6 ಅವನು ಯೇಸುವನ್ನು ದೂರದಿಂದ ಕಂಡು ಓಡಿಬಂದು, ಅವರ ಮುಂದೆ ಮೊಣಕಾಲೂರಿ, 7 ಮಹಾಶಬ್ದದಿಂದ ಆರ್ಭಟಿಸಿ, “ಯೇಸುವೇ, ಮಹೋನ್ನತ ದೇವಪುತ್ರನೇ, ನನ್ನ ಗೊಡವೆ ನಿಮಗೆ ಏಕೆ? ದೇವರಾಣೆ, ನನ್ನನ್ನು ಪೀಡಿಸಬೇಡಿರಿ!” ಎಂದು ಅರಚಿದನು. 8 ಏಕೆಂದರೆ ಯೇಸು ಅವನಿಗೆ, “ಅಶುದ್ಧಾತ್ಮವೇ ಅವನನ್ನು ಬಿಟ್ಟು ಹೊರಗೆ ಬಾ!” ಎಂದು ಹೇಳಿದ್ದರು.
9 ಅನಂತರ, ಯೇಸು ಅವನಿಗೆ, “ನಿನ್ನ ಹೆಸರೇನು?” ಎಂದು ಕೇಳಿದಾಗ,
11 ಹತ್ತಿರದಲ್ಲಿದ್ದ ಗುಡ್ಡದ ಸಮೀಪದಲ್ಲಿ ಹಂದಿಗಳ ಒಂದು ದೊಡ್ಡ ಹಿಂಡು ಮೇಯುತ್ತಿತ್ತು. 12 “ನಾವು ಆ ಹಂದಿಗಳ ಹಿಂಡಿನೊಳಗೆ ಸೇರಿಕೊಳ್ಳುವಂತೆ ನಮ್ಮನ್ನು ಅವುಗಳೊಳಗೆ ಕಳುಹಿಸಿಕೊಡಿ,” ಎಂದು ದೆವ್ವಗಳು ಯೇಸುವನ್ನು ಬೇಡಿಕೊಂಡವು. 13 ಯೇಸು ಅವುಗಳಿಗೆ ಅಪ್ಪಣೆಕೊಡಲು, ಆ ಅಶುದ್ಧಾತ್ಮಗಳು ಅವನಿಂದ ಹೊರಗೆ ಬಂದು ಹಂದಿಗಳೊಳಗೆ ಸೇರಿದವು. ಸುಮಾರು ಎರಡು ಸಾವಿರ ಹಂದಿಗಳಿದ್ದ ಆ ಹಿಂಡು ಓಡಿ ಕಡಿದಾದ ಬದಿಯಿಂದ ಸರೋವರದೊಳಗೆ ಬಿದ್ದು ಮುಳುಗಿ ಸತ್ತು ಹೋದವು.
14 ಆ ಹಂದಿಗಳನ್ನು ಮೇಯಿಸುತ್ತಿದ್ದವರು ಓಡಿಹೋಗಿ ಪಟ್ಟಣದಲ್ಲಿಯೂ ಸೀಮೆಯಲ್ಲಿಯೂ ನಡೆದ ಸಂಗತಿಯನ್ನು ತಿಳಿಸಿದರು ಮತ್ತು ನಡೆದದ್ದನ್ನು ಕಾಣಲು ಜನರು ಬಂದರು. 15 ಅವರು ಯೇಸುವಿನ ಬಳಿಗೆ ಬಂದಾಗ, ದೆವ್ವಗಳ ಸೇನೆಯಿಂದ ಪೀಡಿತನಾಗಿದ್ದವನು ಬಟ್ಟೆಗಳನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯುಳ್ಳವನಾಗಿ ಕುಳಿತಿರುವುದನ್ನು ಕಂಡು ಭಯಪಟ್ಟರು. 16 ನಡೆದದ್ದನ್ನು ಕಂಡವರು, ದೆವ್ವಪೀಡಿತನಾಗಿದ್ದವನಿಗೆ ಏನಾಯಿತೆಂಬುದನ್ನು ಮತ್ತು ಹಂದಿಗಳಿಗಾದ ಗತಿಯನ್ನು ಜನರಿಗೆ ತಿಳಿಸಿದರು. 17 ಆಗ ಅವರು ಯೇಸುವಿಗೆ, ತಮ್ಮ ಪ್ರಾಂತವನ್ನು ಬಿಟ್ಟು ಹೊರಟುಹೋಗಬೇಕೆಂದು ಕೇಳಿಕೊಂಡರು.
18 ಯೇಸು ದೋಣಿಯನ್ನು ಹತ್ತುತ್ತಿದ್ದಾಗ, ದೆವ್ವಪೀಡಿತನಾಗಿದ್ದವನು ತನ್ನನ್ನು ಅವರ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬೇಡಿಕೊಂಡನು. 19 ಯೇಸು ಅದಕ್ಕೊಪ್ಪದೆ ಅವನಿಗೆ, “ನೀನು ಮನೆಗೆ ಹೋಗಿ ನಿನ್ನ ಜನರಿಗೆ ಕರ್ತದೇವರು ನಿನಗೆ ಮಾಡಿರುವ ಮಹಾಕಾರ್ಯಗಳನ್ನು ಮತ್ತು ನಿನ್ನನ್ನು ಹೇಗೆ ಕರುಣಿಸಿದ್ದಾರೆ ಎಂಬುದನ್ನು ತಿಳಿಸು,” ಎಂದರು. 20 ಅವನು ಹೊರಟುಹೋಗಿ ಯೇಸು ತನಗೆ ಮಾಡಿದ ಮಹಾಕಾರ್ಯಗಳನ್ನು ದೆಕಪೊಲಿಯಲ್ಲಿ[b] ಸಾರಲಾರಂಭಿಸಿದನು ಮತ್ತು ಕೇಳಿದವರೆಲ್ಲರೂ ಆಶ್ಚರ್ಯಪಟ್ಟರು.
30 ಕೂಡಲೇ ಗುಣಪಡಿಸುವ ಶಕ್ತಿಯು ತನ್ನಿಂದ ಹೊರಟಿತೆಂದು ಯೇಸು ತಿಳಿದು, ಜನರ ನಡುವೆ ಸುತ್ತಲೂ ನೋಡಿ, “ನನ್ನ ಉಡುಪನ್ನು ಮುಟ್ಟಿದವರು ಯಾರು?” ಎಂದು ಕೇಳಿದರು.
31 ಯೇಸುವಿನ ಶಿಷ್ಯರು ಅವರಿಗೆ, “ಇಷ್ಟು ದೊಡ್ಡ ಗುಂಪು ನಿಮ್ಮ ಸುತ್ತಲೂ ನೂಕುತ್ತಿರುವುದನ್ನು ನೀವೇ ಕಾಣುತ್ತಿರುವಲ್ಲಿ, ‘ನನ್ನನ್ನು ಮುಟ್ಟಿದವರು ಯಾರು,’ ಎಂದು ಕೇಳುತ್ತೀರಲ್ಲಾ?” ಎಂದರು.
32 ಆದರೆ ಯೇಸು ತಮ್ಮನ್ನು ಮುಟ್ಟಿದವರು ಯಾರು ಎಂದು ಕಾಣಲು ಸುತ್ತಲೂ ನೋಡಲಾರಂಭಿಸಿದರು. 33 ಆಗ ಆ ಸ್ತ್ರೀ ತನಗೆ ಸಂಭವಿಸಿದ್ದನ್ನು ಗ್ರಹಿಸಿ, ಬಂದು ಯೇಸುವಿನ ಮುಂದೆ ಅಡ್ಡಬಿದ್ದು, ಭಯದಿಂದ ನಡುಗುತ್ತಾ ನಡೆದ ಎಲ್ಲಾ ನಿಜಸಂಗತಿಯನ್ನು ತಿಳಿಸಿದಳು. 34 ಯೇಸು ಆ ಸ್ತ್ರೀಗೆ, “ಮಗಳೇ, ನಿನ್ನ ನಂಬಿಕೆಯೇ ನಿನ್ನನ್ನು ಗುಣಪಡಿಸಿದೆ. ಸಮಾಧಾನದಿಂದ ಹೋಗು, ನಿನ್ನ ಬಾಧೆಯಿಂದ ನೀನು ಮುಕ್ತಳಾಗಿರುವೆ,” ಎಂದು ಹೇಳಿದರು.
35 ಯೇಸು ಇನ್ನೂ ಮಾತನಾಡುತ್ತಿರುವಾಗಲೇ, ಸಭಾಮಂದಿರದ ಅಧಿಕಾರಿಯಾದ ಯಾಯೀರನ ಮನೆಯಿಂದ ಕೆಲವರು ಬಂದು, “ನಿನ್ನ ಮಗಳು ತೀರಿಹೋದಳು. ಇನ್ನೂ ಗುರುವಿಗೆ ತೊಂದರೆಪಡಿಸುವುದೇಕೆ?” ಎಂದರು.
36 ಆದರೆ ಯೇಸು ಅವರು ಹೇಳಿದ ಮಾತನ್ನು ಲಕ್ಷ್ಯಮಾಡದೆ, ಆ ಸಭಾಮಂದಿರದ ಅಧಿಕಾರಿಗೆ, “ಭಯಪಡಬೇಡ ನಂಬಿಕೆ ಮಾತ್ರ ಇರಲಿ,” ಎಂದರು.
37 ಯೇಸು ತಮ್ಮ ಸಂಗಡ ಪೇತ್ರ, ಯಾಕೋಬ ಮತ್ತು ಅವನ ತಮ್ಮ ಯೋಹಾನನನ್ನು ಹೊರತು ಬೇರೆ ಯಾರನ್ನೂ ಬರುವುದಕ್ಕೆ ಅನುಮತಿಸಲಿಲ್ಲ. 38 ಅವರು ಸಭಾಮಂದಿರದ ಅಧಿಕಾರಿಯ ಮನೆಗೆ ಬಂದಾಗ, ಯೇಸು ಜನರು ಬಹಳವಾಗಿ ಗೋಳಾಡುವುದನ್ನೂ ಪ್ರಲಾಪಿಸುವುದನ್ನೂ ಕಂಡರು. 39 ಯೇಸು ಮನೆಯೊಳಗೆ ಹೋಗಿ, “ನೀವು ಗೋಳಾಡಿ ಅಳುವುದೇಕೆ? ಮಗು ಸತ್ತಿಲ್ಲ, ಅವಳು ನಿದ್ದೆ ಮಾಡುತ್ತಿದ್ದಾಳೆ,” ಎಂದರು. 40 ಆದರೆ ಅವರು ಯೇಸುವನ್ನು ಪರಿಹಾಸ್ಯ ಮಾಡಿದರು.