1 ಕೈಸರ್ ತಿಬೇರಿಯನ ಆಳ್ವಿಕೆಯ ಕಾಲದ ಹದಿನೈದನೆಯ ವರ್ಷದಲ್ಲಿ ಪೊಂತ್ಯ ಪಿಲಾತನು ಯೂದಾಯಕ್ಕೆ ಅಧಿಪತಿಯೂ ಹೆರೋದನು ಗಲಿಲಾಯಕ್ಕೆ ಚತುರಾಧಿಪತಿಯೂ[a] ಅವನ ಸಹೋದರ ಫಿಲಿಪ್ಪನು ಇತುರಾಯ ಮತ್ತು ತ್ರಕೋನಿತಿ ಸೀಮೆಗೆ ಚತುರಾಧಿಪತಿಯೂ ಲುಸನ್ಯನು ಅಬಿಲೇನೆಗೆ ಚತುರಾಧಿಪತಿಯೂ ಆಗಿದ್ದಾಗ, 2 ಅನ್ನನು ಮತ್ತು ಕಾಯಫನು ಮಹಾಯಾಜಕರು ಆಗಿದ್ದ ಸಮಯದಲ್ಲಿ, ಅರಣ್ಯದಲ್ಲಿದ್ದ ಜಕರೀಯನ ಮಗ ಯೋಹಾನನಿಗೆ ದೇವರ ವಾಕ್ಯವುಂಟಾಯಿತು. 3 ಅವನು ಯೊರ್ದನ್ ನದಿಯ ಸುತ್ತಲಿರುವ ಎಲ್ಲಾ ಸೀಮೆಗಳಿಗೆ ಬಂದು, ಪಾಪಗಳ ಪರಿಹಾರಕ್ಕಾಗಿ ದೇವರ ಕಡೆಗೆ ತಿರುಗಿಕೊಂಡು ದೀಕ್ಷಾಸ್ನಾನ ಪಡೆಯುವದರ ಕುರಿತು ಸಾರಿ ಹೇಳಿದನು. 4 ಇದರ ಬಗ್ಗೆ ಪ್ರವಾದಿಯಾದ ಯೆಶಾಯನ ಗ್ರಂಥದಲ್ಲಿ ಮುಂಚಿತವಾಗಿ ಹೀಗೆಂದು ಬರೆದಿದೆ:
7 ಆಗ ತನ್ನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಹೊರಟು ಬಂದ ಜನಸಮೂಹಕ್ಕೆ, ಯೋಹಾನನು, “ಎಲೈ ಸರ್ಪಸಂತತಿಯವರೇ! ಮುಂದೆ ಬರುವ ಕೋಪಾಗ್ನಿಯಿಂದ ತಪ್ಪಿಸಿಕೊಳ್ಳಲು ನಿಮ್ಮನ್ನು ಎಚ್ಚರಿಸಿದವರು ಯಾರು? 8 ಹಾಗಾದರೆ ದೇವರ ಕಡೆಗೆ ತಿರುಗಿಕೊಂಡದ್ದಕ್ಕೆ ತಕ್ಕ ಫಲಗಳನ್ನು ತೋರಿಸಿರಿ. ‘ಅಬ್ರಹಾಮನು ನಮಗೆ ತಂದೆಯಾಗಿದ್ದಾನೆ,’ ಎಂದು ನಿಮ್ಮೊಳಗೆ ಕೊಚ್ಚಿಕೊಳ್ಳಬೇಡಿರಿ. ಈ ಕಲ್ಲುಗಳಿಂದಲೂ ದೇವರು ಅಬ್ರಹಾಮನಿಗೆ ಮಕ್ಕಳನ್ನು ಹುಟ್ಟಿಸಲು ಶಕ್ತರೆಂದು ನಾನು ನಿಮಗೆ ಹೇಳುತ್ತೇನೆ. 9 ಮರಗಳ ಬೇರಿಗೆ ಈಗಾಗಲೇ ಕೊಡಲಿ ಬಿದ್ದಿದೆ, ಒಳ್ಳೆಯ ಫಲವನ್ನು ಕೊಡದ ಪ್ರತಿಯೊಂದು ಮರವನ್ನು ಕಡಿದು ಬೆಂಕಿಯಲ್ಲಿ ಹಾಕಲಾಗುವುದು,” ಎಂದು ಹೇಳಿದನು.
10 ಆಗ ಜನರು, “ಹಾಗಾದರೆ ನಾವೇನು ಮಾಡಬೇಕು?” ಎಂದು ಕೇಳಿದರು.
11 ಅದಕ್ಕೆ ಯೋಹಾನನು ಉತ್ತರವಾಗಿ, “ಎರಡು ಅಂಗಿಗಳಿದ್ದರೆ ಇಲ್ಲದವನಿಗೆ ಒಂದನ್ನು ಕೊಡಲಿ, ಆಹಾರವುಳ್ಳವನು ಇಲ್ಲದವನೊಂದಿಗೆ ಹಂಚಿಕೊಳ್ಳಲಿ,” ಎಂದು ಹೇಳಿದನು.
12 ತರುವಾಯ ಸುಂಕದವರು ಸಹ ದೀಕ್ಷಾಸ್ನಾನ ಮಾಡಿಸಿಕೊಳ್ಳುವುದಕ್ಕಾಗಿ ಬಂದು ಯೋಹಾನನಿಗೆ, “ಬೋಧಕರೇ, ನಾವೇನು ಮಾಡಬೇಕು?” ಎಂದು ಕೇಳಿದರು.
13 ಅದಕ್ಕೆ ಯೋಹಾನನು ಅವರಿಗೆ, “ನಿಮಗೆ ಆಜ್ಞಾಪಿಸಿದ್ದಕ್ಕಿಂತ ಹೆಚ್ಚೇನೂ ವಸೂಲಿ ಮಾಡಬೇಡಿರಿ,” ಎಂದನು.
14 ಅದರಂತೆಯೇ ಸೈನಿಕರು, “ನಾವೇನು ಮಾಡಬೇಕು?” ಎಂದು ಕೇಳಿದರು.
ಅದಕ್ಕೆ ಯೋಹಾನನು, “ಯಾರನ್ನೂ ಬೆದರಿಸಿ ಹಣ ತೆಗೆದುಕೊಳ್ಳಬೇಡಿರಿ. ಯಾರ ಮೇಲೆಯೂ ಸುಳ್ಳು ದೂರು ಹೇಳಬೇಡಿರಿ. ನಿಮ್ಮ ಸಂಬಳದಲ್ಲಿ ತೃಪ್ತರಾಗಿರಿ,” ಎಂದು ಹೇಳಿದನು.
15 ಆಗ ಜನರು ಕ್ರಿಸ್ತನಿಗಾಗಿ ಎದುರುನೋಡುತ್ತಾ ಇದ್ದದ್ದರಿಂದ, ಯೋಹಾನನೇ ಕ್ರಿಸ್ತನಾಗಿರಬಹುದೋ ಏನೋ ಎಂದು ತಮ್ಮ ಹೃದಯಗಳಲ್ಲಿ ಆಲೋಚಿಸುತ್ತಿದ್ದರು. 16 ಯೋಹಾನನು ಉತ್ತರವಾಗಿ ಅವರೆಲ್ಲರಿಗೆ: “ನಾನಂತೂ ನಿಮಗೆ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತೇನೆ. ಆದರೆ ನನಗಿಂತ ಶಕ್ತರೊಬ್ಬರು ಬರುತ್ತಾರೆ, ಅವರ ಪಾದರಕ್ಷೆಗಳ ದಾರವನ್ನು ಬಿಚ್ಚುವ ಗುಲಾಮನಾಗಿರುವುದಕ್ಕೂ ನಾನು ಯೋಗ್ಯನಲ್ಲ. ಅವರು ಪವಿತ್ರಾತ್ಮನಿಂದಲೂ ಬೆಂಕಿಯಿಂದಲೂ ನಿಮಗೆ ದೀಕ್ಷಾಸ್ನಾನ ಮಾಡಿಸುವರು. 17 ಮೊರವು ಅವರ ಕೈಯಲ್ಲಿದೆ, ಅವರು ತಮ್ಮ ಕಣವನ್ನು ಶುದ್ಧಮಾಡಿ ಗೋಧಿಯನ್ನು ತಮ್ಮ ಕಣಜದಲ್ಲಿ ಕೂಡಿಸುವರು. ಆದರೆ ಹೊಟ್ಟನ್ನು ಆರಿಸಲಾಗದ ಬೆಂಕಿಯಲ್ಲಿ ಸುಟ್ಟುಹಾಕುವರು,” ಎಂದು ಹೇಳಿದನು. 18 ಯೋಹಾನನು ಇನ್ನೂ ಅನೇಕ ರೀತಿಗಳಿಂದ ಜನರನ್ನು ಎಚ್ಚರಿಸಿ ಅವರಿಗೆ ಸುವಾರ್ತೆಯನ್ನು ಸಾರುತ್ತಿದ್ದನು.
19 ಚತುರಾಧಿಪತಿಯಾದ ಹೆರೋದನು, ತನ್ನ ಸಹೋದರ ಫಿಲಿಪ್ಪನ ಹೆಂಡತಿ ಹೆರೋದ್ಯಳನ್ನು ಇಟ್ಟುಕೊಂಡಿದ್ದನು ಮತ್ತು ಹೆರೋದನು ಮಾಡಿದ್ದ ಎಲ್ಲಾ ದುಷ್ಕೃತ್ಯಗಳಿಗಾಗಿ ಯೋಹಾನನು ಅವನನ್ನು ಬಹಿರಂಗವಾಗಿ ಗದರಿಸಿದ್ದರಿಂದ, 20 ಹೆರೋದನು ಯೋಹಾನನನ್ನು ಸೆರೆಯಲ್ಲಿ ಬಂಧಿಸಿ, ತನ್ನ ಎಲ್ಲಾ ದುಷ್ಕೃತ್ಯಗಳೊಂದಿಗೆ ಮತ್ತೊಂದನ್ನು ಕೂಡಿಸಿದ್ದನು.
ಯೇಸುವಿನ ದೀಕ್ಷಾಸ್ನಾನ ಹಾಗೂ ವಂಶಾವಳಿ
21 ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಳ್ಳುತ್ತಿದ್ದರು, ಆಗ ಯೇಸು ಸಹ ದೀಕ್ಷಾಸ್ನಾನ ಮಾಡಿಸಿಕೊಂಡು ಪ್ರಾರ್ಥಿಸುತ್ತಿರುವಲ್ಲಿ, ಸ್ವರ್ಗವು ತೆರೆಯಿತು. 22 ಆಗ ಪವಿತ್ರಾತ್ಮರು ದೇಹಾಕಾರವಾಗಿ ಪಾರಿವಾಳದಂತೆ ಯೇಸುವಿನ ಮೇಲೆ ಇಳಿದರು. ಆಗ, “ನೀನು ನನ್ನ ಪ್ರಿಯ ಪುತ್ರನು, ನಿನ್ನನ್ನು ಅಪಾರವಾಗಿ ಮೆಚ್ಚಿದ್ದೇನೆ,” ಎಂಬ ಧ್ವನಿಯು ಪರಲೋಕದಿಂದ ಕೇಳಿಬಂತು.
23 ಯೇಸು ಸೇವೆಯನ್ನು ಪ್ರಾರಂಭಿಸಿದಾಗ ಹೆಚ್ಚು ಕಡಿಮೆ ಮೂವತ್ತು ವರ್ಷದವರಾಗಿದ್ದರು. ಯೇಸು ಜನರ ಎಣಿಕೆಯಲ್ಲಿ ಯೋಸೇಫನ ಮಗನು.