19 ಏಕೆಂದರೆ, ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳಬೇಕಾಗಿಲ್ಲ. ನೀವು ಕೂಗಿ ದುಃಖಿಸಿದ ಶಬ್ದವನ್ನು ದೇವರು ಕೇಳಿ ನಿಮಗೆ ಕೃಪೆ ತೋರಿಸೇ ತೋರಿಸುವರು. ದೇವರು ನಿಮ್ಮ ಸ್ವರವನ್ನು ಕೇಳಿದ ಕೂಡಲೇ ಸದುತ್ತರವನ್ನು ದಯಪಾಲಿಸುವರು. 20 ಕರ್ತದೇವರು ನಿಮಗೆ ಕಷ್ಟವನ್ನು, ಶ್ರಮೆಯನ್ನು, ಅನ್ನಪಾನಗಳನ್ನಾಗಿ ಕೊಟ್ಟರೂ, ಇನ್ನೂ ನಿಮ್ಮ ಬೋಧಕರು ನಮಗೆ ಮರೆಯಾಗಿ ಇರುವುದಿಲ್ಲ. ಆದರೆ ನಿನ್ನ ಕಣ್ಣುಗಳು ನಿಮ್ಮ ಬೋಧಕರನ್ನು ನೋಡುತ್ತಿರುವುವು. 21 ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, “ಇದೇ ಮಾರ್ಗ ಇದರಲ್ಲೇ ನಡೆಯಿರಿ,” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. 22 ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, ಎರಕದ ನಿಮ್ಮ ವಿಗ್ರಹಗಳ ಬಂಗಾರದ ಹೊದಿಕೆಯನ್ನೂ ನೀವು ಹೊಲಸ್ಸಾಗಿ ಭಾವಿಸಿ, ಆ ವಿಗ್ರಹಕ್ಕೆ, “ತೊಲಗಿಹೋಗು,” ಎಂದು ಹೇಳಿ, ಅದನ್ನು ಹೊಲೆಯ ಬಟ್ಟೆಯಂತೆ ಬಿಸಾಡಿ ಬಿಡುವಿರಿ.
23 ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಬಿತ್ತನೆಯ ಮಳೆಯನ್ನು ದಯಪಾಲಿಸುವೆನು. ಭೂಮಿಯ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವೆನು. ಆ ದಿನದಲ್ಲಿ ನಿನ್ನ ದನಗಳು ವಿಸ್ತಾರವಾದ ಹುಲ್ಲುಗಾವಲುಗಳಲ್ಲಿ ಮೇಯುವುವು. 24 ಹೊಲಗೆಯ್ಯುವ ನಿಮ್ಮ ಎತ್ತು ಕತ್ತೆಗಳು ಮೊರದಿಂದಲೂ, ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವುವು. 25 ಮಹಾ ಸಂಹಾರದ ದಿವಸದಲ್ಲಿ ಗೋಪುರಗಳು ಬೀಳುವಾಗ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, ಪ್ರತಿಯೊಂದು ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು ನೀರಿನ ಕಾಲುವೆಗಳೂ ಹರಿಯುತ್ತಿರುವುವು. 26 ಇಷ್ಟೇ ಅಲ್ಲದೆ ಯೆಹೋವ ದೇವರು ತನ್ನ ಜನರ ವ್ರಣವನ್ನು ಕಟ್ಟಿ, ಅವರ ಪೆಟ್ಟಿನ ಗಾಯವನ್ನು ವಾಸಿಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಾಗಿ, ಏಳು ದಿನಗಳ ಬೆಳಕಿನಂತಾಗುವುದು.
27 ಇಗೋ, ಯೆಹೋವ ದೇವರ ನಾಮವು ದೂರದಿಂದ ಬರುತ್ತದೆ.
ಆತನ ಕೋಪವು ಉರಿಯುತ್ತದೆ. ಅದರಿಂದೇಳುವ ಹೊಗೆಯು ದಟ್ಟವಾಗಿದೆ.
ಆತನ ತುಟಿಗಳು ರೋಷದಿಂದ ತುಂಬಿವೆ.
ಆತನ ನಾಲಿಗೆಯು ದಹಿಸುವ ಅಗ್ನಿಯಂತಿದೆ.
28 ಆತನ ಶ್ವಾಸವು ತುಂಬುತ್ತಾ,
ಕಂಠದವರೆಗೂ ಏರುವ ತೊರೆಯಂತಿದೆ.
ಜನಾಂಗಗಳನ್ನು ಏನೂ ಉಳಿಸದ
ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ.
ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು.
29 ಪರಿಶುದ್ಧ ಹಬ್ಬವನ್ನು ಆಚರಿಸುವ ರಾತ್ರಿಯಲ್ಲಿ ಆದಂತೆ
ನಿಮಗೆ ಹಾಡು ಇರುವುದು.
ಯೆಹೋವ ದೇವರ ಪರ್ವತವಾಗಿರುವ
ಇಸ್ರಾಯೇಲಿನ ಬಂಡೆಯ ಬಳಿಗೆ
ಕೊಳಲಿನ ಸಂಗಡ ಹೋಗುವ ಪ್ರಕಾರ
ಹೃದಯದ ಸಂತೋಷವಿರುವುದು.
30 ಆಗ ಯೆಹೋವ ದೇವರು ತನ್ನ ಗಂಭೀರವಾದ ಧ್ವನಿಯನ್ನು ಕೇಳ ಮಾಡಿ,