4 ಹತಳಾದ ಸ್ತ್ರೀಯ ಗಂಡನಾದ ಆ ಲೇವಿಯನು ಅವರಿಗೆ ಉತ್ತರಕೊಟ್ಟು, “ನಾನು ಬೆನ್ಯಾಮೀನನ ಊರಾದ ಗಿಬೆಯಕ್ಕೆ ನನ್ನ ಉಪಪತ್ನಿ ಸಹಿತವಾಗಿ ಇಳಿದುಕೊಳ್ಳುವುದಕ್ಕೆ ಬಂದೆನು. 5 ಆದರೆ ಗಿಬೆಯ ಪಟ್ಟಣದವರು ನನಗೆ ವಿರೋಧವಾಗಿ ಎದ್ದು, ನಾನು ಇಳಿದಿದ್ದ ಮನೆಯನ್ನು ರಾತ್ರಿಯಲ್ಲಿ ಮುತ್ತಿಕೊಂಡು ನನ್ನನ್ನು ಕೊಲ್ಲಬೇಕೆಂದಿದ್ದರು ಮತ್ತು ನನ್ನ ಉಪಪತ್ನಿಯನ್ನು ಅತ್ಯಾಚಾರಮಾಡಿದರು. ಅವಳು ಸತ್ತುಹೋದಳು. 6 ಅವರು ಇಸ್ರಾಯೇಲಿನಲ್ಲಿ ಇಂಥ ದುಷ್ಕಾರ್ಯವನ್ನೂ ಅತಿರೇಕದ ಕೆಲಸವನ್ನೂ ಮಾಡಿದ್ದರಿಂದ, ನಾನು ನನ್ನ ಉಪಪತ್ನಿಯನ್ನು ಹಿಡಿದು, ಅವಳನ್ನು ಕಡಿದು, ಇಸ್ರಾಯೇಲಿನ ಬಾಧ್ಯತೆಯಾದ ಎಲ್ಲಾ ಸೀಮೆಗಳಿಗೆ ಕಳುಹಿಸಿದೆನು. ನೀವೆಲ್ಲರೂ ಇಸ್ರಾಯೇಲರಾಗಿದ್ದೀರಿ. 7 ಇಲ್ಲಿ ಕೂಡಿದ ಎಲ್ಲಾ ಇಸ್ರಾಯೇಲರೇ, ನಿಮ್ಮ ಮಾತನ್ನೂ ಆಲೋಚನೆಯನ್ನೂ ಇಲ್ಲಿ ಹೇಳಿಕೊಳ್ಳಿರಿ,” ಎಂದನು.
8 ಆಗ ಸಮಸ್ತ ಜನರೂ ಒಟ್ಟಾಗಿ ಎದ್ದು, “ನಮ್ಮಲ್ಲಿ ಯಾವನೂ ತನ್ನ ಡೇರೆಗೆ ಹೋಗದಿರಲಿ. ತನ್ನ ಮನೆಗೆ ಹಿಂದಿರುಗದಿರಲಿ. 9 ಈಗ ನಾವು ಗಿಬೆಯಕ್ಕೆ ಮಾಡುವುದು ಇದೇ. ಅದಕ್ಕೆ ವಿರೋಧವಾಗಿ ಚೀಟುಗಳು ಬಿದ್ದ ಪ್ರಕಾರ ಹೋಗೋಣ. 10 ಆದರೆ ಬೆನ್ಯಾಮೀನನ ಗೋತ್ರದವರಾದ ಗಿಬೆಯದವರು ಇಸ್ರಾಯೇಲಿನಲ್ಲಿ ಮಾಡಿದ ಈ ಅತಿರೇಕದ ಕೆಲಸಕ್ಕೆ ತಕ್ಕ ಪ್ರಕಾರ ಮಾಡುವ ಹಾಗೆ ನಾವು ಆಹಾರವನ್ನು ತೆಗೆದುಕೊಂಡು ಬರುವುದಕ್ಕೆ ಇಸ್ರಾಯೇಲಿನ ಸಕಲ ಗೋತ್ರಗಳಲ್ಲಿ ನೂರಕ್ಕೆ ಹತ್ತು ಸಾವಿರಕ್ಕೆ ನೂರು, ಹತ್ತು ಸಾವಿರಕ್ಕೆ ಸಾವಿರ ಜನರನ್ನು ತೆಗೆದುಕೊಂಡು ಕಳುಹಿಸುತ್ತೇವೆ,” ಎಂದರು. 11 ಹೀಗೆಯೇ ಇಸ್ರಾಯೇಲರೆಲ್ಲರೂ ಒಟ್ಟಾಗಿ ಆ ಪಟ್ಟಣದ ಮುಂದೆ ಕೂಡಿದರು.
12 ಅಲ್ಲಿಂದ ಇಸ್ರಾಯೇಲ್ ಗೋತ್ರಗಳು ಬೆನ್ಯಾಮೀನನ ಸಮಸ್ತ ಗೋತ್ರಗಳಿಗೆ ದೂತರನ್ನು ಕಳುಹಿಸಿ, “ನಿಮ್ಮಲ್ಲಿ ಮಾಡಿದ ಈ ಕೆಟ್ಟತನವೇನು? 13 ಗಿಬೆಯದಲ್ಲಿರುವ ದುಷ್ಟ ಮನುಷ್ಯರನ್ನು ನಾವು ಕೊಂದು, ಕೆಟ್ಟತನವನ್ನು ಇಸ್ರಾಯೇಲಿನಿಂದ ತೆಗೆದುಹಾಕುವ ಹಾಗೆ, ಅವರನ್ನು ಒಪ್ಪಿಸಿಕೊಡಿರಿ,” ಎಂದು ಹೇಳಿ ಕಳುಹಿಸಿದರು.
17 ಬೆನ್ಯಾಮೀನನವರ ಹೊರತು ಇಸ್ರಾಯೇಲರಲ್ಲಿ ನಾಲ್ಕು ಲಕ್ಷ ಯೋಧರಿದ್ದರು. ಇವರೆಲ್ಲರೂ ಯುದ್ಧವೀರರಾಗಿದ್ದರು.
18 ಆಗ ಇಸ್ರಾಯೇಲರು ಬೇತೇಲಿಗೆ ಹೋಗಿ, ತಮ್ಮಲ್ಲಿ ಮೊದಲು ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕಾದವರು ಯಾರೆಂದು ದೇವರನ್ನು ಕೇಳಿದರು.
19 ಆಗ ಇಸ್ರಾಯೇಲರು ಉದಯದಲ್ಲಿ ಎದ್ದು ಗಿಬೆಯಕ್ಕೆ ಎದುರಾಗಿ ಪಾಳೆಯಮಾಡಿಕೊಂಡರು. 20 ಇಸ್ರಾಯೇಲಿನ ಮನುಷ್ಯರು ಗಿಬೆಯದ ಬಳಿಯಲ್ಲಿ ಬೆನ್ಯಾಮೀನ್ಯರೊಡನೆ ಯುದ್ಧಮಾಡುವದಕ್ಕೋಸ್ಕರ ವ್ಯೂಹ ಕಟ್ಟಿದರು. 21 ಆಗ ಬೆನ್ಯಾಮೀನ್ಯರು ಗಿಬೆಯದಿಂದ ಹೊರಟು, ಇಸ್ರಾಯೇಲರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಆ ದಿವಸದಲ್ಲಿ ನೆಲಕ್ಕೆ ಬೀಳುವಂತೆ ಸಂಹರಿಸಿದರು. 22 ಇಸ್ರಾಯೇಲರಾದ ಜನರು ಬಲಗೊಂಡು, ಮೊದಲನೆಯ ದಿವಸ ಯುದ್ಧಕ್ಕೆ ವ್ಯೂಹ ಕಟ್ಟಿದ ಸ್ಥಳದಲ್ಲಿ ತಿರುಗಿ ವ್ಯೂಹ ಕಟ್ಟಿದರು. 23 ಇಸ್ರಾಯೇಲರು ಯೆಹೋವ ದೇವರ ಬಳಿಗೆ ಹೋಗಿ, ಅವರ ಮುಂದೆ ಸಂಜೆಯವರೆಗೆ ಅತ್ತು, “ನಮ್ಮ ಸಹೋದರರಾದ ಬೆನ್ಯಾಮೀನ್ಯರ ಸಂಗಡ ಯುದ್ಧಮಾಡುವುದಕ್ಕೆ ಹೋಗಬೇಕೋ?” ಎಂದು ಯೆಹೋವ ದೇವರನ್ನು ಕೇಳಿದರು.
24 ಆಗ ಬೆನ್ಯಾಮೀನನವರು ಆ ಎರಡನೆಯ ದಿವಸದಲ್ಲಿ ಗಿಬೆಯದಿಂದ ಅವರಿಗೆ ಎದುರಾಗಿ ಹೊರಟುಬಂದು, 25 ಬೆನ್ಯಾಮೀನ್ಯರು ಎರಡನೆಯ ದಿನದಲ್ಲಿಯೂ ಗಿಬೆಯಾದಿಂದ ಹೊರಗೆ ಬಂದು ಇಸ್ರಾಯೇಲರಲ್ಲಿ ಖಡ್ಗ ಹಿಡಿಯುವ ಹದಿನೆಂಟು ಸಾವಿರ ಜನರನ್ನು ನೆಲಕ್ಕೆ ಉರುಳಿಸಿದರು.
26 ಆಗ ಇಸ್ರಾಯೇಲರೆಲ್ಲರೂ ಸಮಸ್ತ ಸೇನೆಯೂ ಬೇತೇಲಿಗೆ ಹೊರಟು, ಅಲ್ಲಿ ಅಳುತ್ತಾ ಯೆಹೋವ ದೇವರ ಮುಂದೆ ಕುಳಿತುಕೊಂಡು, ಆ ಸಂಜೆಯವರೆಗೆ ಉಪವಾಸವಾಗಿದ್ದು, ಯೆಹೋವ ದೇವರಿಗೆ ದಹನಬಲಿಗಳನ್ನೂ ಸಮಾಧಾನದ ಸಮರ್ಪಣೆಗಳನ್ನೂ ಅರ್ಪಿಸಿದರು. 27 ಏಕೆಂದರೆ ಆ ದಿವಸಗಳಲ್ಲಿ ಯೆಹೋವ ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿದ್ದದರಿಂದಲೂ, 28 ಆರೋನನ ಮೊಮ್ಮಗನೂ, ಎಲಿಯಾಜರನ ಮಗನೂ ಆದ ಫೀನೆಹಾಸನು ಅವರ ಮುಂದೆ ನಿಂತಿದ್ದದರಿಂದಲೂ, ಇಸ್ರಾಯೇಲರು, “ನಮ್ಮ ಸಹೋದರರಾದ ಬೆನ್ಯಾಮೀನ್ಯರಿಗೆ ವಿರೋಧವಾಗಿ ಇನ್ನೂ ಯುದ್ಧಮಾಡುವುದಕ್ಕೆ ಹೋಗಬೇಕೋ ಬೇಡವೋ?” ಎಂದು ದೇವರನ್ನು ಕೇಳಿಕೊಂಡರು.
29 ಇಸ್ರಾಯೇಲರು ಗಿಬೆಯದ ಸುತ್ತಲೂ ಹೊಂಚಿ ನೋಡುವವರನ್ನು ಇಟ್ಟರು. 30 ಮೂರನೆಯ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಿಗೆ ಎದುರಾಗಿ ಹೋಗಿ ಮೊದಲು ಎರಡು ಸಾರಿ ಮಾಡಿದ ಹಾಗೆಯೇ, ಗಿಬೆಯದ ಸಮೀಪದಲ್ಲಿ ವ್ಯೂಹವನ್ನು ಕಟ್ಟಿದರು. 31 ಆಗ ಬೆನ್ಯಾಮೀನ್ಯರು ಇಸ್ರಾಯೇಲ್ ಜನಕ್ಕೆ ಎದುರಾಗಿ ಹೊರಟು, ಪಟ್ಟಣದ ಬಳಿಯಿಂದ ಹೊರಬಂದು, ಅಡವಿಯಲ್ಲಿ ಹೆದ್ದಾರಿಯಾದ ಬೇತೇಲಿಗೂ ಗಿಬೆಯಕ್ಕೂ ಹೋಗುವ ಎರಡು ಮಾರ್ಗಗಳಲ್ಲಿ ಇಸ್ರಾಯೇಲ್ ಜನರೊಳಗೆ ಮೊದಲಿನ ಹಾಗೆಯೇ ಹೆಚ್ಚು ಕಡಿಮೆ ಮೂವತ್ತು ಜನರನ್ನು ಹೊಡೆದು ಕೊಲ್ಲಲಾರಂಭಿಸಿದಾಗ, 32 ಬೆನ್ಯಾಮೀನ್ಯರು, “ಅವರು ಮೊದಲಿನ ಹಾಗೆಯೇ ನಮ್ಮ ಮುಂದೆ ಸೋತುಹೋಗುತ್ತಾರೆ,” ಎಂದುಕೊಂಡರು. ಆದರೆ ಇಸ್ರಾಯೇಲರು, “ಅವರನ್ನು ಪಟ್ಟಣದ ಬಳಿಯಿಂದ ಹೆದ್ದಾರಿಗಳಿಗೆ ಎಳೆದುಕೊಳ್ಳುವ ಹಾಗೆ ನಾವು ಹಿಂದಕ್ಕೆ ಓಡಿಹೋಗೋಣ,” ಎಂದುಕೊಂಡರು.
33 ಇಸ್ರಾಯೇಲರೆಲ್ಲರೂ ತಮ್ಮ ಸ್ಥಳದಿಂದ ಎದ್ದು, ಬಾಳ್ ತಾಮಾರಿನಲ್ಲಿ ವ್ಯೂಹವನ್ನು ಕಟ್ಟಿದರು. ಆಗ ಗಿಬೆಯದ ಗವಿಯಲ್ಲಿ ಹೊಂಚಿ ನೋಡುತ್ತಿದ್ದ ಇಸ್ರಾಯೇಲರು ಹೊರಟು ಬಂದರು. 34 ಅವರಲ್ಲಿ ಆರಿಸಿದ ಹತ್ತು ಸಾವಿರ ಮನುಷ್ಯರು ಗಿಬೆಯಕ್ಕೆ ವಿರೋಧವಾಗಿ ಬಂದರು. ಯುದ್ಧವು ಘೋರವಾಗಿತ್ತು. ಆದರೆ ಬೆನ್ಯಾಮೀನ್ಯರು, ಕೇಡು ತಮಗೆ ಸಮೀಪವಾಗಿತ್ತೆಂದು ಅರಿಯದೆ ಇದ್ದರು. 35 ಆಗ ಯೆಹೋವ ದೇವರು ಇಸ್ರಾಯೇಲಿನ ಮುಂದೆ ಬೆನ್ಯಾಮೀನ್ಯರನ್ನು ಹೊಡೆದರು. ಆ ದಿವಸದಲ್ಲಿ ಇಸ್ರಾಯೇಲರು ಬೆನ್ಯಾಮೀನ್ಯರಲ್ಲಿ ಖಡ್ಗ ಹಿಡಿಯುವವರಾದ ಇಪ್ಪತ್ತೈದು ಸಾವಿರದ ನೂರು ಮನುಷ್ಯರನ್ನು ನಾಶಮಾಡಿದರು. 36 ತಾವು ಸೋತುಹೋದೆವೆಂಬುದು ಹೀಗೆ ಬೆನ್ಯಾಮೀನ್ಯರಿಗೆ ಆಗ ತಿಳಿಯಿತು.
46 ಹೀಗೆಯೇ ಬೆನ್ಯಾಮೀನ್ಯರೊಳಗೆ ಆ ದಿವಸದಲ್ಲಿ ಬಿದ್ದವರೆಲ್ಲರೂ ಖಡ್ಗ ಹಿಡಿಯುವ ಇಪ್ಪತ್ತೈದು ಸಾವಿರ ಜನರು. ಇವರೆಲ್ಲರೂ ಪರಾಕ್ರಮಶಾಲಿಗಳಾಗಿದ್ದರು. 47 ಆದರೆ ಆರುನೂರು ಮಂದಿ ತಿರುಗಿಕೊಂಡು ಮರುಭೂಮಿಯಲ್ಲಿರುವ ರಿಮ್ಮೋನ್ ಬೆಟ್ಟಕ್ಕೆ ಓಡಿಹೋಗಿ, ರಿಮ್ಮೋನ್ ಗುಡ್ಡದಲ್ಲಿ ನಾಲ್ಕು ತಿಂಗಳು ವಾಸವಾಗಿದ್ದರು. 48 ಇಸ್ರಾಯೇಲರು ಬೆನ್ಯಾಮೀನ್ಯರ ಮೇಲೆ ತಿರುಗಿ ಹೋಗಿ, ಪಟ್ಟಣದಲ್ಲಿ ಜನರನ್ನೂ, ಪಶುಗಳನ್ನೂ, ಕೈಗೆ ಸಿಕ್ಕಿದ್ದೆಲ್ಲವನ್ನೂ ಸಂಹರಿಸಿ, ತಾವು ಹೋದ ಸಮಸ್ತ ಪಟ್ಟಣಗಳನ್ನು ಬೆಂಕಿಯಿಂದ ಸುಟ್ಟುಬಿಟ್ಟರು.
<- ನ್ಯಾಯಸ್ಥಾಪಕರು 19ನ್ಯಾಯಸ್ಥಾಪಕರು 21 ->