4 ಪೇತ್ರನು ಯೇಸುವಿಗೆ, “ಕರ್ತನೇ, ನಾವು ಇಲ್ಲಿಯೇ ಇರುವುದು ಒಳ್ಳೆಯದು. ನಿಮಗೆ ಮನಸ್ಸಿದ್ದರೆ ನಾನು ನಿಮಗೊಂದು, ಮೋಶೆಗೊಂದು, ಎಲೀಯನಿಗೊಂದರಂತೆ ಮೂರು ಗುಡಾರಗಳನ್ನು ಕಟ್ಟುವೆನು,” ಎಂದು ಹೇಳಿದನು.
5 ಪೇತ್ರನು ಇನ್ನೂ ಮಾತನಾಡುತ್ತಿರುವಾಗಲೇ, ಪ್ರಕಾಶಮಾನವಾದ ಮೇಘವು ಅವರ ಮೇಲೆ ಕವಿಯಿತು. ಆಗ, “ಈತನು ಪ್ರಿಯನಾಗಿರುವ ನನ್ನ ಮಗನು. ಈತನನ್ನು ನಾನು ಸಂಪೂರ್ಣವಾಗಿ ಮೆಚ್ಚಿದ್ದೇನೆ. ಈತನ ಮಾತನ್ನು ನೀವು ಕೇಳಿರಿ,” ಎಂದು ಮೇಘದೊಳಗಿಂದ ಒಂದು ಧ್ವನಿ ಕೇಳಿತು.
6 ಶಿಷ್ಯರು ಇದನ್ನು ಕೇಳಿ ಬಹಳವಾಗಿ ಹೆದರಿ ಬೋರಲು ಬಿದ್ದರು. 7 ಆಗ ಯೇಸು ಬಂದು ಅವರನ್ನು ಮುಟ್ಟಿ, “ಏಳಿರಿ, ಹೆದರಬೇಡಿರಿ,” ಎಂದು ಹೇಳಿದರು. 8 ಅವರು ತಮ್ಮ ಕಣ್ಣೆತ್ತಿ ನೋಡಿದಾಗ ಯೇಸುವನ್ನೇ ಹೊರತು ಮತ್ತಾರನ್ನೂ ಕಾಣಲಿಲ್ಲ.
9 ಅವರು ಬೆಟ್ಟದಿಂದ ಇಳಿದು ಬರುತ್ತಿದ್ದಾಗ, ಯೇಸು ಅವರಿಗೆ, “ಮನುಷ್ಯಪುತ್ರನಾದ ನಾನು ಸತ್ತವರೊಳಗಿಂದ ಎದ್ದು ಬರುವವರೆಗೆ ಈ ದರ್ಶನವನ್ನು ಯಾರಿಗೂ ಹೇಳಬಾರದು,” ಎಂದು ಅವರಿಗೆ ಆಜ್ಞಾಪಿಸಿದರು.
10 ಆಗ ಯೇಸುವಿನ ಶಿಷ್ಯರು ಅವರಿಗೆ, “ಎಲೀಯನು ಮೊದಲು ಬರುವುದು ಅಗತ್ಯವೆಂದು ನಿಯಮ ಬೋಧಕರು ಏಕೆ ಹೇಳುತ್ತಾರೆ?” ಎಂದು ಕೇಳಿದರು.
11 ಯೇಸು ಉತ್ತರವಾಗಿ ಅವರಿಗೆ, “ಎಲೀಯನು ಮೊದಲು ಬಂದು ಎಲ್ಲವುಗಳನ್ನು ಪುನಃ ಸ್ಥಾಪಿಸುವುದು ನಿಜವೇ. 12 ಆದರೆ ಎಲೀಯನು ಆಗಲೇ ಬಂದಾಯಿತು; ಅವರು ಅವನನ್ನು ಅರಿಯದೆ ತಮಗೆ ಇಷ್ಟಬಂದಂತೆ ಅವನಿಗೆ ಮಾಡಿದ್ದಾಯಿತು. ಅದರಂತೆಯೇ ಮನುಷ್ಯಪುತ್ರನಾದ ನಾನು ಸಹ ಅವರಿಂದ ಕಷ್ಟವನ್ನು ಅನುಭವಿಸುವೆನು ಎಂದು ನಾನು ನಿಮಗೆ ಹೇಳುತ್ತೇನೆ,” ಎಂದರು. 13 ಸ್ನಾನಿಕ ಯೋಹಾನನ ವಿಷಯದಲ್ಲಿ ಯೇಸು ತಮ್ಮೊಂದಿಗೆ ಮಾತನಾಡಿದನೆಂದು ಶಿಷ್ಯರು ಆಗ ಗ್ರಹಿಸಿಕೊಂಡರು.
17 ಆಗ ಯೇಸು, “ವಿಶ್ವಾಸವಿಲ್ಲದ ಮೂರ್ಖ ಸಂತತಿಯೇ, ಇನ್ನೂ ಎಷ್ಟು ಕಾಲ ನಾನು ನಿಮ್ಮೊಂದಿಗಿರಲಿ? ಎಷ್ಟು ಕಾಲ ನಾನು ನಿಮ್ಮನ್ನು ಸಹಿಸಲಿ? ಅವನನ್ನು ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದು ಹೇಳಿದರು. 18 ಆಗ ಯೇಸು ದೆವ್ವವನ್ನು ಗದರಿಸಲಾಗಿ ಅದು ಹುಡುಗನೊಳಗಿಂದ ಹೊರಟುಹೋಯಿತು. ಆಗ ಆ ಹುಡುಗನು ಅದೇ ಗಳಿಗೆಯಲ್ಲಿಯೇ ಗುಣಮುಖನಾದನು.
19 ತರುವಾಯ ಶಿಷ್ಯರು ಪ್ರತ್ಯೇಕವಾಗಿ ಯೇಸುವಿನ ಬಳಿಗೆ ಬಂದು, “ಅದನ್ನು ಓಡಿಸುವುದಕ್ಕೆ ನಮ್ಮಿಂದ ಏಕೆ ಆಗಲಿಲ್ಲ?” ಎಂದು ಕೇಳಿದರು.
20 ಯೇಸು ಅವರಿಗೆ, “ನಿಮ್ಮ ಅಪೂರ್ಣನಂಬಿಕೆಯೇ ಇದಕ್ಕೆ ಕಾರಣ. ಸಾಸಿವೆ ಕಾಳಿನಷ್ಟು ನಂಬಿಕೆ ನಿಮಗಿರುವುದಾದರೆ ನೀವು ಈ ಬೆಟ್ಟಕ್ಕೆ, ‘ಇಲ್ಲಿಂದ ಆ ಸ್ಥಳಕ್ಕೆ ಹೋಗು’ ಎಂದು ಹೇಳಿದರೆ ಅದು ಹೋಗುವುದು. ಯಾವುದೂ ನಿಮಗೆ ಅಸಾಧ್ಯವಾಗಿರುವುದಿಲ್ಲ. 21 ಆದರೂ ದೇವರ ಪ್ರಾರ್ಥನೆ ಉಪವಾಸಗಳಿಂದ ಹೊರತು ಬೇರೆ ಯಾವುದರಿಂದಲೂ ಈ ರೀತಿಯಾದ ದೆವ್ವ ಹೊರಟು ಹೋಗುವುದಿಲ್ಲ,” ಎಂದರು.[a]
25 ಅದಕ್ಕೆ ಪೇತ್ರನು, “ಹೌದು, ಕಟ್ಟುತ್ತಾರೆ,” ಎಂದನು.
26 “ಪರರಿಂದ,” ಎಂದು ಪೇತ್ರನು ಹೇಳಿದನು.