3 ಆಗ ಯೆರೆಮೀಯನು ಅವರಿಗೆ ಹೇಳಿದ್ದೇನೆಂದರೆ, “ಚಿದ್ಕೀಯನಿಗೆ ಹೀಗೆ ಹೇಳಿರಿ: 4 ‘ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ಇಗೋ, ಗೋಡೆಯ ಹೊರಗೆ ನಿಮಗೆ ಮುತ್ತಿಗೆ ಹಾಕುವ ಬಾಬಿಲೋನಿನ ಅರಸನಿಗೂ, ಕಸ್ದೀಯರಿಗೂ ವಿರೋಧವಾಗಿ ನೀವು ಯುದ್ಧಮಾಡುವುದಕ್ಕೆ ನಿಮ್ಮ ಕೈಗಳಲ್ಲಿರುವ ಯುದ್ಧದ ಆಯುಧಗಳನ್ನೂ, ನಾನು ಹಿಂದಕ್ಕೆ ತಳ್ಳಿ, ಅವರನ್ನು ಈ ಪಟ್ಟಣದ ಮಧ್ಯದಲ್ಲಿ ಕೂಡಿಬರುವಂತೆ ಮಾಡುವೆನು. 5 ನಾನೇ ಚಾಚಿದ ಕೈಯಿಂದಲೂ, ಬಲವಾದ ತೋಳಿನಿಂದಲೂ, ಕೋಪದಿಂದಲೂ, ಉಗ್ರದಿಂದಲೂ, ಮಹಾರೌದ್ರದಿಂದಲೂ ನಿಮಗೆ ವಿರೋಧವಾಗಿ ಯುದ್ಧಮಾಡುವೆನು. 6 ಈ ಪಟ್ಟಣದ ನಿವಾಸಿಗಳನ್ನೂ, ಮನುಷ್ಯರನ್ನೂ, ಮೃಗಗಳನ್ನೂ ಸಹಿತವಾಗಿ ಹೊಡೆಯುವೆನು. ಅವರು ದೊಡ್ಡ ವ್ಯಾಧಿಯಿಂದ ಸಾಯುವರು. 7 ಯೆಹೋವ ದೇವರು ಹೇಳುವುದೇನೆಂದರೆ, ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ, ಅವನ ಸೇವಕರನ್ನೂ, ಜನರನ್ನೂ ಈ ಪಟ್ಟಣದಲ್ಲಿ ವ್ಯಾಧಿಯಿಂದಲೂ, ಖಡ್ಗದಿಂದಲೂ, ಕ್ಷಾಮದಿಂದಲೂ ಉಳಿದವರನ್ನು ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ, ಅವರ ಶತ್ರುಗಳ ಕೈಗೂ ಒಪ್ಪಿಸುವೆನು. ಅವನು ಅವರನ್ನು ಖಡ್ಗದ ಬಾಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವುದಿಲ್ಲ, ಕನಿಕರಿಸುವುದಿಲ್ಲ, ಅಂತಃಕರಣ ಪಡುವುದಿಲ್ಲ.’
8 “ಈ ಜನಕ್ಕೆ ನೀನು ಹೇಳಬೇಕಾದದ್ದೇನೆಂದರೆ, ‘ಯೆಹೋವ ದೇವರು ಹೀಗೆ ಹೇಳುತ್ತಾರೆ: ಇಗೋ, ನಾನು ಜೀವದ ಮಾರ್ಗವನ್ನೂ, ಮರಣದ ಮಾರ್ಗವನ್ನೂ ನಿಮ್ಮ ಮುಂದೆ ಇಡುತ್ತೇನೆ. 9 ಈ ಪಟ್ಟಣದಲ್ಲಿ ನಿಲ್ಲುವವನು ಖಡ್ಗದಿಂದಲೂ, ಕ್ಷಾಮದಿಂದಲೂ, ವ್ಯಾಧಿಯಿಂದಲೂ ಸಾಯುವನು. ಆದರೆ ಹೊರಗೆ ಹೋಗಿ, ನಿಮಗೆ ಮುತ್ತಿಗೆ ಹಾಕುವ ಕಸ್ದೀಯರ[a] ಕಡೆಗೆ ಸೇರುವವನು ಬದುಕುವನು. ತನ್ನ ಪ್ರಾಣವೊಂದನ್ನೇ ಬಾಚಿಕೊಂಡು ಹೋಗುವನು. 10 ಅವನ ಪ್ರಾಣವು ಅವನಿಗೆ ಕೊಳ್ಳೆಯಾಗಿರುವುದು. ಏಕೆಂದರೆ ನಾನು ಒಳ್ಳೆಯದಕ್ಕಲ್ಲ, ಕೆಟ್ಟದ್ದಕ್ಕೆ ಈ ಪಟ್ಟಣಕ್ಕೆ ವಿರೋಧವಾಗಿ ನನ್ನ ಮುಖವನ್ನಿಟ್ಟಿದ್ದೇನೆಂದು ಯೆಹೋವ ದೇವರು ಅನ್ನುತ್ತಾರೆ. ಅದು ಬಾಬಿಲೋನಿನ ಅರಸನ ಕೈಯಲ್ಲಿ ಒಪ್ಪಿಸಲಾಗುವುದು. ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.’
11 “ಯೆಹೂದದ ಅರಸನ ಮನೆಯವರಿಗೆ ಹೀಗೆ ಹೇಳು: ‘ಯೆಹೋವ ದೇವರ ವಾಕ್ಯವನ್ನು ಕೇಳಿರಿ, 12 ದಾವೀದನ ಮನೆಯವರೇ, ಯೆಹೋವ ದೇವರು ಹೇಳುವುದೇನೆಂದರೆ,
- a ಕಸ್ದೀಯರ ಅಂದರೆ ಬಾಬಿಲೋನಿನ ಜನರು