4 ಆಗ ಮೋಶೆಯು ಫರೋಹನಿಗೆ, “ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಸುಮಾರು ಮಧ್ಯರಾತ್ರಿಯಲ್ಲಿ ನಾನು ಈಜಿಪ್ಟಿನ ಮಧ್ಯದಲ್ಲಿ ಹಾದು ಹೋಗುವೆನು. 5 ಆಗ ಈಜಿಪ್ಟ್ ದೇಶದ ಚೊಚ್ಚಲ ಮಕ್ಕಳು ಅಂದರೆ, ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲ ಮಗನು ಮೊದಲುಗೊಂಡು ಬೀಸುವ ಕಲ್ಲನ್ನು ಹಿಡಿದಿರುವ ದಾಸಿಯ ಚೊಚ್ಚಲ ಮಗನವರೆಗೆ ಮತ್ತು ಪಶುಗಳಲ್ಲಿ ಚೊಚ್ಚಲಾದವುಗಳೆಲ್ಲವೂ ಸಾಯುವುವು. 6 ಈಜಿಪ್ಟ್ ದೇಶದಲ್ಲೆಲ್ಲಾ ದೊಡ್ಡ ಗೋಳಾಟವಿರುವುದು. ಅಂಥಾ ಗೋಳಾಟವು ಹಿಂದೆಯೂ ಇರಲಿಲ್ಲ, ಇನ್ನು ಮುಂದೆಯೂ ಇರುವುದಿಲ್ಲ. 7 ಆದರೆ ಯೆಹೋವ ದೇವರು ಈಜಿಪ್ಟಿನವರಿಗೂ, ಇಸ್ರಾಯೇಲರಿಗೂ ಮಧ್ಯದಲ್ಲಿಟ್ಟಿರುವ ವ್ಯತ್ಯಾಸವನ್ನು ನೀವು ತಿಳುಕೊಳ್ಳುವಂತೆ, ಇಸ್ರಾಯೇಲಿನವರ ವಿರುದ್ಧ ಇಲ್ಲವೆ ಪ್ರಾಣಿಗಳ ವಿರುದ್ಧ ಒಂದು ನಾಯಿ ಸಹ ಬೊಗಳುವುದಿಲ್ಲ.’ 8 ಆಗ ನಿನ್ನ ದಾಸರಾದ ಇವರೆಲ್ಲರೂ ನನ್ನ ಬಳಿಗೆ ಬಂದು, ನನಗೆ ಅಡ್ಡಬಿದ್ದು, ನನಗೆ ನೀನೂ, ನಿನ್ನನ್ನು ಹಿಂಬಾಲಿಸುವ ಜನರೆಲ್ಲರೂ, ‘ಹೊರಗೆ ಹೋಗಿರಿ,’ ಎಂದು ಹೇಳುವರು. ತರುವಾಯ ನಾನು ಹೊರಗೆ ಹೋಗುವೆನು,” ಎಂದು ಹೇಳಿ ಮೋಶೆಯು ಕೋಪಾವೇಶವುಳ್ಳವನಾಗಿ ಫರೋಹನ ಬಳಿಯಿಂದ ಹೊರಟುಹೋದನು.
9 ಆದರೆ ಯೆಹೋವ ದೇವರು ಮೋಶೆಗೆ, “ನನ್ನ ಅದ್ಭುತಗಳು ಈಜಿಪ್ಟ್ ದೇಶದಲ್ಲಿ ಹೆಚ್ಚಾಗುವಂತೆ ಫರೋಹನು ನಿಮ್ಮ ಮಾತನ್ನು ಕೇಳುವುದಿಲ್ಲ,” ಎಂದರು. 10 ಈ ಅದ್ಭುತಗಳನ್ನೆಲ್ಲಾ ಮೋಶೆ ಆರೋನರು ಫರೋಹನ ಮುಂದೆ ಮಾಡಿದರು. ಆದರೆ ಯೆಹೋವ ದೇವರು ಫರೋಹನ ಹೃದಯವನ್ನು ಕಠಿಣ ಮಾಡಿದ್ದರಿಂದ, ಅವನು ಇಸ್ರಾಯೇಲರನ್ನು ತನ್ನ ದೇಶದೊಳಗಿಂದ ಕಳುಹಿಸಲಿಲ್ಲ.
<- ವಿಮೋಚನಕಾಂಡ 10ವಿಮೋಚನಕಾಂಡ 12 ->