2 “ಕೆಟ್ಟದ್ದನ್ನು ಮಾಡುವವರು ಬಹುಮಂದಿ ಆದರೂ ನೀವು ಅವರನ್ನು ಹಿಂಬಾಲಿಸಬೇಡ. ಬಹುಮಂದಿಯೊಂದಿಗೆ ನ್ಯಾಯಕ್ಕೆ ವಿರುದ್ಧವಾಗಿ ವ್ಯಾಜ್ಯದಲ್ಲಿ ಸಾಕ್ಷಿಕೊಡಬೇಡ. 3 ಬಡವನಿಗೂ ವ್ಯಾಜ್ಯದಲ್ಲಿ ಮುಖದಾಕ್ಷಿಣ್ಯ ಮಾಡಬೇಡ.
4 “ನೀವು ವೈರಿಯ ಎತ್ತಾಗಲಿ, ಕತ್ತೆಯಾಗಲಿ ತಪ್ಪಿಸಿಕೊಂಡು ಹೋಗುವಾಗ, ಅದು ನಿಮಗೆ ಸಿಕ್ಕಿದರೆ ನೀವು ಅದನ್ನು ಖಂಡಿತವಾಗಿ ತಿರುಗಿ ಅವನಿಗೆ ತಂದುಕೊಡಬೇಕು. 5 ನಿಮ್ಮನ್ನು ಹಗೆ ಮಾಡುವವನ ಕತ್ತೆಯು ತನ್ನ ಹೊರೆಯ ಕೆಳಗೆ ಬಿದ್ದಿರುವುದನ್ನು ನೀವು ಕಂಡಾಗ, ಅವನಿಗೆ ಸಹಾಯ ಮಾಡುವುದಕ್ಕೆ ಮನಸ್ಸಿಲ್ಲದಿದ್ದರೂ ನೀವು ಖಂಡಿತವಾಗಿ ಅವನಿಗೆ ಸಹಾಯಮಾಡಬೇಕು.
6 “ಬಡವನ ವ್ಯಾಜ್ಯದಲ್ಲಿ ನ್ಯಾಯವನ್ನು ತಪ್ಪಿಸಿ ತೀರ್ಪುಕೊಡಬಾರದು. 7 ಸುಳ್ಳಿನ ವಿಷಯಗಳಿಂದ ನೀವು ದೂರವಿರಬೇಕು. ನಿರಪರಾಧಿ, ನೀತಿವಂತ ಆದ ವ್ಯಕ್ತಿಗೆ ಮರಣದಂಡನೆ ವಿಧಿಸಬಾರದು. ಅಂಥ ದುಷ್ಕೃತ್ಯ ಮಾಡಿದವನಿಗೆ ನಾನು ಶಿಕ್ಷೆ ವಿಧಿಸದೆ ಬಿಡುವುದಿಲ್ಲ.
8 “ಲಂಚವನ್ನು ತೆಗೆದುಕೊಳ್ಳಬಾರದು. ಏಕೆಂದರೆ ಲಂಚವು ಜ್ಞಾನಿಗಳ ಕಣ್ಣುಗಳನ್ನು ಕುರುಡುಮಾಡಿ, ನಿರಪರಾಧಿಗೆ ದೊರಕಬೇಕಾದ ನ್ಯಾಯವನ್ನು ತಪ್ಪಿಸುತ್ತದೆ.
9 “ಪರದೇಶಿಯರನ್ನು ಪೀಡಿಸಬಾರದು. ಏಕೆಂದರೆ ಈಜಿಪ್ಟ್ ದೇಶದಲ್ಲಿ ನೀವೂ ಪರದೇಶಿಗಳಾದ್ದಿರಷ್ಟೇ, ಅಂಥವರ ಮನೋವ್ಯಥೆಯನ್ನು ನಿಮಗೆ ತಿಳಿದಿದೆ.
12 “ಆರು ದಿವಸ ನೀವು ನಿಮ್ಮ ಕೆಲಸಗಳನ್ನು ಮಾಡಬೇಕು. ಏಳನೆಯ ದಿನದಲ್ಲಿ ನೀವು, ನಿಮ್ಮ ಎತ್ತು ಮತ್ತು ನಿಮ್ಮ ಕತ್ತೆ ವಿಶ್ರಮಿಸಿಕೊಳ್ಳಬೇಕು. ಇದಲ್ಲದೆ ನಿಮ್ಮ ಮನೆಯಲ್ಲಿ ಜನಿಸಿದ ದಾಸದಾಸಿಯರೂ ಪರದೇಶಸ್ಥರೂ ದಣಿವು ಆರಿಸಿಕೊಳ್ಳಲಿ.
13 “ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಜಾಗರೂಕತೆಯಿಂದ ಕೈಗೊಳ್ಳಬೇಕು. ಬೇರೆ ದೇವರುಗಳ ಹೆಸರನ್ನು ಎತ್ತಬೇಡ. ಅದನ್ನು ಉಚ್ಚರಿಸಲೂ ಬೇಡ.
15 “ಹುಳಿಯಿಲ್ಲದ ರೊಟ್ಟಿಗಳ ಹಬ್ಬವನ್ನು ಆಚರಿಸಬೇಕು. ಅಬೀಬ ತಿಂಗಳಿನ ನೇಮಕವಾದ ಸಮಯದಲ್ಲಿ ಏಳು ದಿನಗಳವರೆಗೆ ನಾನು ನಿಮಗೆ ಆಜ್ಞಾಪಿಸಿದ ಪ್ರಕಾರ ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಏಕೆಂದರೆ ನೀವು ಆ ತಿಂಗಳಲ್ಲೇ ಈಜಿಪ್ಟಿನಿಂದ ಹೊರಗೆ ಬಂದಿದ್ದೀರಿ.
16 “ನೀವು ಬಿತ್ತಿದ ಹೊಲದಲ್ಲಿ ಪ್ರಥಮ ಫಲವು ದೊರೆತಾಗ ಸುಗ್ಗಿ ಹಬ್ಬವನ್ನು ಆಚರಿಸಬೇಕು.
17 “ವರ್ಷಕ್ಕೆ ಮೂರು ಸಾರಿ ನಿಮ್ಮಲ್ಲಿರುವ ಪುರುಷರೆಲ್ಲಾ ಸಾರ್ವಭೌಮ ಯೆಹೋವ ದೇವರ ಸನ್ನಿಧಿಯಲ್ಲಿ ಕಾಣಿಸಿಕೊಳ್ಳಬೇಕು.
18 “ಬಲಿ ಅರ್ಪಣೆಯ ರಕ್ತವನ್ನು ಹುಳಿಯಿರುವ ರೊಟ್ಟಿಯ ಸಂಗಡ ಅರ್ಪಿಸಬಾರದು.
19 “ನಿಮ್ಮ ಭೂಮಿಯ ಪ್ರಥಮ ಫಲಗಳಲ್ಲಿ ಅತ್ಯುತ್ತಮವಾದದ್ದನ್ನು ನಿಮ್ಮ ಯೆಹೋವ ದೇವರ ಆಲಯಕ್ಕೆ ತರಬೇಕು.
27 “ನೀವು ಹೋಗುವ ಎಲ್ಲ ಜಾಗಗಳಲ್ಲಿಯೂ ನನ್ನ ಮೇಲಿನ ಭೀತಿಯನ್ನು ನಿಮ್ಮನ್ನು ಎದುರಿಸುವ ಜನರಲ್ಲಿ ಉಂಟುಮಾಡಿಸಿ, ಕಳವಳವನ್ನು ಉಂಟುಮಾಡುವೆನು ಮತ್ತು ನಿಮ್ಮನ್ನು ವಿರೋಧಿಸುವವರೆಲ್ಲಾ ನಿಮಗೆ ಬೆನ್ನು ತೋರಿಸುವಂತೆ ಮಾಡುವೆನು. 28 ಹಿವ್ವಿಯರು, ಕಾನಾನ್ಯರು ಮತ್ತು ಹಿತ್ತಿಯರೂ ನಿಮ್ಮ ಎದುರಿನಿಂದ ಓಡಿಹೋಗುವಂತೆ ಕಡಜದ ಹುಳಗಳನ್ನು ನಿಮ್ಮ ಮುಂದೆ ಕಳಹಿಸುವೆನು. 29 ಭೂಮಿಯು ಬರಿದಾಗದಂತೆಯೂ ಕಾಡುಮೃಗಗಳು ನಿಮ್ಮ ವಿರೋಧವಾಗಿ ಹೆಚ್ಚಾಗದ ಹಾಗೆಯೂ ಅವುಗಳನ್ನು ಒಂದೇ ವರ್ಷದಲ್ಲಿ ನಿಮ್ಮ ಎದುರಿನಿಂದ ಓಡಿಸದೆ 30 ನೀವು ಅಭಿವೃದ್ಧಿಯಾಗಿ ದೇಶವನ್ನು ಸ್ವತಂತ್ರಿಸಿಕೊಳ್ಳುವವರೆಗೆ ಸ್ವಲ್ಪ ಸ್ವಲ್ಪವಾಗಿ ಹೊರಡಿಸುತ್ತಿರುವೆನು.
31 “ಕೆಂಪು ಸಮುದ್ರದಿಂದ ಫಿಲಿಷ್ಟಿಯರ ಸಮುದ್ರದವರೆಗೆ‡ಅಥವಾ ಮೆಡಿಟರೇನಿಯನ್ ಸಮುದ್ರ ಮರುಭೂಮಿಯಿಂದ ನದಿಯವರೆಗೂ ನಿಮ್ಮ ಮೇರೆಗಳನ್ನು ನೇಮಿಸುವೆನು. ದೇಶದ ನಿವಾಸಿಗಳನ್ನು ನಿಮ್ಮ ಕೈಗಳಿಗೆ ಒಪ್ಪಿಸುವೆನು. ನೀವು ಅವರನ್ನು ನಿಮ್ಮ ಎದುರಿನಿಂದ ಓಡಿಸಿಬಿಡುವಿರಿ. 32 ಅವರ ಸಂಗಡ, ಅವರ ದೇವರುಗಳ ಸಂಗಡ ಯಾವ ಒಡಂಬಡಿಕೆಯನ್ನು ಮಾಡಿಕೊಳ್ಳಬಾರದು. 33 ನನಗೆ ವಿರೋಧವಾಗಿ ನೀವು ಪಾಪಮಾಡದಂತಾಗಬೇಕಾದರೆ, ಅವರು ನಿಮ್ಮ ದೇಶದಲ್ಲಿ ವಾಸವಾಗಿರಬಾರದು. ಏಕೆಂದರೆ ನೀವು ಅವರ ದೇವರುಗಳನ್ನು ಆರಾಧಿಸಿದರೆ ಅದು ನಿಮಗೆ ಖಂಡಿತವಾಗಿ ಉರುಲಾಗಿರುವುದು.”
<- ವಿಮೋಚನಕಾಂಡ 22ವಿಮೋಚನಕಾಂಡ 24 ->