4 ಕೆಲವು ದಿವಸಗಳಾದ ಮೇಲೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡಿದರು. 5 ಆದರೆ ಅಮ್ಮೋನಿಯರು ಇಸ್ರಾಯೇಲಿನ ಮೇಲೆ ಯುದ್ಧಮಾಡುವಾಗ, ಗಿಲ್ಯಾದಿನ ಹಿರಿಯರು ಯೆಫ್ತಾಹನನ್ನು ಟೋಬ್ ದೇಶದಿಂದ ಕರೆದುಕೊಂಡು ಬರಲು ಹೋಗಿ, 6 ಯೆಫ್ತಾಹನಿಗೆ, “ನಾವು ಅಮ್ಮೋನಿಯರ ಸಂಗಡ ಯುದ್ಧಮಾಡುವಂತೆ, ನೀನು ಬಂದು ನಮ್ಮ ಸೈನ್ಯಾಧಿಪತಿಯಾಗಿರು,” ಎಂದರು.
7 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ನೀವಲ್ಲವೇ ನನ್ನನ್ನು ಹಗೆಮಾಡಿ, ನನ್ನ ತಂದೆಯ ಮನೆಯಿಂದ ಹೊರಡಿಸಿದವರು? ಈಗ ನಿಮಗೆ ಇಕ್ಕಟ್ಟು ಬಂದಿರುವಾಗ ನನ್ನ ಬಳಿಗೆ ಏಕೆ ಬಂದಿರಿ?” ಎಂದನು.
8 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನೀನು ನಮ್ಮೊಂದಿಗೆ ಬಂದು ಅಮ್ಮೋನ್ಯರಿಗೆ ವಿರೋಧವಾಗಿ ಯುದ್ಧಮಾಡಿ, ಗಿಲ್ಯಾದಿನ ನಿವಾಸಿಗಳಾದ ನಮ್ಮೆಲ್ಲರಿಗೆ ನೀನು ತಲೆಯಾಗಿರುವ ಹಾಗೆ, ಈಗ ನಿನ್ನ ಬಳಿಗೆ ತಿರುಗಿ ಬಂದೆವು,” ಎಂದರು.
9 ಆಗ ಯೆಫ್ತಾಹನು ಗಿಲ್ಯಾದಿನ ಹಿರಿಯರಿಗೆ, “ಅಮ್ಮೋನಿಯರಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ನೀವು ತಿರುಗಿ ನನ್ನನ್ನು ಮನೆಗೆ ಕರೆತಂದರೆ ಮತ್ತು ಯೆಹೋವ ದೇವರು ಅವರನ್ನು ನನ್ನ ಮುಂದೆ ಒಪ್ಪಿಸಿಕೊಟ್ಟರೆ, ನಾನು ನಿಮಗೆ ತಲೆಯಾಗಿರುವೆನೋ?” ಎಂದನು.
10 ಗಿಲ್ಯಾದಿನ ಹಿರಿಯರು ಯೆಫ್ತಾಹನಿಗೆ, “ನಾವು ಈ ನಿನ್ನ ಮಾತಿನ ಹಾಗೆ ಮಾಡದೆ ಹೋದರೆ, ಯೆಹೋವ ದೇವರು ನಮ್ಮ ಮತ್ತು ನಿನ್ನ ಮಧ್ಯದಲ್ಲಿ ಸಾಕ್ಷಿಯಾಗಿರಲಿ,” ಎಂದರು. 11 ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.
12 ಯೆಫ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, “ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವುದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು?” ಎಂದು ಹೇಳಿ ಕಳುಹಿಸಿದನು.
13 ಅಮ್ಮೋನಿಯ ಅರಸನು ಯೆಫ್ತಾಹನ ದೂತರಿಗೆ, “ಇಸ್ರಾಯೇಲರು ಈಜಿಪ್ಟಿನಿಂದ ಬರುವಾಗ, ಅರ್ನೋನಿನಿಂದ ಯಬ್ಬೋಕಿನವರೆಗೂ ಮತ್ತು ಯೊರ್ದನಿನವರೆಗೂ ಇರುವ ನನ್ನ ದೇಶವನ್ನು ತೆಗೆದುಕೊಂಡರು. ಆದ್ದರಿಂದ ಈಗ ಅದನ್ನು ನನಗೆ ಸಮಾಧಾನವಾಗಿ ತಿರುಗಿಕೊಡು,” ಎಂದನು.
14 ಆದರೆ ಯೆಫ್ತಾಹನು ತಿರುಗಿ ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ, 15 ಅವರಿಗೆ ಯೆಫ್ತಾಹನು ಹೇಳುವ ಮಾತೇನೆಂದರೆ:
29 ಆಗ ಯೆಹೋವ ದೇವರ ಆತ್ಮ ಯೆಫ್ತಾಹನ ಮೇಲೆ ಬಂತು. ಅವನು ಗಿಲ್ಯಾದ್, ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ, ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರೆದುರಿಗೆ ಹಾದುಹೋದನು. 30 ಯೆಫ್ತಾಹನು ಯೆಹೋವ ದೇವರಿಗೆ ಒಂದು ಪ್ರಮಾಣವನ್ನು ಮಾಡಿ, “ನೀನು ಅಮ್ಮೋನಿಯರನ್ನು ನನ್ನ ಕೈಯಲ್ಲಿ ತಪ್ಪದೆ ಒಪ್ಪಿಸಿಕೊಟ್ಟರೆ, 31 ನಾನು ಅಮ್ಮೋನಿಯರನ್ನು ಜಯಿಸಿ ಹಿಂತಿರುಗಿ ಬರುವಾಗ, ನನ್ನ ಮನೆಯ ಬಾಗಿಲಿನಿಂದ ನನ್ನನ್ನು ಎದುರುಗೊಳ್ಳಲು ಮೊದಲು ಬರುವಂಥದ್ದು ಯೆಹೋವ ದೇವರದಾಗಿರುವುದು. ಅದನ್ನು ದಹನಬಲಿಯಾಗಿ ಅರ್ಪಿಸುವೆನು,” ಎಂದನು.
32 ಹೀಗೆ ಯೆಫ್ತಾಹನು ಅಮ್ಮೋನಿಯರ ಮೇಲೆ ಯುದ್ಧಮಾಡುವುದಕ್ಕೆ ಅವರೆದುರಿಗೆ ಹೊರಟುಹೋದನು. ಯೆಹೋವ ದೇವರು ಅವರನ್ನು ಅವನ ಕೈಯಲ್ಲಿ ಒಪ್ಪಿಸಿಕೊಟ್ಟರು. 33 ಯೆಫ್ತಾಹನು ಅವರನ್ನು ಅರೋಯೇರಿನಿಂದ ಮಿನ್ನೀಥಿನ ದಾರಿಯವರೆಗೆ ಮತ್ತು ಆಬೇಲ್ ಕೆರಾಮೀಮಗೆ ಹೋಗುವವರೆಗೆ ಇರುವ ಇಪ್ಪತ್ತು ಪಟ್ಟಣಗಳನ್ನು ಹಾಳುಮಾಡಿದನು. ಹೀಗೆ ದೊಡ್ಡ ಜಯಹೊಂದಿ, ಅಮ್ಮೋನಿಯರು ಇಸ್ರಾಯೇಲರಿಗೆ ಶರಣಾದರು.
34 ಯೆಫ್ತಾಹನು ಮಿಚ್ಪೆಯಲ್ಲಿರುವ ತನ್ನ ಮನೆಗೆ ಹಿಂದಿರುಗಿ ಬರುವಾಗ, ಅವನ ಮಗಳು ದಮ್ಮಡಿಗಳಿಂದಲೂ, ನಾಟ್ಯದಿಂದಲೂ ಅವನನ್ನು ಎದುರುಗೊಳ್ಳಲು ಹೊರಟಳು. ಅವನಿಗೆ ಅವಳು ಒಬ್ಬಳೇ ಮಗಳು. ಅವಳ ಹೊರತಾಗಿ ಅವನಿಗೆ ಮಗನಾಗಲಿ, ಮಗಳಾಗಲಿ ಇರಲಿಲ್ಲ. 35 ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.
36 ಅವಳು ಅವನಿಗೆ, “ಅಪ್ಪಾ, ನೀನು ಯೆಹೋವ ದೇವರಿಗೆ ನಿನ್ನ ಬಾಯಿ ತೆರೆದೆಯಲ್ಲ. ಯೆಹೋವ ದೇವರು ಅಮ್ಮೋನಿಯರಾದ ನಿನ್ನ ಶತ್ರುಗಳಿಗೆ ನಿನ್ನಿಂದ ಮುಯ್ಯಿ ತೀರಿಸಿದ್ದರಿಂದ, ಅವರಿಗೆ ನಿನ್ನ ಬಾಯಿಂದ ಹೊರಟ ಮಾತಿನ ಪ್ರಕಾರವೇ ನನಗೆ ಮಾಡು,” ಎಂದಳು. 37 ಇದಲ್ಲದೆ ಅವಳು ತನ್ನ ತಂದೆಗೆ, “ಈ ಕಾರ್ಯವು ನನಗೆ ಆಗಲಿ. ಆದರೆ ನಾನೂ, ನನ್ನ ಗೆಳತಿಯರೂ ಕೂಡ ನನ್ನ ಕನ್ಯಾವಸ್ಥೆಗಾಗಿ ಬೆಟ್ಟಗಳ ಮೇಲೆ ಹೋಗಿ, ನನ್ನ ಗೆಳತಿಯರ ಸಂಗಡ ಅಳುವುದಕ್ಕೆ ನನಗೆ ಎರಡು ತಿಂಗಳು ಸಮಯವನ್ನು ಕೊಡು,” ಎಂದಳು.
38 ಆಗ ಅವನು, “ಎರಡು ತಿಂಗಳು ಹೋಗಿ ಬಾ,” ಎಂದು ಹೇಳಿ ಮಗಳನ್ನು ಕಳುಹಿಸಿಬಿಟ್ಟನು. ಅವಳು ತನ್ನ ಗೆಳತಿಯರ ಸಂಗಡ ಹೋಗಿ, ತನ್ನ ಕನ್ಯಾವಸ್ಥೆಗಾಗಿ ಬೆಟ್ಟದಲ್ಲಿ ಅತ್ತು, 39 ಎರಡು ತಿಂಗಳು ತೀರಿದಾಗ ತನ್ನ ತಂದೆಯ ಬಳಿಗೆ ಬಂದಳು.