5 ಆಗ ಯೇಸು ಅವರಿಗೆ, “ನಿಮ್ಮಲ್ಲಿ ಒಬ್ಬರ ಮಗುವಾಗಲಿ, ಎತ್ತಾಗಲಿ[b] ಒಂದು ಬಾವಿಯಲ್ಲಿ ಬಿದ್ದರೆ, ಅದನ್ನು ತಕ್ಷಣವೇ ಸಬ್ಬತ್ ದಿನದಲ್ಲಿ ಮೇಲಕ್ಕೆ ಎಳೆಯುವುದಿಲ್ಲವೇ?” ಎಂದು ಕೇಳಿದರು. 6 ಅದಕ್ಕೆ ಅವರು ಉತ್ತರ ಕೊಡಲಾರದೆ ಇದ್ದರು.
7 ಊಟಕ್ಕೆ ಆಹ್ವಾನಿತರು ತಮಗಾಗಿ ಮುಖ್ಯ ಸ್ಥಳಗಳನ್ನು ಹೇಗೆ ಆರಿಸಿಕೊಂಡರೆಂದು ಯೇಸು ಗುರುತಿಸಿ, ಅವರಿಗೆ ಒಂದು ಸಾಮ್ಯವನ್ನು ಹೇಳಿದರು: 8 “ಯಾರಾದರೂ ನಿನ್ನನ್ನು ಮದುವೆಯ ಊಟಕ್ಕೆ ಕರೆದರೆ ಮೊದಲನೆಯ ಸ್ಥಾನದಲ್ಲಿ ಕುಳಿತುಕೊಳ್ಳಬೇಡ, ಏಕೆಂದರೆ ಅವನು ನಿನಗಿಂತಲೂ ಗೌರವವುಳ್ಳ ಮನುಷ್ಯನನ್ನು ಆಹ್ವಾನಿಸಿರಬಹುದು. 9 ಆಗ, ನಿನ್ನನ್ನು ಮತ್ತು ಅವನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಈ ಮನುಷ್ಯನಿಗೆ ಸ್ಥಳಕೊಡು,’ ಎಂದು ಹೇಳುವಾಗ ನೀನು ನಾಚಿಕೆಯಿಂದ ಕಡೇ ಸ್ಥಾನದಲ್ಲಿ ಕುಳಿತುಕೊಳ್ಳಬೇಕಾಗುವುದು. 10 ಆದರೆ ನಿನ್ನನ್ನು ಆಹ್ವಾನಿಸಿದಾಗ, ಹೋಗಿ ಕಡೇ ಸ್ಥಳದಲ್ಲಿ ಕುಳಿತುಕೋ, ಆಗ ನಿನ್ನನ್ನು ಆಹ್ವಾನಿಸಿದವನು ಬಂದು ನಿನಗೆ, ‘ಸ್ನೇಹಿತನೇ, ಉತ್ತಮ ಸ್ಥಳಕ್ಕೆ ಬಾ,’ ಎಂದು ಹೇಳುವಾಗ ನಿನ್ನ ಜೊತೆಯಲ್ಲಿ ಊಟಕ್ಕೆ ಕುಳಿತವರೆಲ್ಲರ ಮುಂದೆ ನಿನಗೆ ಗೌರವವಿರುವುದು. 11 ಏಕೆಂದರೆ, ಯಾರಾದರೂ ತಮ್ಮನ್ನು ತಾವೇ ಹೆಚ್ಚಿಸಿಕೊಳ್ಳುವರೋ ಅವರು ತಗ್ಗಿಸಲಾಗುವರು ಮತ್ತು ತಮ್ಮನ್ನು ತಾವೇ ತಗ್ಗಿಸಿಕೊಳ್ಳುವವರು ಹೆಚ್ಚಿಸಲಾಗುವರು,” ಎಂದರು.
12 ಯೇಸು ತಮ್ಮನ್ನು ಆಹ್ವಾನಿಸಿದವನಿಗೆ, “ನೀನು ಮಧ್ಯಾಹ್ನದ ಊಟಕ್ಕೆ ಇಲ್ಲವೆ ರಾತ್ರಿಯ ಊಟಕ್ಕೆ ಸಿದ್ಧಪಡಿಸಿದಾಗ, ನಿನ್ನ ಸ್ನೇಹಿತರನ್ನಾಗಲಿ ನಿನ್ನ ಸಹೋದರ ಸಹೋದರಿಯನ್ನಾಗಲಿ, ನಿನ್ನ ಬಂಧುಗಳನ್ನಾಗಲಿ, ಇಲ್ಲವೆ ಐಶ್ವರ್ಯವಂತರಾದ ನೆರೆಯವರನ್ನಾಗಲಿ ಕರೆಯಬೇಡ, ಏಕೆಂದರೆ ಅವರೂ ಪ್ರತಿಯಾಗಿ ನಿನ್ನನ್ನೂ ಆಹ್ವಾನಿಸಬಹುದು ಮತ್ತು ನಿನಗೆ ಪ್ರತ್ಯುಪಕಾರವಾದೀತು. 13 ಆದರೆ ನೀನು ಔತಣಮಾಡಿಸಿದಾಗ, ಬಡವರನ್ನೂ ಊನವಾದವರನ್ನೂ ಕುಂಟರನ್ನೂ ಕುರುಡರನ್ನೂ ಆಹ್ವಾನಿಸು. 14 ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವುದಕ್ಕೆ ಆಗದಿರುವುದರಿಂದ, ನೀನು ಧನ್ಯನಾಗುವೆ. ಏಕೆಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವುದು.”
16 ಯೇಸು ಅವನಿಗೆ ಹೀಗೆ ಹೇಳಿದರು: “ಒಬ್ಬ ಮನುಷ್ಯನು ಒಂದು ದೊಡ್ಡ ಔತಣ ಮಾಡಿಸಿ ಅನೇಕರನ್ನು ಆಹ್ವಾನಿಸಿದನು. 17 ಊಟಕ್ಕೆ ಸಮಯವಾದಾಗ ಆಹ್ವಾನಿತರಿಗೆ ಅವನು, ‘ಎಲ್ಲವೂ ಸಿದ್ಧವಾಗಿದೆ ಬನ್ನಿರಿ,’ ಎಂದು ಹೇಳಲು ತನ್ನ ಸೇವಕನನ್ನು ಕಳುಹಿಸಿದನು.
18 “ಆದರೆ ಅವರೆಲ್ಲರೂ ಒಂದೇ ರೀತಿಯಾಗಿ ನೆಪ ಹೇಳಲಾರಂಭಿಸಿದರು. ಮೊದಲನೆಯವನು, ‘ನಾನು ಒಂದು ಹೊಲ ಕೊಂಡುಕೊಂಡಿದ್ದೇನೆ, ನಾನು ಅದನ್ನು ನೋಡಬೇಕಾಗಿದೆ, ದಯವಿಟ್ಟು ಕ್ಷಮಿಸಬೇಕು,’ ಎಂದು ಹೇಳಿದನು.
19 “ಇನ್ನೊಬ್ಬನು, ‘ನಾನು ಐದು ಜೊತೆ ಎತ್ತುಗಳನ್ನು ಕೊಂಡುಕೊಂಡಿದ್ದೇನೆ, ಅವುಗಳನ್ನು ಪರೀಕ್ಷಿಸಲು ಹೋಗುತ್ತಿದ್ದೇನೆ, ದಯವಿಟ್ಟು ನನ್ನನ್ನು ಕ್ಷಮಿಸಬೇಕು,’ ಎಂದನು.
20 “ಮತ್ತೊಬ್ಬನು, ‘ನಾನು ಮದುವೆ ಮಾಡಿಕೊಂಡಿದ್ದೇನೆ, ಆದ್ದರಿಂದ ಬರಲಾರೆ,’ ಎಂದನು.
21 “ಆ ಸೇವಕನು ಬಂದು ತನ್ನ ಯಜಮಾನನಿಗೆ ಈ ವಿಷಯಗಳನ್ನು ತಿಳಿಸಲು, ಆ ಮನೆಯಜಮಾನನು ಕೋಪಗೊಂಡು ತನ್ನ ಸೇವಕನಿಗೆ, ‘ನೀನು ಬೇಗನೆ ಪಟ್ಟಣದ ಬೀದಿಗಳಿಗೂ ಸಂದುಗಳಿಗೂ ಹೋಗಿ, ಬಡವರನ್ನೂ ಊನವಾದವರನ್ನೂ ಕುರುಡರನ್ನೂ ಕುಂಟರನ್ನೂ ಇಲ್ಲಿ ಕರೆದುಕೊಂಡು ಬಾ,’ ಎಂದನು.
22 “ಆ ಸೇವಕನು, ‘ಸ್ವಾಮಿ, ನೀನು ಅಪ್ಪಣೆ ಕೊಟ್ಟಂತೆ ಮಾಡಿದ್ದಾಯಿತು, ಆದರೂ ಸ್ಥಳವಿದೆ,’ ಎಂದನು.
23 “ಆಗ ಯಜಮಾನನು ಸೇವಕನಿಗೆ, ‘ನೀನು ಬೀದಿಗಳಿಗೂ ಓಣಿಗಳಿಗೂ ಹೊರಟುಹೋಗಿ ನನ್ನ ಮನೆ ತುಂಬುವಂತೆ, ಇಲ್ಲಿ ಬರುವುದಕ್ಕೆ ಕಂಡವರನ್ನು ಬಲವಂತಮಾಡು. 24 ಆದರೆ, ಮೊದಲು ಆಹ್ವಾನಿತರಲ್ಲಿ ಒಬ್ಬನಾದರೂ ನನ್ನ ಔತಣವನ್ನು ರುಚಿ ನೋಡಬಾರದು ಎಂದು ನಾನು ನಿನಗೆ ಹೇಳುತ್ತೇನೆ.’ ”
28 “ನಿಮ್ಮಲ್ಲಿ ಒಬ್ಬರು ಗೋಪುರವನ್ನು ಕಟ್ಟಲು ಇಚ್ಛಿಸಿದರೆ. ನೀವು ಮೊದಲು ಕುಳಿತು ಅದನ್ನು ಪೂರೈಸುವುದಕ್ಕೆ ಬೇಕಾದ ಖರ್ಚು ಇದೆಯೋ ಎಂದು ಲೆಕ್ಕ ಮಾಡುವುದಿಲ್ಲವೋ? 29-30 ಒಂದು ವೇಳೆ ಹಾಗೆ ಲೆಕ್ಕಮಾಡದೆ ನೀವು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ, ಅದನ್ನು ಪೂರೈಸದಿದ್ದರೆ, ನಿಮ್ಮನ್ನು ನೋಡುವವರೆಲ್ಲರೂ, ‘ಈ ವ್ಯಕ್ತಿ ಕಟ್ಟಲಾರಂಭಿಸಿದ, ಮುಗಿಸಲು ಇವನಿಗೆ ಆಗಲಿಲ್ಲ,’ ಎಂದು ಹೇಳಿ ಹಾಸ್ಯಮಾಡುವರು.
31 “ಅಥವಾ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಹೋಗುವಾಗ, ಮೊದಲು ಕುಳಿತು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ ಸೈನ್ಯದೊಂದಿಗೆ ಬರುವ ಆ ಅರಸನನ್ನು ತನ್ನ ಹತ್ತು ಸಾವಿರ ಸೈನ್ಯದೊಂದಿಗೆ ಎದುರಿಸುವುದಕ್ಕೆ ಸಮರ್ಥವೋ ಎಂದು ಆಲೋಚನೆ ಮಾಡುವುದಿಲ್ಲವೇ? 32 ಸಾಮರ್ಥ್ಯ ಇಲ್ಲದಿದ್ದರೆ, ಇನ್ನೂ ದೂರದಲ್ಲಿರುವಾಗಲೇ ಪ್ರತಿನಿಧಿಗಳನ್ನು ಕಳುಹಿಸಿ ಸಮಾಧಾನವನ್ನು ಕೋರುವನಲ್ಲವೇ? 33 ಆದ್ದರಿಂದ ನಿಮ್ಮಲ್ಲಿ ಯಾರಾದರೂ ತಮಗಿರುವುದನ್ನೆಲ್ಲಾ ಬಿಟ್ಟುಬಿಡದಿದ್ದರೆ, ಅವರು ನನ್ನ ಶಿಷ್ಯರಾಗಲಾರರು.
34 “ಉಪ್ಪು ಒಳ್ಳೆಯದು, ಆದರೆ ಉಪ್ಪೇ ಸಪ್ಪಗಾದರೆ, ಅದಕ್ಕೆ ಇನ್ನಾವುದರಿಂದ ರುಚಿ ಬಂದೀತು? 35 ಅದು ಭೂಮಿಗಾದರೂ ಗೊಬ್ಬರಕ್ಕಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ.