1 ಪ್ರತಿಯೊಬ್ಬ ಮಹಾಯಾಜಕ ಮನುಷ್ಯರೊಳಗಿಂದ ಆರಿಸಲಾಗಿ ಕಾಣಿಕೆಗಳನ್ನೂ ಯಜ್ಞಗಳನ್ನೂ ಪಾಪಗಳಿಗಾಗಿ ಸಮರ್ಪಿಸಲು ಮನುಷ್ಯರ ಪರವಾಗಿ ದೇವರ ಕಾರ್ಯಗಳಿಗಾಗಿ ನೇಮಿಸಲಾಗುತ್ತಾನಲ್ಲಾ. 2 ಮಹಾಯಾಜಕನು ತಾನೂ ಬಲಹೀನ ಆಗಿರುವುದರಿಂದ ಆತನು ಅಜ್ಞಾನಿಗಳನ್ನೂ ಮಾರ್ಗ ತಪ್ಪಿದವರನ್ನೂ ಕುರಿತು ಕನಿಕರ ತೋರಿಸಬಲ್ಲನು. 3 ಆ ಬಲಹೀನತೆಯ ಕಾರಣದಿಂದ ಆತನು ಜನರಿಗೋಸ್ಕರ ಹೇಗೋ ಹಾಗೆಯೇ ತನಗೋಸ್ಕರವೂ ಪಾಪಗಳಿಗಾಗಿ ಯಜ್ಞಗಳನ್ನು ಅರ್ಪಿಸಬೇಕಾದವನಾಗಿದ್ದಾನೆ. 4 ಆರೋನನಂತೆ ದೇವರಿಂದ ಕರೆ ಹೊಂದದ ಹೊರತು ಯಾವನೂ ತನ್ನಷ್ಟಕ್ಕೆ ತಾನೇ ಈ ಗೌರವ ಪದವಿಯನ್ನು ವಹಿಸಿಕೊಳ್ಳಲಾರನು.
5 ಅದೇ ರೀತಿಯಾಗಿ ಕ್ರಿಸ್ತ ಯೇಸು ಮಹಾಯಾಜಕರಾಗುವ ಮಹಿಮೆಯನ್ನು ತಮ್ಮ ಮೇಲೆ ತಾವೇ ತೆಗೆದುಕೊಳ್ಳಲಿಲ್ಲ. ಆದರೆ ದೇವರು,
7 ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು. 8 ಕ್ರಿಸ್ತ ಯೇಸು ದೇವರ ಪುತ್ರರಾಗಿದ್ದರೂ ತಾವು ಅನುಭವಿಸಿದ ಬಾಧೆಗಳಿಂದಲೇ ವಿಧೇಯತೆಯನ್ನು ಕಲಿತುಕೊಂಡರು. 9 ಹೀಗೆ ಯೇಸು ಪರಿಪೂರ್ಣರಾಗಿ ತಮಗೆ ವಿಧೇಯರಾಗುವ ಎಲ್ಲರಿಗೂ ನಿರಂತರವಾಗಿ ರಕ್ಷಣೆಗೆ ಕಾರಣರಾದರು. 10 ಯೇಸು ದೇವರಿಂದ ನೇಮಕಗೊಂಡು, ಮೆಲ್ಕಿಜೆದೇಕನ ಕ್ರಮದ ಪ್ರಕಾರ ಮಹಾಯಾಜಕರಾದರು.