿಸುವುದು ಮನುಷ್ಯರಿಗೂ ಸಂಭವಿಸುತ್ತದೆ. ಇಬ್ಬರಿಗೂ ಒಂದೇ ಸಂಗತಿ ಸಂಭವಿಸುತ್ತದೆ. ಒಂದು ಹೇಗೆ ಸಾಯುತ್ತದೋ ಹಾಗೆ ಇನ್ನೊಂದೂ ಸಾಯುತ್ತದೆ. ಎಲ್ಲಕ್ಕೂ ಒಂದೇ ಪ್ರಾಣ ಇದೆ. ಆ ರೀತಿಯಲ್ಲಿ ಮೃಗಕ್ಕಿಂತ ಮನುಷ್ಯನಿಗೆ ಹೆಚ್ಚು ಶ್ರೇಷ್ಠತೆ ಇಲ್ಲ. ಎಲ್ಲವೂ ವ್ಯರ್ಥ. 20 ಎಲ್ಲವೂ ಒಂದೇ ಸ್ಥಳಕ್ಕೆ ಹೋಗುತ್ತವೆ. ಎಲ್ಲವೂ ಮಣ್ಣಿನಿಂದ ಆದವು. ಎಲ್ಲವೂ ಮಣ್ಣಿಗೆ ಸೇರುತ್ತವೆ. 21 ಮನುಷ್ಯನ ಆತ್ಮವು ಮೇಲಕ್ಕೆ ಹೋಗುತ್ತದೆ ಎಂದೂ ಮೃಗದ ಪ್ರಾಣವು ಭೂಮಿಯ ಕೆಳಗೆ ಹೋಗುತ್ತದೆಂದೂ ಯಾರು ತಿಳಿದಾರು?”
22 ಆದಕಾರಣ ಮನುಷ್ಯನು ತನ್ನ ಕೆಲಸ ಕಾರ್ಯಗಳಲ್ಲಿ ಆನಂದಿಸುವುದಕ್ಕಿಂತ ಉತ್ತಮವಾದದ್ದು ಯಾವುದೂ ಇಲ್ಲವೆಂದು ನಾನು ನೋಡಿದೆನು. ಏಕೆಂದರೆ ಇದೇ ಅವನ ಪಾಲು. ಆದ್ದರಿಂದ ತನ್ನ ಜೀವಮಾನದ ನಂತರ ಸಂಭವಿಸುವುದನ್ನು ನೋಡುವುದಕ್ಕೆ ಮನುಷ್ಯನನ್ನು ಯಾರು ಪುನಃ ಬರಮಾಡುವರು?
<- ಪ್ರಸಂಗಿ 2ಪ್ರಸಂಗಿ 4 ->