4 ಆಗ ಅವರು ಹೊರಟುಹೋಗಿ ಬೀದಿಯಲ್ಲಿದ್ದ ಒಂದು ಮನೆಯ ಬಾಗಿಲಿನ ಹತ್ತಿರ ಕಟ್ಟಿದ್ದ ಕತ್ತೆಮರಿಯನ್ನು ಕಂಡರು. ಅವರು ಅದನ್ನು ಬಿಚ್ಚುತ್ತಿರುವಾಗ, 5 ಅಲ್ಲಿ ನಿಂತಿದ್ದ ಕೆಲವರು ಅವರಿಗೆ, “ಆ ಕತ್ತೆಮರಿಯನ್ನು ಏಕೆ ಬಿಚ್ಚುತ್ತೀರಿ?” ಎಂದು ಕೇಳಿದರು. 6 ಅದಕ್ಕೆ ಅವರು ಯೇಸು ತಮಗೆ ಹೇಳಿದ ಪ್ರಕಾರ ಉತ್ತರ ಕೊಡಲು, ಅವರು ಅದನ್ನು ತೆಗೆದುಕೊಂಡು ಹೋಗಲು ಬಿಟ್ಟರು. 7 ಶಿಷ್ಯರು ಕತ್ತೆಮರಿಯನ್ನು ಯೇಸುವಿನ ಬಳಿಗೆ ತಂದು ಅದರ ಮೇಲೆ ತಮ್ಮ ಬಟ್ಟೆಗಳನ್ನು ಹಾಕಿದಾಗ ಯೇಸು ಅದರ ಮೇಲೆ ಕುಳಿತುಕೊಂಡರು. 8 ಅನೇಕರು ತಮ್ಮ ಬಟ್ಟೆಗಳನ್ನು ದಾರಿಯಲ್ಲಿ ಹಾಸಿದರು. ಇತರರು ತೋಟಗಳಿಂದ ರೆಂಬೆಗಳನ್ನು ಕಡಿದು ದಾರಿಯಲ್ಲಿ ಹರಡಿದರು. 9 ಮುಂದೆಯೂ ಹಿಂದೆಯೂ ಹೋಗುತ್ತಿದ್ದವರು ಕೂಗುತ್ತಾ,
11 ಯೇಸು ಯೆರೂಸಲೇಮಿಗೆ ಹೋಗಿ ದೇವಾಲಯವನ್ನು ಪ್ರವೇಶಿಸಿದಾಗ ಸುತ್ತಲಿದ್ದ ಎಲ್ಲವುಗಳನ್ನು ನೋಡಿದರು. ಆಗ ಸಂಜೆಯಾಗಿದ್ದುದರಿಂದ ಯೇಸು ಹನ್ನೆರಡು ಮಂದಿಯೊಂದಿಗೆ ಬೇಥಾನ್ಯಕ್ಕೆ ಹೋದರು.
15 ತರುವಾಯ ಅವರು ಯೆರೂಸಲೇಮಿಗೆ ಬಂದರು. ಯೇಸು ದೇವಾಲಯದ ಅಂಗಳದೊಳಗೆ ಹೋಗಿ ಅಲ್ಲಿ ಮಾರುತ್ತಿದ್ದವರನ್ನೂ ಕೊಂಡುಕೊಳ್ಳುತ್ತಿದ್ದವರನ್ನೂ ಹೊರಗೆ ಹಾಕಲಾರಂಭಿಸಿ, ಹಣ ವಿನಿಮಯ ಮಾಡುತ್ತಿದ್ದವರ ಮೇಜುಗಳನ್ನೂ ಪಾರಿವಾಳ ಮಾರುವವರ ಆಸನಗಳನ್ನೂ ಕೆಡವಿಹಾಕಿದರು. 16 ಯಾರೂ ದೇವಾಲಯದ ಮಾರ್ಗವಾಗಿ ಯಾವುದನ್ನೂ ತೆಗೆದುಕೊಂಡು ಹೋಗದಂತೆ ತಡೆದರು. 17 ಯೇಸು ಅವರಿಗೆ ಬೋಧಿಸುತ್ತಾ, “ನನ್ನ ಮನೆಯು ಎಲ್ಲಾ ಜನಾಂಗಗಳಿಗೂ ‘ಪ್ರಾರ್ಥನೆಯ ಮನೆ’[b] ಎಂದು ಕರೆಯಿಸಿಕೊಳ್ಳುವುದೆಂದು ಬರೆದಿದೆಯಲ್ಲವೇ? ಆದರೆ ನೀವು ಅದನ್ನು ಕಳ್ಳರ ಗವಿಯನ್ನಾಗಿ ಮಾಡಿದ್ದೀರಿ,”[c] ಎಂದು ಹೇಳಿದರು.
18 ಮುಖ್ಯಯಾಜಕರೂ ನಿಯಮ ಬೋಧಕರೂ ಅದನ್ನು ಕೇಳಿ ಯೇಸುವನ್ನು ಹೇಗೆ ಕೊಲ್ಲಬೇಕೆಂದು ಆಲೋಚಿಸಿದರು. ಆದರೆ ಜನರೆಲ್ಲರೂ ಯೇಸುವಿನ ಬೋಧನೆಗೆ ಅತ್ಯಾಶ್ಚರ್ಯಪಟ್ಟದ್ದರಿಂದ ಅವರು ಯೇಸುವಿಗೆ ಭಯಪಟ್ಟರು.
19 ಸಂಜೆಯಾದಾಗ ಯೇಸು ಮತ್ತು ಅವರ ಶಿಷ್ಯರು ಪಟ್ಟಣದ ಹೊರಗೆ ಹೋದರು.
20 ಬೆಳಿಗ್ಗೆ ಅವರು ಅದೇ ದಾರಿಯಲ್ಲಿ ಹೋಗುತ್ತಿದ್ದಾಗ ಆ ಅಂಜೂರ ಮರವು ಬೇರುಸಹಿತವಾಗಿ ಒಣಗಿರುವುದನ್ನು ಕಂಡರು. 21 ಆಗ ಪೇತ್ರನು ಜ್ಞಾಪಕಮಾಡಿಕೊಂಡು ಯೇಸುವಿಗೆ, “ಗುರುವೇ, ಇಗೋ! ನೀನು ಶಪಿಸಿದ ಅಂಜೂರದ ಮರವು ಒಣಗಿಹೋಗಿದೆ!” ಎಂದು ಹೇಳಿದನು.
22 ಯೇಸು ಉತ್ತರವಾಗಿ ಅವರಿಗೆ ಹೇಳಿದ್ದೇನೆಂದರೆ, “ದೇವರ ನಂಬಿಕೆ ನಿಮಗಿರಲಿ.[d] 23 ಏಕೆಂದರೆ ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ. ಯಾರಾದರೂ ಈ ಬೆಟ್ಟಕ್ಕೆ, ‘ನೀನು ಕಿತ್ತುಕೊಂಡು ಹೋಗಿ ಸಮುದ್ರದಲ್ಲಿ ಬೀಳು,’ ಎಂದು ಹೇಳಿ ತಮ್ಮ ಹೃದಯದಲ್ಲಿ ಸಂಶಯಪಡದೆ ತಾವು ಹೇಳಿದಂತೆಯೇ ಆಗುವುದೆಂದು ನಂಬಿದರೆ ಅವರು ಹೇಳಿದಂತೆಯೇ ಅವರಿಗೆ ಆಗುವುದು. 24 ಆದಕಾರಣ, ನೀವು ಪ್ರಾರ್ಥನೆಯಲ್ಲಿ ಏನೇನು ಬೇಡಿಕೊಳ್ಳುವಿರೋ ಎಲ್ಲವೂ ನಿಮಗೆ ಸಿಕ್ಕಿವೆಯೆಂದು ನಂಬಿರಿ. ಅವು ನಿಮಗೆ ಲಭಿಸುವವು. 25 ನೀವು ನಿಂತುಕೊಂಡು ಪ್ರಾರ್ಥಿಸುವಾಗ ಯಾರಿಗಾದರೂ ವಿರೋಧವಾದದ್ದು ನಿಮ್ಮಲ್ಲಿದ್ದರೆ ಕ್ಷಮಿಸಿರಿ. ಆಗ ಪರಲೋಕದಲ್ಲಿರುವ ನಿಮ್ಮ ತಂದೆಯೂ ಸಹ ನಿಮ್ಮ ಅಪರಾಧಗಳನ್ನು ಕ್ಷಮಿಸುವರು. 26 ಆದರೆ ನೀವು ಕ್ಷಮಿಸದಿದ್ದರೆ ಪರಲೋಕದಲ್ಲಿರುವ ನಿಮ್ಮ ತಂದೆಯೂ ನಿಮ್ಮ ಪಾಪಗಳನ್ನು ಕ್ಷಮಿಸುವುದಿಲ್ಲ ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ,” ಎಂದರು.[e]
29 ಅದಕ್ಕೆ ಯೇಸು ಅವರಿಗೆ, “ನಾನು ಸಹ ನಿಮಗೆ ಒಂದು ಪ್ರಶ್ನೆಯನ್ನು ಕೇಳುತ್ತೇನೆ. ನೀವು ನನಗೆ ಉತ್ತರ ಹೇಳಿದರೆ ನಾನು ಯಾವ ಅಧಿಕಾರದಿಂದ ಇವುಗಳನ್ನು ಮಾಡುತ್ತೇನೆಂದು ನಿಮಗೆ ಹೇಳುತ್ತೇನೆ. 30 ಯೋಹಾನನಿಗೆ ದೀಕ್ಷಾಸ್ನಾನವನ್ನು ಕೊಡುವ ಅಧಿಕಾರ ಪರಲೋಕದಿಂದ ಬಂದದ್ದೋ ಇಲ್ಲವೇ ಮನುಷ್ಯರಿಂದಲೋ? ನನಗೆ ಉತ್ತರಕೊಡಿರಿ,” ಎಂದರು.
31 ಆಗ ಅವರು, “ಪರಲೋಕದಿಂದ ಎಂದು ನಾವು ಹೇಳಿದರೆ, ‘ನೀವು ಏಕೆ ಅವನನ್ನು ನಂಬಲಿಲ್ಲ?’ ಎಂದು ಕೇಳುವರು. 32 ಆದರೆ ನಾವು, ‘ಮನುಷ್ಯರಿಂದ ಬಂತು’ ಎಂದು ಹೇಳುವುದಾದರೆ, ನಮಗೆ ಜನರ ಭಯವಿದೆ. ಏಕೆಂದರೆ ಯೋಹಾನನು ನಿಜವಾಗಿಯೂ ಪ್ರವಾದಿ ಎಂದು ಎಲ್ಲರೂ ಎಣಿಸಿಕೊಂಡಿರುವರು,” ಎಂದು ತಮ್ಮಲ್ಲಿ ಚರ್ಚಿಸಿಕೊಂಡರು.
33 ಅವರು ಯೇಸುವಿಗೆ, “ನಮಗೆ ಗೊತ್ತಿಲ್ಲ,” ಎಂದು ಉತ್ತರಕೊಟ್ಟರು.