1 ಗತಕಾಲದಲ್ಲಿ ನಮ್ಮ ಪಿತೃಗಳ ಸಂಗಡ ವಿವಿಧ ರೀತಿಯಲ್ಲಿಯೂ ಅನೇಕಬಾರಿ ಪ್ರವಾದಿಗಳ ಮುಖಾಂತರವೂ ಮಾತನಾಡಿದ ದೇವರು, 2 ಈ ಅಂತ್ಯ ದಿನಗಳಲ್ಲಿ ನಮ್ಮ ಸಂಗಡ ತಮ್ಮ ಪುತ್ರ ಆಗಿರುವ ಕ್ರಿಸ್ತ ಯೇಸುವಿನ ಮುಖಾಂತರ ಮಾತನಾಡಿದ್ದಾರೆ. ಈ ಕ್ರಿಸ್ತ ಯೇಸುವನ್ನೇ ದೇವರು ಎಲ್ಲಕ್ಕೂ ಬಾಧ್ಯರನ್ನಾಗಿ ನೇಮಿಸಿದರು. ಇವರ ಮೂಲಕವೇ ಇಡೀ ವಿಶ್ವವನ್ನು ಉಂಟುಮಾಡಿದರು. 3 ಈ ಕ್ರಿಸ್ತ ಯೇಸುವೇ ದೇವರ ಮಹಿಮೆಯ ಪ್ರಕಾಶವೂ ಅವರ ವ್ಯಕ್ತಿತ್ವದ ಪ್ರತಿರೂಪವಾಗಿರುವ ದೇವಪುತ್ರ ಆಗಿದ್ದಾರೆ. ಈ ಕ್ರಿಸ್ತ ಯೇಸುವೇ ತಮ್ಮ ಶಕ್ತಿಯುತ ವಾಕ್ಯದಿಂದ ಸಮಸ್ತಕ್ಕೂ ಆಧಾರವಾಗಿದ್ದಾರೆ. ಕ್ರಿಸ್ತ ಯೇಸು ತಾವಾಗಿಯೇ ನಮ್ಮ ಪಾಪಗಳನ್ನು ಶುದ್ಧಿಮಾಡಿ ಉನ್ನತದೊಳಗೆ ಮಹೋನ್ನತ ದೇವರ ಬಲಗಡೆಯಲ್ಲಿ ಕುಳಿತುಕೊಂಡಿದ್ದಾರೆ. 4 ದೇವಪುತ್ರ ಆಗಿರುವ ಕ್ರಿಸ್ತ ಯೇಸುವು ದೇವದೂತರಿಗಿಂತಲೂ ಶ್ರೇಷ್ಠರಾಗಿದ್ದಾರೆ. ಅವರಿಗಿಂತ ಅತಿ ಶ್ರೇಷ್ಠ ಹೆಸರನ್ನು ಬಾಧ್ಯವಾಗಿ ಹೊಂದಿದವರೂ ಆಗಿದ್ದಾರೆ.
ಪುತ್ರ ಆಗಿರುವ ಕ್ರಿಸ್ತ ಯೇಸು ದೇವದೂತರಿಗಿಂತಲೂ ಶ್ರೇಷ್ಠರು
5 ದೇವರು ತಮ್ಮ ದೂತರೊಳಗೆ ಯಾರಿಗಾದರೂ ಹೀಗೆ ಎಂದಾದರೂ ಹೇಳಿದ್ದುಂಟೋ,