4 ಜನರು ಈ ಕಠಿಣವಾದ ಮಾತುಗಳನ್ನು ಕೇಳಿದಾಗ ದುಃಖಪಟ್ಟರು. ಯಾರೂ ತಮ್ಮ ಆಭರಣಗಳನ್ನು ಧರಿಸಿಕೊಳ್ಳಲಿಲ್ಲ. 5 ಏಕೆಂದರೆ ಯೆಹೋವ ದೇವರು ಮೋಶೆಗೆ, “ಇಸ್ರಾಯೇಲರಿಗೆ ಹೀಗೆ ಹೇಳು: ‘ನೀವು ಆಜ್ಞೆಗಳನ್ನು ಪಾಲಿಸದ ಹಟಮಾರಿ ಜನರು. ನಾನು ಕ್ಷಣಮಾತ್ರವೂ ನಿಮ್ಮೊಡನೆ ಬಂದರೆ ನೀವು ನಿರ್ಮೂಲವಾಗಿಬಿಡುವಿರಿ. ಹೀಗಿರುವುದರಿಂದ ಈಗ ನಿಮ್ಮ ಆಭರಣಗಳನ್ನು ನಿಮ್ಮಿಂದ ತೆಗೆದುಬಿಡಿರಿ, ನಾನು ನಿಮಗೆ ಏನು ಮಾಡಬೇಕೆಂಬುದನ್ನು ತೀರ್ಮಾನಿಸುವೆನು’ ಎಂದು ಹೇಳು,” ಎಂದು ತಿಳಿಸಿದರು. 6 ಅದರಂತೆಯೇ ಇಸ್ರಾಯೇಲರು ಹೋರೇಬ್*ಸೀನಾಯಿ ಪರ್ವತಕ್ಕೆ ಇನ್ನೊಂದು ಹೆಸರು. ಬೆಟ್ಟದ ಬಳಿಯಲ್ಲಿ ತಮ್ಮ ಆಭರಣಗಳನ್ನು ತೆಗೆದುಬಿಟ್ಟರು.
14 ಆಗ ಯೆಹೋವ ದೇವರು, “ನನ್ನ ಪ್ರಸನ್ನತೆಯು ನಿನ್ನ ಸಂಗಡ ಹೋಗುವುದು. ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು,” ಎಂದರು.
15 ಮೋಶೆಯು ಅವರಿಗೆ, “ನಿಮ್ಮ ಪ್ರಸನ್ನತೆಯು ನಮ್ಮೊಂದಿಗೆ ಹೋಗದಿದ್ದರೆ ನಮ್ಮನ್ನು ಇಲ್ಲಿಂದ ಕರೆದುಕೊಂಡು ಹೋಗಬೇಡಿ. 16 ಏಕೆಂದರೆ ನನಗೂ ನಿಮ್ಮ ಜನರಿಗೂ ನಿಮ್ಮ ದೃಷ್ಟಿಯಲ್ಲಿ ದಯೆ ದೊರಕಿತೆಂದು ಯಾವುದರಿಂದ ತಿಳಿದುಬರುವುದು? ನೀವು ನನ್ನೊಂದಿಗೆ ಹೋಗುವುದರಿಂದಲ್ಲವೋ? ಹೀಗೆ ನಾನೂ ನಿಮ್ಮ ಜನರೂ ಭೂಮಿಯ ಮೇಲಿರುವ ಎಲ್ಲಾ ಜನರಿಂದ ಪ್ರತ್ಯೇಕವಾಗಿರುವೆವು,” ಎಂದನು.
17 ಅದಕ್ಕೆ ಯೆಹೋವ ದೇವರು ಮೋಶೆಗೆ, “ನೀನು ಆಡಿದ ಈ ಮಾತಿನಂತೆಯೇ ನಾನು ಇದನ್ನು ಮಾಡುತ್ತೇನೆ. ಏಕೆಂದರೆ ನನ್ನ ದೃಷ್ಟಿಯಲ್ಲಿ ನಿನಗೆ ದಯೆ ದೊರಕಿತು. ನಾನು ನಿನ್ನನ್ನು ನಿನ್ನ ಹೆಸರಿನಿಂದ ತಿಳಿದಿದ್ದೇನೆ,” ಎಂದರು.
18 ಆಗ ಮೋಶೆ, “ನಿಮ್ಮ ಮಹಿಮೆಯನ್ನು ನನಗೆ ತೋರಿಸಿ ಎಂದು ನಾನು ನಿಮ್ಮನ್ನು ಬೇಡಿಕೊಳ್ಳುತ್ತೇನೆ,” ಎಂದನು.
19 ಅದಕ್ಕೆ ಅವರು, “ನಾನು ನನ್ನ ಒಳ್ಳೆಯತನವನ್ನೆಲ್ಲಾ ನಿನ್ನ ಎದುರಿಗೆ ಹಾದು ಹೋಗ ಮಾಡಿ, ಯೆಹೋವ ದೇವರ ಹೆಸರನ್ನು ನಿನ್ನ ಮುಂದೆ ಪ್ರಕಟಮಾಡಿ, ಯಾವನ ಮೇಲೆ ನನ್ನ ಕರುಣೆ ಉಂಟೋ, ಅವನನ್ನು ಕರುಣಿಸುವೆನು. ಯಾವನ ಮೇಲೆ ನನ್ನ ಕನಿಕರವಿದೆಯೋ ಅವನನ್ನು ಕನಿಕರಿಸುವೆನು,” ಎಂದರು. 20 ಮತ್ತೆ ದೇವರು ಮೋಶೆಗೆ, “ನೀನು ನನ್ನ ಮುಖವನ್ನು ನೋಡಲಾರಿ. ಏಕೆಂದರೆ ಯಾವ ಮನುಷ್ಯನೂ ನನ್ನನ್ನು ನೋಡಿ ಬದುಕಿರಲಾರನು,” ಎಂದರು.
21 ಇದಲ್ಲದೆ ಯೆಹೋವ ದೇವರು, “ನನ್ನ ಬಳಿಯಲ್ಲಿ ಒಂದು ಸ್ಥಳವಿದೆ. ನೀನು ಬಂಡೆಯ ಮೇಲೆ ನಿಂತುಕೋ. 22 ಆಗ ನನ್ನ ಮಹಿಮೆಯು ಹಾದುಹೋಗುವಾಗ, ನಿನ್ನನ್ನು ಬಂಡೆಯ ಬಿರುಕಿನಲ್ಲಿ ನಿಲ್ಲಿಸಿ, ನಿನ್ನ ಮೇಲೆ ನನ್ನ ಕೈ ಮುಚ್ಚುವೆನು. 23 ತರುವಾಯ ನನ್ನ ಕೈಯನ್ನು ತೆಗೆದುಬಿಡುವೆನು. ಆಗ ನೀನು ನನ್ನ ಬೆನ್ನನ್ನು ನೋಡುವೆ, ಆದರೆ ನನ್ನ ಮುಖವು ನಿನಗೆ ಕಾಣಿಸುವುದಿಲ್ಲ,” ಎಂದರು.
<- ವಿಮೋಚನಕಾಂಡ 32ವಿಮೋಚನಕಾಂಡ 34 ->- a ಸೀನಾಯಿ ಪರ್ವತಕ್ಕೆ ಇನ್ನೊಂದು ಹೆಸರು.