7 ನಮ್ಮಲ್ಲಿ ಪ್ರತಿಯೊಬ್ಬನಿಗೂ ಕ್ರಿಸ್ತ ಯೇಸುವು ನೀಡಿದ ಅಳತೆಗೆ ಅನುಸಾರವಾಗಿ ವರವನ್ನು ಕೊಡಲಾಗಿದೆ. 8 ಆದ್ದರಿಂದ ಪವಿತ್ರ ವೇದದಲ್ಲಿ ಹೀಗೆ ಹೇಳಲಾಗಿದೆ:
14 ಆಗ, ನಾವು ಚಿಕ್ಕಮಕ್ಕಳಂತೆ ಇರುವುದಿಲ್ಲ: ಮನುಷ್ಯರ ವಿವಿಧ ಬೋಧನೆಗಳಿಂದ ಗಾಳಿಯಿಂದ ತೂರಾಡಿಕೊಳ್ಳುವಂತಾಗುವುದಿಲ್ಲ. ಮನುಷ್ಯರ ಕುಯುಕ್ತಿಗೆ, ತಂತ್ರಕ್ಕೆ, ಒಳಸಂಚಿಗೆ ಒಳಗಾಗುವುದಿಲ್ಲ. ಅವರ ಪ್ರತಿಯೊಂದು ಬೋಧನೆಯ ಗಾಳಿಯಿಂದಲೂ ತೂರಾಡಿಕೊಂಡು ಅತ್ತಿತ್ತ ಅಲೆದಾಡುವ ಚಿಕ್ಕಮಕ್ಕಳಂತೆ ಇರಬಾರದು. 15 ಆದರೆ ಪ್ರೀತಿಯಲ್ಲಿ ಸತ್ಯವನ್ನು ಮಾತನಾಡುತ್ತಾ, ನಾವು ಎಲ್ಲಾ ವಿಷಯಗಳಲ್ಲಿಯೂ ಕ್ರಿಸ್ತನ ದೇಹದ ಪರಿಪಕ್ವತೆಯೆಡೆಗೆ ಅವರ ಶಿರಸತ್ವದಲ್ಲಿ ಬೆಳೆಯೋಣ. 16 ಹೀಗೆ ದೇಹವೆಲ್ಲಾ ಕ್ರಿಸ್ತನ ಮುಖಾಂತರ ಪ್ರತಿ ಕೀಲಿನಿಂದ ಬಿಗಿಯಾಗಿ ಜೋಡಣೆಹೊಂದಿ, ಪ್ರತಿ ಅಂಗವೂ ತನ್ನ ಕೆಲಸವನ್ನು ಸೂಕ್ತವಾಗಿ ಮಾಡುವಂತೆ ಪ್ರೀತಿಯಲ್ಲಿ ಬೆಳೆದು ಕ್ಷೇಮಾಭಿವೃದ್ಧಿ ಹೊಂದುತ್ತದೆ.
20 ನೀವಾದರೋ ಕ್ರಿಸ್ತನನ್ನು ಆ ರೀತಿಯಾಗಿ ಅರಿತುಕೊಳ್ಳಲಿಲ್ಲ. 21 ನೀವು ಕ್ರಿಸ್ತನ ಬಗ್ಗೆ ಕೇಳಿ ಬೋಧನೆಯನ್ನು ಪಡೆದಾಗ, ಅದು ಯೇಸುವಿನಲ್ಲಿರುವ ಸತ್ಯಕ್ಕೆ ಅನುಸಾರವಾಗಿತ್ತು. 22 ನಿಮಗೆ ಉಪದೇಶಿಸಿದಂತೆ, ನೀವು ನಿಮ್ಮ ಹಿಂದಿನ ನಡತೆಯ ಪ್ರಕಾರ ಮೋಸಕರವಾದ ಆಶೆಗಳ ಅನುಸಾರವಾಗಿರುವ ಹಳೆಯ ಸ್ವಭಾವವನ್ನು ತೆಗೆದುಹಾಕಬೇಕು. 23 ಹೀಗೆ ನೀವು ನಿಮ್ಮ ಮನೋಭಾವನೆಯನ್ನು ನವೀಕರಿಸಿಕೊಂಡು; 24 ಸತ್ಯವಾದ ನೀತಿಯಲ್ಲಿಯೂ ಪರಿಶುದ್ಧತೆಯಲ್ಲಿಯೂ ದೇವರ ಹೋಲಿಕೆಯ ಪ್ರಕಾರವಾಗಿರಲು ಸೃಷ್ಟಿಸಲಾದ ಹೊಸ ಸ್ವಭಾವವನ್ನು ಧರಿಸಿಕೊಳ್ಳಿರಿ.
25 ಆದಕಾರಣ ಸುಳ್ಳಾಡುವುದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ. ಏಕೆಂದರೆ ನಾವೆಲ್ಲರೂ ಒಂದೇ ದೇಹದ ಅಂಗಗಳು. 26 “ಕೋಪ ಮಾಡಬೇಕಾಗಿ ಬಂದರೂ ಪಾಪಮಾಡಬೇಡಿರಿ,”†ಕೀರ್ತನೆ 4:4 ಸೂರ್ಯನು ಮುಳುಗುವುದಕ್ಕಿಂತ ಮುಂಚೆ ನಿಮ್ಮ ಕೋಪವು ಇಳಿಯಲಿ. 27 ಹೀಗೆ ನೀವು ಸೈತಾನನಿಗೆ ಅವಕಾಶಕೊಡಬೇಡಿರಿ. 28 ಕಳ್ಳತನ ಮಾಡುವವನು ಇನ್ನು ಮೇಲೆ ಕಳ್ಳತನ ಮಾಡದೆ, ಕೈಯಿಂದ ಯಾವುದಾದರೊಂದು ಒಳ್ಳೆಯ ಉದ್ಯೋಗವನ್ನು ಮಾಡಿ ದುಡಿಯಲಿ. ಆಗ ಕೊರತೆಯಲ್ಲಿರುವವನಿಗೆ ಕೊಡುವುದಕ್ಕೆ ಅವನಿಂದಾಗುವುದು.
29 ನಿಮ್ಮ ಬಾಯೊಳಗಿಂದ ಯಾವ ಕೆಟ್ಟಮಾತೂ ಹೊರಡದಿರಲಿ. ಕೇಳುವವರಿಗೆ ಆತ್ಮಿಕ ಹಿತವನ್ನುಂಟು ಮಾಡಿ, ಇತರರಿಗೆ ಅವಶ್ಯವಿರುವ ಮಾತುಗಳನ್ನು ಮಾತ್ರ ಆಡಿರಿ. 30 ದೇವರ ಪವಿತ್ರಾತ್ಮರನ್ನು ದುಃಖ ಪಡಿಸಬೇಡಿರಿ. ಆ ಆತ್ಮನಲ್ಲಿಯೇ ವಿಮೋಚನೆಯ ದಿನಕ್ಕಾಗಿ ಮುದ್ರೆ ಹೊಂದಿದ್ದೀರಲ್ಲಾ. 31 ಎಲ್ಲಾ ಕಹಿತನ, ಕೋಪ, ಕ್ರೋಧ, ಕಲಹ, ದೂಷಣೆ ಇವುಗಳನ್ನೂ ಎಲ್ಲಾ ದುಷ್ಟತನವನ್ನೂ ನಿಮ್ಮಿಂದ ದೂರಮಾಡಿರಿ. 32 ನೀವು ದಯೆಯುಳ್ಳವರೂ ಮೃದು ಹೃದಯುಳ್ಳವರೂ ಆಗಿದ್ದು, ದೇವರು ಕ್ರಿಸ್ತನಲ್ಲಿ ನಿಮ್ಮನ್ನು ಕ್ಷಮಿಸಿದಂತೆಯೇ ನೀವು ಸಹ ಒಬ್ಬರೊನ್ನಬ್ಬರನ್ನು ಕ್ಷಮಿಸಿರಿ.
<- ಎಫೆಸದವರಿಗೆ 3ಎಫೆಸದವರಿಗೆ 5 ->