4 ಅವರು ನನಗೆ ಹೇಳಿದ್ದೇನೆಂದರೆ, “ಈ ಎಲುಬುಗಳ ಮೇಲೆ ಪ್ರವಾದಿಸಿ, ಅವುಗಳಿಗೆ ಹೇಳು: ‘ಒಣಗಿದ ಎಲುಬುಗಳೇ, ನೀವು ಯೆಹೋವ ದೇವರ ವಾಕ್ಯವನ್ನು ಕೇಳಿರಿ, 5 ಸಾರ್ವಭೌಮ ಯೆಹೋವ ದೇವರು ಈ ಎಲುಬುಗಳಿಗೆ ಹೀಗೆ ಹೇಳುತ್ತಾರೆ: ಇಗೋ, ನಾನು ನಿಮ್ಮಲ್ಲಿ ಉಸಿರನ್ನು ಬರಮಾಡುತ್ತೇನೆ. ನೀವು ಬದುಕುವಿರಿ; 6 ನಾನು ನಿಮ್ಮ ಮೇಲೆ ನರಗಳನ್ನು ಹಬ್ಬಿಸಿ ಮಾಂಸವನ್ನು ತಂದು ಮತ್ತು ಚರ್ಮದಿಂದ ಮುಚ್ಚಿ ನಿಮ್ಮೊಳಗೆ ಉಸಿರನ್ನು ಕೊಟ್ಟು ಬದುಕಿಸುತ್ತೇನೆ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿಯುವಿರಿ.’ ”
7 ಅದರಂತೆ ನಾನು ಆಜ್ಞೆಯನ್ನು ಪಡೆದ ಪ್ರಕಾರ ಪ್ರವಾದಿಸಿದೆನು. ನಾನು ಪ್ರವಾದಿಸುವಾಗ ಅಲ್ಲಿ ಒಂದು ಶಬ್ದವಾಯಿತು. ಅದು ಕದಲುತ್ತಿತ್ತು, ಎಲುಬುಗಳೆಲ್ಲಾ ಒಂದುಗೂಡಿ ಎಲುಬಿಗೆ ಎಲುಬು ಸೇರಿಕೊಂಡಿತು. 8 ನಾನು ನೋಡಿದಾಗ, ನರಗಳು ಮತ್ತು ಮಾಂಸವು ಅವುಗಳ ಮೇಲೆ ಬಂದವು. ಅವುಗಳ ಮೇಲೆ ಚರ್ಮವು ಮುಚ್ಚಿಕೊಂಡಿತು. ಆದರೆ ಅವುಗಳಿಗೆ ಉಸಿರೇ ಇರಲಿಲ್ಲ.
9 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಉಸಿರಿನ ಕಡೆಗೆ ಪ್ರವಾದಿಸು, ಮನುಷ್ಯಪುತ್ರನೇ, ಆ ಉಸಿರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ಓ ಉಸಿರೇ, ನಾಲ್ಕು ದಿಕ್ಕುಗಳಿಂದ ಬಂದು ಈ ಹತಶರೀರಗಳು ಬದುಕುವಂತೆ ಅದರ ಮೇಲೆ ಊದು.’ ” 10 ನಾನು ಆತನ ಆಜ್ಞೆಯ ಹಾಗೆಯೇ ಪ್ರವಾದಿಸಿದೆನು, ಅವುಗಳಲ್ಲಿ ಉಸಿರು ಬಂತು. ಅವುಗಳಲ್ಲಿ ಪಾದದ ಮೇಲೆ ಅವುಗಳು ನಿಂತವು, ಅತ್ಯಂತ ಮಹಾಸೈನ್ಯವಾದವು.
11 ಆಮೇಲೆ ಆತನು ನನಗೆ ಹೇಳಿದ್ದೇನೆಂದರೆ, “ಮನುಷ್ಯಪುತ್ರನೇ, ಈ ಎಲುಬುಗಳು ಸಂಪೂರ್ಣ ಇಸ್ರಾಯೇಲ್ ಮನೆತನಗಳೇ. ಇಗೋ, ‘ನಮ್ಮ ಎಲುಬುಗಳು ಒಣಗಿಹೋದವು. ನಮ್ಮ ನಿರೀಕ್ಷೆಯು ಸಹ ಕಳೆದು ಹೋಗಿದೆ. ಸಂಪೂರ್ಣವಾಗಿ ನಾಶವಾದೆವು ಎಂದು ಅವರು ಹೇಳುವರು.’ 12 ಆದ್ದರಿಂದ ನೀನು ಪ್ರವಾದಿಸಿ ಅವರಿಗೆ ಹೇಳು, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನನ್ನ ಜನರೇ, ನಾನು ನಿಮ್ಮ ಸಮಾಧಿಗಳನ್ನು ತೆರೆಯುವೆನು ಮತ್ತು ಸಮಾಧಿಗಳಿಂದ ನೀವು ಹೊರಗೆ ಬರುವಂತೆ ಮಾಡುವೆನು. ಇಸ್ರಾಯೇಲ್ ದೇಶಕ್ಕೆ ನಿಮ್ಮನ್ನು ತರುವೆನು. 13 ನನ್ನ ಜನರೇ, ಯಾವಾಗ ನಾನು ನಿಮ್ಮ ಸಮಾಧಿಗಳನ್ನು ತೆರೆದು ಹೊರಗೆ ಬರಮಾಡುವೆನೋ ಆಗ ನಾನೇ ಯೆಹೋವ ದೇವರೆಂದು ನೀವು ತಿಳಿದುಕೊಳ್ಳುವಿರಿ. 14 ನನ್ನ ಆತ್ಮವನ್ನು ನಿಮ್ಮೊಳಗೆ ಇಟ್ಟಾಗ ನೀವು ಬದುಕುವಿರಿ ಮತ್ತು ನಾನು ನಿಮ್ಮನ್ನು ನಿಮ್ಮ ಸ್ವಂತ ದೇಶದಲ್ಲಿರಿಸುವೆನು; ಆಗ ಯೆಹೋವ ದೇವರಾದ ನಾನೇ ಇದನ್ನು ನುಡಿದು ನೆರವೇರಿಸಿದ್ದೇನೆ ಎಂದು ನೀವು ತಿಳಿಯುವಿರಿ, ಎಂದು ಯೆಹೋವ ದೇವರು ಹೇಳುತ್ತಾರೆ.’ ”
18 “ ‘ಇದರ ಅರ್ಥವೇನೆಂದು ನೀನು ನಮಗೆ ಹೇಳುವುದಿಲ್ಲವೋ?’ ಎಂದು ನಿನ್ನ ದೇಶದ ಜನರು ನಿನ್ನನ್ನು ಪ್ರಶ್ನಿಸುವಾಗ, 19 ನೀನು ಅವರಿಗೆ, ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ: ನಾನು ಎಫ್ರಾಯೀಮಿನ ಕೈಯಲ್ಲಿರುವ ಯೋಸೇಫನ ಕೋಲನ್ನೂ ಅವನ ಜೊತೆಗಾರರಾದ ಇಸ್ರಾಯೇಲರ ಗೋತ್ರಗಳನ್ನೂ ತೆಗೆದುಕೊಂಡು ಅವನ ಸಂಗಡ ಅಂದರೆ ಯೆಹೂದನ ಕೋಲಿನ ಸಂಗಡ ಸೇರಿಸಿ ಅವುಗಳನ್ನು ಒಂದೇ ಕೋಲನ್ನಾಗಿ ಮಾಡುವೆನು. ಅವರು ನನ್ನ ಕೈಯಲ್ಲಿ ಒಂದಾಗುವರು,’ ಎಂದು ಹೇಳು. 20 ನೀನು ಬರೆದ ಆ ಕೋಲುಗಳು ಅವರ ಕಣ್ಣುಗಳ ಮುಂದೆ ನಿನ್ನ ಕೈಯಲ್ಲಿ ಹಿಡಿದು ಅವರಿಗೆ ಹೇಳು: 21 ‘ಸಾರ್ವಭೌಮ ಯೆಹೋವ ದೇವರು ಹೀಗೆ ಹೇಳುತ್ತಾರೆ, ನಾನು ಇಸ್ರಾಯೇಲರನ್ನು ಅವರು ಹೋಗಿರುವ ಕಡೆಯಿಂದ ಒಂದುಗೂಡಿಸಿ ಅವರ ಸ್ವಂತ ದೇಶಕ್ಕೆ ತರುವೆನು. 22 ನಾನು ಅವರನ್ನು ಇಸ್ರಾಯೇಲ್ ಪರ್ವತಗಳಿರುವ ದೇಶದಲ್ಲಿ ಒಂದೇ ಜನಾಂಗವನ್ನಾಗಿ ಮಾಡುತ್ತೇನೆ. ಅವರೆಲ್ಲರಿಗೂ ಒಬ್ಬನೇ ಅರಸನಾಗಿರುವನು. ಇನ್ನು ಮೇಲೆ ಅವರು ಎರಡು ಜನಾಂಗದವರಾಗಿಯೂ, ಭಿನ್ನರಾಜ್ಯದವರಾಗಿಯೂ ಇರುವುದಿಲ್ಲ. 23 ಅವರು ಇನ್ನು ತಮ್ಮ ವಿಗ್ರಹಗಳಿಂದಲೂ ತಮ್ಮ ಅಸಹ್ಯ ವಸ್ತುಗಳಿಂದಲೂ ತಮ್ಮ ಅಕ್ರಮಗಳಿಂದಲೂ ಅಶುದ್ಧವಾಗುವುದಿಲ್ಲ. ಅವರ ಎಲ್ಲಾ ಪಾಪದ ಹಿಂಜಾರುವಿಕೆಯಿಂದಲೂ ನಾನು ಅವರನ್ನು ರಕ್ಷಿಸಿ, ಅವರನ್ನು ಶುದ್ಧಮಾಡುವೆನು. ಹೀಗೆ ಅವರು ನನ್ನ ಜನರಾಗಿರುವರು ನಾನು ಅವರಿಗೆ ದೇವರಾಗಿರುವೆನು.
24 “ ‘ನನ್ನ ಸೇವಕನಾದ ದಾವೀದನು ಅವರ ಮೇಲೆ ಅರಸನಾಗಿರುವನು. ಅವರೆಲ್ಲರಿಗೂ ಒಬ್ಬನೇ ಕುರುಬನಿರುವನು; ನನ್ನ ನ್ಯಾಯಗಳನ್ನು ಅನುಸರಿಸಿ, ನನ್ನ ನಿಯಮಗಳನ್ನು ಪಾಲಿಸುವಂತೆ ಮಾಡುವೆನು. 25 ನನ್ನ ಸೇವಕನಾದ ಯಾಕೋಬನಿಗೆ ನಾನು ಕೊಟ್ಟ ದೇಶದಲ್ಲಿ ನಿಮ್ಮ ಪಿತೃಗಳು ವಾಸಮಾಡಿದ ಆ ದೇಶದಲ್ಲಿಯೂ ಅವರೂ ಅವರ ಮಕ್ಕಳೂ ಮತ್ತು ಅವರ ಮೊಮ್ಮಕ್ಕಳೂ ಎಂದೆಂದಿಗೂ ಅಲ್ಲಿಯೇ ವಾಸಮಾಡುವರು; ನನ್ನ ಸೇವಕನಾದ ದಾವೀದನು ಎಂದೆಂದಿಗೂ ಅವರಿಗೆ ರಾಜಕುಮಾರನಾಗಿರುವನು. 26 ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು. 27 ನನ್ನ ಗುಡಾರವು ಸಹ ಅವರೊಂದಿಗಿರುವುದು. ನಾನು ಅವರ ದೇವರಾಗಿರುವೆನು ಮತ್ತು ಅವರು ನನ್ನ ಜನರಾಗಿರುವರು. 28 ನನ್ನ ಪರಿಶುದ್ಧ ಸ್ಥಳವು ಎಂದೆಂದಿಗೂ ಅವರ ಮಧ್ಯದೊಳಗಿರುವಾಗ, ಯೆಹೋವ ದೇವರಾದ ನಾನೇ ಇಸ್ರಾಯೇಲರನ್ನು ಪರಿಶುದ್ಧಗೊಳಿಸಿದೆನೆಂದು ಎಲ್ಲಾ ದೇಶದ ಜನಾಂಗಗಳು ಸಹ ತಿಳಿದುಕೊಳ್ಳುವರು.’ ”
<- ಯೆಹೆಜ್ಕೇಲನು 36ಯೆಹೆಜ್ಕೇಲನು 38 ->