9 ಯೇಸು ಅವನ ಈ ಮಾತುಗಳನ್ನು ಕೇಳಿದಾಗ, ಆಶ್ಚರ್ಯಪಟ್ಟು ತಿರುಗಿಕೊಂಡು ತಮ್ಮನ್ನು ಹಿಂಬಾಲಿಸುತ್ತಿದ್ದ ಗುಂಪಿಗೆ, “ನಾನು ನಿಮಗೆ ಹೇಳುವುದೇನೆಂದರೆ, ಇಂಥ ಮಹಾ ನಂಬಿಕೆಯನ್ನು ನಾನು ಇಸ್ರಾಯೇಲ್ ಜನರಲ್ಲಿಯೂ ಸಹ ಕಾಣಲಿಲ್ಲ,” ಎಂದರು. 10 ಶತಾಧಿಪತಿಯ ಕಡೆಯಿಂದ ಬಂದವರು ಮನೆಗೆ ಹಿಂದಿರುಗಿದಾಗ ಅಸ್ವಸ್ಥನಾಗಿದ್ದ ಆ ಸೇವಕ ಸ್ವಸ್ಥನಾಗಿರುವುದನ್ನು ಕಂಡರು.
14 ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು. 15 ಆಗ ಸತ್ತವನು ಎದ್ದು ಕುಳಿತುಕೊಂಡು ಮಾತನಾಡಲಾರಂಭಿಸಿದನು. ಯೇಸು ಅವನನ್ನು ಅವನ ತಾಯಿಗೆ ಒಪ್ಪಿಸಿದರು.
16 ಆಗ ಅವರೆಲ್ಲರೂ ಭಯಭಕ್ತಿಯಿಂದ ಕೂಡಿದವರಾಗಿ, “ನಮ್ಮ ಮಧ್ಯದಲ್ಲಿ ಒಬ್ಬ ಮಹಾ ಪ್ರವಾದಿಯು ಎದ್ದಿದ್ದಾರೆ; ದೇವರು ತಮ್ಮ ಜನರಿಗೆ ಸಹಾಯಮಾಡಲು ಬಂದಿದ್ದಾರೆ,” ಎಂದು ದೇವರನ್ನು ಮಹಿಮೆಪಡಿಸುತ್ತಾ ಹೇಳಿದರು. 17 ಯೇಸುವಿನ ವಿಷಯವಾದ ಈ ಸುದ್ದಿಯು ಯೂದಾಯದ ಎಲ್ಲಾ ಪ್ರಾಂತಕ್ಕೂ, ಸುತ್ತಲಿನ ಎಲ್ಲಾ ಪ್ರಾಂತಕ್ಕೂ ಹರಡಿತು.
20 ಅವರು ಯೇಸುವಿನ ಬಳಿಗೆ ಬಂದು, “ ‘ಬರಬೇಕಾದವರು ನೀವೋ? ಇಲ್ಲವೆ ನಾವು ಬೇರೊಬ್ಬರಿಗಾಗಿ ಎದುರು ನೋಡಬೇಕೋ?’ ಎಂದು ಕೇಳುವುದಕ್ಕಾಗಿ ಸ್ನಾನಿಕ ಯೋಹಾನನು ನಮ್ಮನ್ನು ನಿಮ್ಮ ಬಳಿಗೆ ಕಳುಹಿಸಿದ್ದಾನೆ,” ಎಂದು ಹೇಳಿದರು.
21 ಅದೇ ಸಮಯದಲ್ಲಿ ರೋಗಗಳಿಂದಲೂ ವ್ಯಾಧಿಗಳಿಂದಲೂ ದುರಾತ್ಮಗಳಿಂದಲೂ ಪೀಡಿತರಾದ ಅನೇಕರನ್ನು ಯೇಸು ಗುಣಪಡಿಸುತ್ತಿದ್ದರು, ಕುರುಡರಾದ ಅನೇಕರಿಗೆ ದೃಷ್ಟಿ ನೀಡುತ್ತಿದ್ದರು. 22 ತರುವಾಯ ಯೇಸು ಅವರಿಗೆ, “ನೀವು ಕಂಡು ಕೇಳಿದವುಗಳನ್ನು ಹೋಗಿ ಯೋಹಾನನಿಗೆ ತಿಳಿಸಿರಿ: ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಮರಣಹೊಂದಿದವರು ಜೀವ ಪಡೆಯುತ್ತಾರೆ ಮತ್ತು ಬಡವರಿಗೆ ಸುವಾರ್ತೆ ಸಾರಲಾಗುತ್ತದೆ.[c] 23 ನನ್ನ ವಿಷಯದಲ್ಲಿ ವಿಶ್ವಾಸ ಕಳೆದುಕೊಳ್ಳದವನೇ ಧನ್ಯನು,” ಎಂದರು.
24 ಯೋಹಾನನ ಶಿಷ್ಯರು ಹೊರಟುಹೋದ ಮೇಲೆ, ಯೇಸು ಯೋಹಾನನ ವಿಷಯವಾಗಿ ಮಾತನಾಡಲಾರಂಭಿಸಿ ಜನರಿಗೆ, “ನೀವು ಯಾವುದನ್ನು ಕಾಣುವುದಕ್ಕಾಗಿ ಅರಣ್ಯಕ್ಕೆ ಹೋದಿರಿ? ಗಾಳಿಗೆ ಓಲಾಡುವ ದಂಟನ್ನೋ? 25 ಇಲ್ಲವಾದರೆ, ನೀವು ಏನನ್ನು ಕಾಣುವುದಕ್ಕಾಗಿ ಹೋದಿರಿ? ನಯವಾದ ಉಡುಪನ್ನು ಧರಿಸಿದ್ದ ಮನುಷ್ಯನನ್ನೋ? ಶೋಭಾಯಮಾನವಾದ ಉಡುಪನ್ನು ಧರಿಸಿಕೊಂಡು ಸುಖವಾಗಿ ಜೀವಿಸುವವರು ಅರಮನೆಗಳಲ್ಲಿ ಇರುತ್ತಾರೆ. 26 ಹಾಗಾದರೆ ಏನು ಕಾಣುವುದಕ್ಕಾಗಿ ಹೋದಿರಿ? ಒಬ್ಬ ಪ್ರವಾದಿಯನ್ನೋ? ಹೌದು, ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದಿರಿ, ಎಂದು ನಾನು ನಿಮಗೆ ಹೇಳುತ್ತೇನೆ. 27 ಯಾರ ವಿಷಯವಾಗಿ ಪವಿತ್ರ ವೇದದಲ್ಲಿ ಬರೆದಿತ್ತೋ ಅವನೇ ಇವನು:
29 ಯೋಹಾನನಿಂದ ಉಪದೇಶ ಕೇಳಿದ ಎಲ್ಲಾ ಜನರೂ ಸುಂಕದವರೂ ಸಹ, ಯೇಸುವಿನ ಮಾತುಗಳನ್ನು ಕೇಳಿದಾಗ, ದೇವರ ಮಾರ್ಗವು ಸರಿಯಾಗಿದೆಯೆಂದು ಒಪ್ಪಿಕೊಂಡರು, ಏಕೆಂದರೆ ಅವರು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಂಡಿದ್ದರು. 30 ಆದರೆ ಫರಿಸಾಯರೂ ಮೋಶೆಯ ನಿಯಮ ಪಂಡಿತರೂ ಅವನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳದೆ ಹೋದದ್ದರಿಂದ ತಮ್ಮ ವಿಷಯದಲ್ಲಿರುವ ದೇವರ ಸಂಕಲ್ಪವನ್ನು ತಿರಸ್ಕಾರ ಮಾಡಿದರು.
31 ಅನಂತರ ಯೇಸು ಜನರಿಗೆ, “ಈ ಕಾಲದ ಜನರನ್ನು, ನಾನು ಯಾವುದಕ್ಕೆ ಹೋಲಿಸಲಿ? ಅವರು ಯಾವುದಕ್ಕೆ ಹೋಲಿಕೆಯಾಗಿದ್ದಾರೆ? 32 ಅವರು ಸಂತೆಯಲ್ಲಿ ಕುಳಿತುಕೊಂಡು ಒಬ್ಬರನ್ನೊಬ್ಬರು ಕರೆಯುತ್ತಾ:
33 “ಸ್ನಾನಿಕ ಯೋಹಾನನು ರೊಟ್ಟಿಯನ್ನು ತಿನ್ನದೆಯೂ ದ್ರಾಕ್ಷಾರಸವನ್ನು ಕುಡಿಯದೆಯೂ ಬಂದನು, ಅದಕ್ಕೆ ನೀವು, ‘ಅವನಿಗೆ ದೆವ್ವ ಹಿಡಿದಿದೆ,’ ಎನ್ನುತ್ತೀರಿ. 34 ಮನುಷ್ಯಪುತ್ರನಾದ ನಾನು ಅನ್ನಪಾನ ಸೇವಿಸುವವನಾಗಿ ಬಂದೆನು, ಆದರೆ ನೀವು, ‘ಇಗೋ, ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಗಳ ಸ್ನೇಹಿತನು,’ ಎನ್ನುತ್ತೀರಿ. 35 ಆದರೆ ಜ್ಞಾನವನ್ನು ಅನ್ವಯಿಸಿಕೊಳ್ಳುವಾಗಲೇ ಜ್ಞಾನದ ಗುಣಲಕ್ಷಣಗಳು ಸ್ಪಷ್ಟವಾಗಿರುವುದು,” ಎಂದರು.
39 ಆಗ ಯೇಸುವನ್ನು ಆಮಂತ್ರಿಸಿದ ಫರಿಸಾಯನು, ಅದನ್ನು ಕಂಡು ತನ್ನೊಳಗೆ, “ಈ ಮನುಷ್ಯ ಒಬ್ಬ ಪ್ರವಾದಿಯಾಗಿದ್ದರೆ, ತನ್ನನ್ನು ಮುಟ್ಟುತ್ತಿದ್ದವಳು ಯಾರು, ಎಂಥಾ ಹೆಂಗಸು ಎಂದು ತಿಳಿದುಕೊಳ್ಳುತ್ತಿದ್ದನು. ಅವಳು ಒಬ್ಬ ಪಾಪಿ,” ಎಂದು ಅಂದುಕೊಂಡನು.
40 ಆಗ ಯೇಸು ಅವನಿಗೆ, “ಸೀಮೋನನೇ, ನಾನು ನಿನಗೆ ಹೇಳಬೇಕಾದ ಒಂದು ವಿಷಯವಿದೆ,” ಎಂದರು.
41 ಆಗ ಯೇಸು, “ಸಾಲಕೊಡುವ ಒಬ್ಬನಿಗೆ ಇಬ್ಬರು ಸಾಲಗಾರರಿದ್ದರು, ಒಬ್ಬನು ಐದು ನೂರು ಬೆಳ್ಳಿ ನಾಣ್ಯಗಳನ್ನೂ,[e] ಮತ್ತೊಬ್ಬನು ಐವತ್ತು ಬೆಳ್ಳಿ ನಾಣ್ಯಗಳನ್ನೂ ಕೊಡಬೇಕಾಗಿತ್ತು. 42 ಆದರೆ ಅವರಿಬ್ಬರಿಗೂ ಸಾಲತೀರಿಸುವುದಕ್ಕೆ ಹಣ ಇರಲಿಲ್ಲ. ಅವನು ಅವರಿಬ್ಬರ ಸಾಲವನ್ನೂ ರದ್ದುಮಾಡಿಬಿಟ್ಟನು. ಆದ್ದರಿಂದ ಅವರಲ್ಲಿ ಯಾರು ಬಹಳವಾಗಿ ಅವನನ್ನು ಪ್ರೀತಿಸುವರು?” ಎಂದು ಕೇಳಿದರು.
43 ಅದಕ್ಕೆ ಸೀಮೋನನು ಉತ್ತರವಾಗಿ, “ಯಾರಿಗೆ ಅವನು ಹೆಚ್ಚಾಗಿ ರದ್ದು ಮಾಡಿದನೋ ಅವನೇ ಎಂದು ತೋರುತ್ತದೆ,” ಎಂದನು.
44 ತರುವಾಯ ಯೇಸು ಆ ಸ್ತ್ರೀಯ ಕಡೆಗೆ ತಿರುಗಿಕೊಂಡು ಸೀಮೋನನಿಗೆ, “ಈ ಸ್ತ್ರೀಯನ್ನು ಕಂಡಿದ್ದೀಯಾ? ನಾನು ನಿನ್ನ ಮನೆಯೊಳಗೆ ಪ್ರವೇಶಿಸಿದಾಗ ನನ್ನ ಪಾದಗಳಿಗೆ ನೀನು ನೀರು ಕೊಡಲಿಲ್ಲ. ಇವಳಾದರೋ ನನ್ನ ಪಾದಗಳನ್ನು ತನ್ನ ಕಣ್ಣೀರಿನಿಂದ ತೊಳೆದು ತನ್ನ ತಲೆಕೂದಲಿನಿಂದ ಅವುಗಳನ್ನು ಒರೆಸಿದ್ದಾಳೆ. 45 ನೀನು ನನಗೆ ಮುದ್ದು ಕೊಡಲಿಲ್ಲ. ಆದರೆ ನಾನು ಒಳಗೆ ಬಂದಾಗಿನಿಂದ ಈ ಸ್ತ್ರೀಯು ನನ್ನ ಪಾದಗಳಿಗೆ ಮುದ್ದಿಡುವುದನ್ನು ಬಿಡಲಿಲ್ಲ. 46 ನೀನು ನನ್ನ ತಲೆಗೆ ಎಣ್ಣೆ ಹಚ್ಚಲಿಲ್ಲ, ಆದರೆ ಈ ಸ್ತ್ರೀಯು ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿದ್ದಾಳೆ. 47 ಬಹಳವಾಗಿರುವ ಇವಳ ಪಾಪಗಳು ಕ್ಷಮಿಸಲಾಗಿವೆ. ಏಕೆಂದರೆ ಇವಳು ಬಹಳವಾಗಿ ಪ್ರೀತಿಸಿದಳು. ಆದರೆ ಕಡಿಮೆ ಕ್ಷಮೆ ಪಡೆದವನು ಕಡಿಮೆ ಪ್ರೀತಿಸುವನು ಎಂದು ನಾನು ನಿನಗೆ ಹೇಳುತ್ತೇನೆ,” ಎಂದರು.
48 ಯೇಸು ಆಕೆಗೆ, “ನಿನ್ನ ಪಾಪಗಳು ಕ್ಷಮಿಸಲಾಗಿವೆ,” ಎಂದರು.
49 ಯೇಸುವಿನ ಸಂಗಡ ಊಟಕ್ಕೆ ಕುಳಿತವರು, “ಪಾಪಗಳನ್ನು ಸಹ ಕ್ಷಮಿಸುವುದಕ್ಕೆ ಈತನು ಯಾರು?” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳಲಾರಂಭಿಸಿದರು.
50 ಯೇಸು ಆ ಸ್ತ್ರೀಗೆ, “ನಿನ್ನ ನಂಬಿಕೆಯು ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು,” ಎಂದರು.
<- ಲೂಕ 6ಲೂಕ 8 ->- a ಶತಾಧಿಪತಿ ನೂರು ಮಂದಿ ಸೈನಿಕರಿಗೆ ಅಧಿಪತಿ
- b ಯೆಹೂದ್ಯರು ಕ್ರಿಸ್ತನನ್ನು ಮೆಸ್ಸೀಯನನ್ನು ಎದುರುನೋಡುತ್ತಿದ್ದರು, ಆದ್ದರಿಂದ ಯೋಹಾನನು ಈ ಪ್ರಶ್ನೆಯನ್ನು ಕೇಳಿದನು
- c ಯೆಶಾಯ 35:5,6; 61:1
- d ಮಲಾಕಿ 3:1
- e ಗ್ರೀಕ್ ಭಾಷೆಯಲ್ಲಿ ದಿನಾರಿ. ರೋಮನ್ನರ ಒಂದು ದಿನಾರಿಯ ಬೆಳ್ಳಿ ನಾಣ್ಯವು, ಒಬ್ಬ ಸಾಮಾನ್ಯ ಕೂಲಿಗಾರನ ಒಂದು ದಿನದ ಕೂಲಿಗೆ ಸಮವಾಗಿತ್ತು. ನೋಡಿರಿ ಮತ್ತಾಯ 20:2