6 ತರುವಾಯ ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ: “ಈ ಮಾತುಗಳನ್ನೆಲ್ಲಾ ಯೆಹೂದದ ಪಟ್ಟಣಗಳಲ್ಲಿಯೂ ಯೆರೂಸಲೇಮಿನಲ್ಲಿಯ ಬೀದಿಗಳಲ್ಲಿಯೂ ಸಾರಿ ಹೇಳು. ‘ಹೇಗೆಂದರೆ, ಈ ಒಡಂಬಡಿಕೆಯ ಮಾತುಗಳನ್ನು ಕೇಳಿ, ಅವುಗಳನ್ನು ಮಾಡಿರಿ. 7 ಏಕೆಂದರೆ ನಾನು ನಿಮ್ಮ ತಂದೆಗಳಿಗೆ, “ನನ್ನ ಮಾತನ್ನು ಕೇಳಿ,” ಎಂದು ಖಂಡಿತವಾಗಿ ಹೇಳಿದೆನು. ಅವರನ್ನು ಈಜಿಪ್ಟ್ ದೇಶದೊಳಗಿಂದ ಮೇಲೆ ಬರಮಾಡಿದ ದಿವಸ ಮೊದಲುಗೊಂಡು ಇಂದಿನವರೆಗೂ ಆಜ್ಞಾಪಿಸುತ್ತಾ ಬಂದಿದ್ದೇನೆ. 8 ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ. ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡೆದುಕೊಂಡರು. ಆದ್ದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.’ ”
9 ತರುವಾಯ, ಯೆಹೋವ ದೇವರು ನನಗೆ ಹೇಳಿದ್ದೇನೆಂದರೆ, “ಯೆಹೂದದ ಮನುಷ್ಯರಲ್ಲಿಯೂ ಯೆರೂಸಲೇಮಿನ ನಿವಾಸಿಗಳಲ್ಲಿಯೂ ಒಳಸಂಚು ಕಂಡುಬಂದಿದೆ. 10 ನನ್ನ ಮಾತುಗಳನ್ನು ಕೇಳಲೊಲ್ಲದ ತಮ್ಮ ಪಿತೃಗಳ ಅಕ್ರಮಗಳಿಗೆ ತಿರುಗಿಕೊಂಡಿದ್ದಾರೆ. ಬೇರೆ ದೇವರುಗಳನ್ನು ಸೇವಿಸುವುದಕ್ಕೆ ಅವುಗಳ ಹಿಂದೆ ಹೋಗಿದ್ದಾರೆ. ಇಸ್ರಾಯೇಲಿನ ವಂಶದವರೂ ಯೆಹೂದದ ವಂಶದವರೂ ನಾನು ಅವರ ತಂದೆಗಳ ಸಂಗಡ ಮಾಡಿದ ಒಡಂಬಡಿಕೆಗಳನ್ನು ಮೀರಿದ್ದಾರೆ. 11 ಆದ್ದರಿಂದ ಯೆಹೋವ ದೇವರು ಹೀಗೆ ಹೇಳುತ್ತಾರೆ: ‘ಇಗೋ, ಅವರು ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ತರುವೆನು. ಅವರು ನನಗೆ ಕೂಗಿದರೂ ನಾನು ಅವರನ್ನು ಕೇಳುವುದಿಲ್ಲ. 12 ಆಗ ಯೆಹೂದದ ಪಟ್ಟಣಗಳೂ ಯೆರೂಸಲೇಮಿನ ನಿವಾಸಿಗಳೂ ಹೋಗಿ ತಾವು ಧೂಪವನ್ನರ್ಪಿಸುವ ದೇವರುಗಳಿಗೆ ಕೂಗುವರು. ಆದರೆ ಇವು ಅವರ ಕೇಡಿನ ಕಾಲದಲ್ಲಿ ಅವರನ್ನು ರಕ್ಷಿಸುವುದೇ ಇಲ್ಲ. 13 ಓ ಯೆಹೂದವೇ, ನಿನ್ನ ಪಟ್ಟಣಗಳಷ್ಟು ನಿನ್ನ ದೇವರುಗಳು ಇದ್ದವು. ಯೆರೂಸಲೇಮಿಗೆ ಎಷ್ಟು ಬೀದಿಗಳೋ, ಅಷ್ಟು ಬಲಿಪೀಠಗಳನ್ನು ನಾಚಿಗೆಗೆ ಎಂದರೆ, ಅಷ್ಟು ಬಲಿಪೀಠಗಳನ್ನು ಬಾಳನಿಗೆ ಧೂಪವನ್ನರ್ಪಿಸುವುದಕ್ಕೆ ಇಟ್ಟಿದ್ದೀ.’
14 “ಆದ್ದರಿಂದ ನೀನು ಈ ಜನರಿಗೋಸ್ಕರ ಪ್ರಾರ್ಥನೆ ಮಾಡಬೇಡ. ಅವರಿಗೋಸ್ಕರ ಮೊರೆಯನ್ನೂ, ಪ್ರಾರ್ಥನೆಯನ್ನೂ ಎತ್ತಬೇಡ. ಏಕೆಂದರೆ, ತಮ್ಮ ಕೇಡಿನ ನಿಮಿತ್ತ ನನ್ನ ಕೂಗುವ ಸಮಯದಲ್ಲಿ ನಾನು ಕೇಳೆನು.
21 ಆದ್ದರಿಂದ ನಿನ್ನ ಪ್ರಾಣವನ್ನು ಹುಡುಕುವ ಅನಾತೋತಿನ ಮನುಷ್ಯರಿಗೆ ನೀನು, “ನಮ್ಮ ಕೈಯಿಂದ ಸಾಯದ ಹಾಗೆ ಯೆಹೋವ ದೇವರ ಹೆಸರಿನಲ್ಲಿ ಪ್ರವಾದನೆ ಹೇಳಬೇಡ,” ಅನ್ನುವವರಿಗೆ ಯೆಹೋವ ದೇವರು ಹೇಳುವುದೇನೆಂದರೆ, 22 ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ನಾನು ಅವರನ್ನು ಶಿಕ್ಷಿಸುತ್ತೇನೆ, ಯೌವನಸ್ಥರು ಖಡ್ಗದಿಂದ ಸಾಯುವರು. ಅವರ ಪುತ್ರಪುತ್ರಿಯರು ಹಸಿವೆಯಿಂದ ಸಾಯುವರು. 23 ಅವರಲ್ಲಿ ಶೇಷವು ಇರುವುದಿಲ್ಲ. ಏಕೆಂದರೆ ನಾನು ಅನಾತೋತಿನ ಮನುಷ್ಯರ ಮೇಲೆ ಕೇಡನ್ನು ಎಂದರೆ ಅವರ ಶಿಕ್ಷೆಯ ವರ್ಷವನ್ನೇ ತರುತ್ತೇನೆ.”
<- ಯೆರೆಮೀಯ 10ಯೆರೆಮೀಯ 12 ->- a ಅಥವಾ ಆಮೆನ್
Languages