4 ಯೋಸೇಫನು ದಾವೀದನ ಕುಟುಂಬದವನೂ ವಂಶದವನೂ ಆಗಿದ್ದರಿಂದ, ಅವನು ಸಹ ಗಲಿಲಾಯ ಪ್ರಾಂತದ ನಜರೇತೆಂಬ ಪಟ್ಟಣದಿಂದ ಯೂದಾಯ ಪ್ರಾಂತದ ಬೇತ್ಲೆಹೇಮ್ ಎಂಬ ದಾವೀದನ ಪಟ್ಟಣಕ್ಕೆ ಹೋದನು. 5 ಅವನು ತನಗೆ ನಿಶ್ಚಯಿಸಿದ್ದ ಮತ್ತು ಪೂರ್ಣ ಗರ್ಭಿಣಿಯಾಗಿದ್ದ ಮರಿಯಳೊಂದಿಗೆ ಜನಗಣತಿಯ ದಾಖಲೆ ಮಾಡಿಸಿಕೊಳ್ಳುವುದಕ್ಕಾಗಿ ಹೋದನು. 6 ಅವರು ಬೇತ್ಲೆಹೇಮಿನಲ್ಲಿ ಇದ್ದಾಗ, ಆಕೆಗೆ ಹೆರಿಗೆಯ ಕಾಲ ಸಮೀಪಿಸಿತು. 7 ಮರಿಯಳು ತನ್ನ ಚೊಚ್ಚಲು ಮಗನನ್ನು ಹೆತ್ತು, ಬಟ್ಟೆಗಳಿಂದ ಸುತ್ತಿ, ಛತ್ರದಲ್ಲಿ ಅವರಿಗೆ ಸ್ಥಳವಿಲ್ಲವಾದ್ದರಿಂದ ಶಿಶುವನ್ನು ದನದ ಕೊಟ್ಟಿಗೆಯಲ್ಲಿ ಮಲಗಿಸಿದಳು.
8 ಅದೇ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದು, ರಾತ್ರಿಯಲ್ಲಿ ತಮ್ಮ ಹಿಂಡನ್ನು ಕಾಯುತ್ತಿದ್ದರು. 9 ಆಗ ಕರ್ತದೇವರ ದೂತನು ಅವರಿಗೆ ಪ್ರತ್ಯಕ್ಷನಾದನು. ಕರ್ತದೇವರ ಮಹಿಮೆಯು ಅವರ ಸುತ್ತಲೂ ಪ್ರಕಾಶಿಸಿತು, ಅವರು ಬಹಳವಾಗಿ ಹೆದರಿದರು. 10 ಆ ದೂತನು ಅವರಿಗೆ, “ಹೆದರಬೇಡಿರಿ. ಎಲ್ಲಾ ಜನರಿಗೆ ಮಹಾ ಸಂತೋಷವನ್ನುಂಟು ಮಾಡುವ ಶುಭಸಮಾಚಾರವನ್ನು ನಾನು ನಿಮಗೆ ತಿಳಿಸುತ್ತೇನೆ. 11 ಅದೇನೆಂದರೆ, ಈ ದಿನ ದಾವೀದನ ಪಟ್ಟಣದಲ್ಲಿ ನಿಮಗೋಸ್ಕರ ಒಬ್ಬ ರಕ್ಷಕರು ಹುಟ್ಟಿದ್ದಾರೆ. ಅವರು ಯಾರೆಂದರೆ ಕರ್ತದೇವರು ಆಗಿರುವ ಕ್ರಿಸ್ತ. 12 ಅಲ್ಲಿ ಬಟ್ಟೆಯಿಂದ ಸುತ್ತಿರುವ ಶಿಶುವು ಕೊಟ್ಟಿಗೆಯಲ್ಲಿ ಮಲಗಿರುವುದನ್ನು ನೀವು ಕಾಣುವಿರಿ. ಇದೇ ನಿಮಗೆ ಗುರುತು,” ಎಂದು ಹೇಳಿದನು.
13 ತಕ್ಷಣವೇ ಆ ದೂತನ ಸಂಗಡ ಇದ್ದ ಪರಲೋಕ ಸೈನ್ಯದ ಸಮೂಹವು ದೇವರನ್ನು ಕೊಂಡಾಡುತ್ತಾ ಹೀಗೆ ಹೇಳಿದರು:
15 ದೇವದೂತರು ಅವರ ಬಳಿಯಿಂದ ಪರಲೋಕಕ್ಕೆ ಹೋದ ಮೇಲೆ ಕುರುಬರು, “ದೇವರು ನಮಗೆ ತಿಳಿಯಪಡಿಸಿದ ಈ ಸಂಗತಿಯನ್ನು ನಾವು ಈಗಲೇ ಬೇತ್ಲೆಹೇಮಿಗೆ ಹೋಗಿ ನೋಡೋಣ,” ಎಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
16 ಅವರು ಅವಸರದಿಂದ ಹೋಗಿ ಮರಿಯಳನ್ನೂ ಯೋಸೇಫನನ್ನೂ ಕೊಟ್ಟಿಗೆಯಲ್ಲಿ ಮಲಗಿದ್ದ ಶಿಶುವನ್ನು ಕಂಡರು. 17 ಅನಂತರ, ಈ ಶಿಶುವಿನ ವಿಷಯವಾಗಿ ತಮಗೆ ತಿಳಿಯಪಡಿಸಿದ ದೇವದೂತನ ಮಾತನ್ನು ಪ್ರಕಟಮಾಡಿದರು. 18 ಕುರುಬರು ಹೇಳಿದ ವಿಷಯಗಳನ್ನು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು. 19 ಆದರೆ ಮರಿಯಳು ಈ ಎಲ್ಲಾ ವಿಷಯಗಳನ್ನು ತನ್ನ ಹೃದಯದಲ್ಲಿಟ್ಟುಕೊಂಡು ಆಲೋಚಿಸುತ್ತಿದ್ದಳು. 20 ತಮಗೆ ತಿಳಿಸಿದ ಪ್ರಕಾರವೇ ಕುರುಬರು ತಾವು ಕೇಳಿ, ಕಂಡ ಎಲ್ಲಾ ವಿಷಯಗಳಿಗಾಗಿ ದೇವರನ್ನು ಮಹಿಮೆಪಡಿಸುತ್ತಾ, ಕೊಂಡಾಡುತ್ತಾ ಹಿಂದಿರುಗಿ ಹೋದರು.
21 ಶಿಶುವಿಗೆ ಸುನ್ನತಿ ಮಾಡಬೇಕಾಗಿದ್ದ ಎಂಟನೆಯ ದಿನದಲ್ಲಿ, ಮರಿಯಳು ಗರ್ಭಿಣಿಯಾಗುವುದಕ್ಕೆ ಮುಂಚೆಯೇ ದೂತನು ಸೂಚಿಸಿದ್ದಂತೆ “ಯೇಸು” ಎಂದು ನಾಮಕರಣ ಮಾಡಿದರು.
25 ಆಗ ಸಿಮೆಯೋನನೆಂಬ ಒಬ್ಬ ಮನುಷ್ಯನು ಯೆರೂಸಲೇಮಿನಲ್ಲಿದ್ದನು. ಅವನು ನೀತಿವಂತನೂ ಭಕ್ತನೂ ಆಗಿದ್ದನು. ಅವನು ಇಸ್ರಾಯೇಲರನ್ನು ಸಂತೈಸುವ ಒಬ್ಬರ ಬರುವಿಕೆಗಾಗಿ ಕಾಯುತ್ತಿದ್ದನು. ಪವಿತ್ರಾತ್ಮ ದೇವರ ಪ್ರಸನ್ನತೆ ಅವನ ಮೇಲಿತ್ತು. 26 ಇದಲ್ಲದೆ, ಅವನು ಕರ್ತದೇವರು ಕಳುಹಿಸಲಿರುವ ಕ್ರಿಸ್ತನನ್ನು[d] ಕಾಣುವುದಕ್ಕಿಂತ ಮುಂಚೆ ಮರಣ ಹೊಂದುವುದಿಲ್ಲವೆಂದು ಪವಿತ್ರಾತ್ಮನಿಂದ ಅವನಿಗೆ ಪ್ರಕಟನೆಯಾಗಿತ್ತು. 27 ಅವನು ಪವಿತ್ರಾತ್ಮ ಪ್ರೇರಣೆಯಿಂದ ದೇವಾಲಯದ ಅಂಗಳದೊಳಗೆ ಬಂದನು, ಆಗ ನಿಯಮವನ್ನು ಪೂರೈಸಲು ತಂದೆತಾಯಿಗಳು ಶಿಶು ಯೇಸುವನ್ನು ಒಳಗೆ ತಂದರು. 28 ಆಗ ಸಿಮೆಯೋನನು ಶಿಶುವನ್ನು ತನ್ನ ಕೈಗಳಲ್ಲಿ ತೆಗೆದುಕೊಂಡು ದೇವರನ್ನು ಕೊಂಡಾಡುತ್ತಾ ಹೀಗೆಂದನು:
33 ಶಿಶುವಿನ ವಿಷಯವಾಗಿ ಸಿಮೆಯೋನನು ಹೇಳಿದ ಮಾತುಗಳಿಗೆ ಶಿಶುವಿನ ತಂದೆತಾಯಿಗಳು ಆಶ್ಚರ್ಯಪಟ್ಟರು. 34 ಅನಂತರ ಸಿಮೆಯೋನನು ಅವರನ್ನು ಆಶೀರ್ವದಿಸಿ, ಶಿಶುವಿನ ತಾಯಿ ಮರಿಯಳಿಗೆ, “ಇಗೋ, ಇಸ್ರಾಯೇಲಿನಲ್ಲಿ ಅನೇಕರು ಬೀಳುವುದಕ್ಕೂ ಏಳುವುದಕ್ಕೂ ಈ ಮಗು ನೇಮಕವಾಗಿದೆ, ಜನರು ಎದುರು ಮಾತನಾಡುವುದಕ್ಕೆ ಈ ಮಗು ಗುರುತಾಗಿರುವದು. 35 ಹೀಗೆ ಅನೇಕ ಹೃದಯಗಳ ಆಲೋಚನೆಗಳು ಪ್ರಕಟವಾಗುವವು. ನಿನ್ನ ಸ್ವಂತ ಪ್ರಾಣವನ್ನು ಸಹ ಖಡ್ಗವು ತಿವಿಯುವುದು” ಎಂದನು.
36 ಅಲ್ಲಿ ಆಶೇರನ ಗೋತ್ರದ ಫನೂಯೇಲನ ಮಗಳಾದ ಅನ್ನಳೆಂಬ ಒಬ್ಬ ಬಹು ಮುಪ್ಪಿನ ಪ್ರವಾದಿನಿಯಿದ್ದಳು. ಅವಳು ಮದುವೆಯಾಗಿ ಗಂಡನೊಂದಿಗೆ ಏಳು ವರ್ಷ ಬಾಳಿದ್ದಳು. 37 ಅವಳು ಎಂಬತ್ತನಾಲ್ಕು ವರ್ಷ ವಿಧವೆಯಾಗಿದ್ದು, ದೇವಾಲಯವನ್ನು ಬಿಟ್ಟುಹೋಗದೆ ಉಪವಾಸಗಳಿಂದಲೂ ಪ್ರಾರ್ಥನೆಗಳಿಂದಲೂ ರಾತ್ರಿ ಹಗಲೂ ಆರಾಧನೆ ಮಾಡುತ್ತಿದ್ದಳು. 38 ಆ ಸಂದರ್ಭದಲ್ಲಿ ಅನ್ನಳು ಬಂದು, ದೇವರನ್ನು ಕೊಂಡಾಡಿ ಯೆರೂಸಲೇಮಿನಲ್ಲಿ ವಿಮೋಚನೆಗಾಗಿ ಎದುರು ನೋಡುತ್ತಿದ್ದವರೆಲ್ಲರೊಂದಿಗೆ ಶಿಶುವಿನ ವಿಷಯವಾಗಿ ಮಾತನಾಡಿದಳು.
39 ಯೋಸೇಫನೂ ಮರಿಯಳೂ ಕರ್ತದೇವರ ನಿಯಮದ ಪ್ರಕಾರ ಎಲ್ಲವನ್ನು ಮಾಡಿ ಮುಗಿಸಿದ ಮೇಲೆ, ತಮ್ಮ ಊರಾಗಿದ್ದ ಗಲಿಲಾಯದ ನಜರೇತಿಗೆ ಹಿಂದಿರುಗಿದರು. 40 ಆ ಶಿಶುವು ಬೆಳೆದು ಬಲಗೊಂಡು; ಜ್ಞಾನದಲ್ಲಿ ವೃದ್ಧಿಯಾಯಿತು ಮತ್ತು ದೇವರ ಕೃಪೆಯು ಶಿಶುವಿನ ಮೇಲೆ ಇತ್ತು.
49 ಯೇಸು ಅವರಿಗೆ, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕೆಂಬುದು ನಿಮಗೆ ತಿಳಿಯಲಿಲ್ಲವೋ?” ಎಂದರು. 50 ಆದರೆ ಯೇಸು ಅವರಿಗೆ ಹೇಳಿದ ಮಾತನ್ನು ಅವರು ಗ್ರಹಿಸಲಿಲ್ಲ.
51 ಬಳಿಕ ಯೇಸು ಅವರ ಜೊತೆಯಲ್ಲಿ ನಜರೇತಿಗೆ ಬಂದು ಅವರಿಗೆ ಅಧೀನರಾಗಿದ್ದರು. ಆದರೆ ಯೇಸುವಿನ ತಾಯಿಯು ಈ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿ ಸಂಗ್ರಹಿಸಿ ಇಟ್ಟುಕೊಂಡಳು. 52 ಯೇಸು ಜ್ಞಾನದಲ್ಲಿಯೂ ದೇಹಬಲದಲ್ಲಿಯೂ ಬೆಳೆದು, ದೇವರ ಮೆಚ್ಚುಗೆ ಮತ್ತು ಮನುಷ್ಯರ ಮೆಚ್ಚುಗೆ ಹೆಚ್ಚಾಗಿ ಅವರಿಗೆ ದೊರೆಯಿತು.
<- ಲೂಕ 1ಲೂಕ 3 ->