4 ಅದಕ್ಕೆ ಶಿಷ್ಯರು ಯೇಸುವಿಗೆ, “ಈ ನಿರ್ಜನ ಪ್ರದೇಶದಲ್ಲಿ ಈ ಜನರನ್ನು ತೃಪ್ತಿಪಡಿಸಲು ಸಾಕಷ್ಟು ರೊಟ್ಟಿಯನ್ನು ಎಲ್ಲಿಂದ ತರುವುದು?” ಎಂದರು.
5 ಯೇಸು ಅವರಿಗೆ, “ನಿಮ್ಮ ಹತ್ತಿರ ಎಷ್ಟು ರೊಟ್ಟಿಗಳಿವೆ?” ಎಂದು ಕೇಳಿದ್ದಕ್ಕೆ ಶಿಷ್ಯರು,
6 ಆಗ ಯೇಸು ಜನಸಮೂಹವು ನೆಲದ ಮೇಲೆ ಕುಳಿತುಕೊಳ್ಳುವಂತೆ ಅಪ್ಪಣೆಕೊಟ್ಟು ಆ ಏಳು ರೊಟ್ಟಿಗಳನ್ನು ತೆಗೆದುಕೊಂಡು ಮುರಿದು ಜನಸಮೂಹಕ್ಕೆ ಹಂಚಲು ತಮ್ಮ ಶಿಷ್ಯರಿಗೆ ಕೊಟ್ಟರು. ಅವರು ಜನಸಮೂಹಕ್ಕೆ ಹಂಚಿದರು. 7 ಇದಲ್ಲದೆ ಅವರಲ್ಲಿ ಕೆಲವು ಸಣ್ಣ ಮೀನುಗಳಿದ್ದವು. ಯೇಸು ಅವುಗಳನ್ನೂ ಆಶೀರ್ವದಿಸಿ ಅವರಿಗೆ ಹಂಚುವಂತೆ ಆಜ್ಞಾಪಿಸಿದರು. 8 ಜನರು ಊಟಮಾಡಿ ತೃಪ್ತರಾದರು. ಉಳಿದ ತುಂಡುಗಳನ್ನು ಒಟ್ಟುಗೂಡಿಸಿದಾಗ ಏಳು ಬುಟ್ಟಿಗಳು ತುಂಬಿದವು. 9 ಊಟಮಾಡಿದವರು ಸುಮಾರು ನಾಲ್ಕು ಸಾವಿರ ಮಂದಿ. ಯೇಸು ಅವರನ್ನು ಕಳುಹಿಸಿದ ನಂತರ, 10 ತಮ್ಮ ಶಿಷ್ಯರೊಂದಿಗೆ ಒಂದು ದೋಣಿಯನ್ನು ಹತ್ತಿ ದಲ್ಮನೂಥ ಎಂಬ ಪ್ರದೇಶಕ್ಕೆ ಹೋದರು.
11 ಫರಿಸಾಯರು ಬಂದು ಯೇಸುವನ್ನು ಪರೀಕ್ಷಿಸುವುದಕ್ಕಾಗಿ ಪರಲೋಕದಿಂದ ತಮಗೆ ಒಂದು ಸೂಚಕಕಾರ್ಯವನ್ನು ಮಾಡಬೇಕೆಂದು ಕೇಳಿ, ಅವರೊಂದಿಗೆ ತರ್ಕಿಸುವುದಕ್ಕೆ ಆರಂಭಿಸಿದರು. 12 ಯೇಸು ತಮ್ಮ ಆತ್ಮದಲ್ಲಿ ನೊಂದುಕೊಂಡು, “ಈ ಸಂತತಿಯು ಸೂಚಕಕಾರ್ಯವನ್ನು ಹುಡುಕುವುದು ಏಕೆ? ಈ ಸಂತತಿಗೆ ಯಾವ ಸೂಚಕಕಾರ್ಯವೂ ಕೊಡಲಾಗುವುದಿಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ,” ಎಂದರು. 13 ಯೇಸು ಅವರನ್ನು ಬಿಟ್ಟು ತಿರುಗಿ ದೋಣಿಯನ್ನು ಹತ್ತಿ ಆಚೆದಡಕ್ಕೆ ಹೊರಟು ಹೋದರು.
16 ಅವರು ತಮ್ಮೊಳಗೆ, “ನಮ್ಮಲ್ಲಿ ರೊಟ್ಟಿ ಇಲ್ಲದಿರುವುದರಿಂದಲೇ ಹೀಗೆ ಹೇಳುತ್ತಿರಬೇಕು,” ಎಂದು ಚರ್ಚಿಸಿಕೊಂಡರು.
17 ಯೇಸು ಅವರು ಮಾತನಾಡಿದ್ದನ್ನು ತಿಳಿದುಕೊಂಡು ಅವರಿಗೆ, “ನಿಮ್ಮಲ್ಲಿ ರೊಟ್ಟಿ ಇಲ್ಲವೆಂದು ಏಕೆ ಚರ್ಚಿಸಿಕೊಳ್ಳುತ್ತೀರಿ? ನೀವು ಇನ್ನೂ ಕಾಣದೆಯೂ ತಿಳಿದುಕೊಳ್ಳದೆಯೂ ಇದ್ದೀರೋ? ನೀವು ನಿಮ್ಮ ಹೃದಯವನ್ನು ಇನ್ನೂ ಕಠಿಣ ಮಾಡಿಕೊಂಡಿದ್ದೀರೋ? 18 ಕಣ್ಣುಗಳಿದ್ದೂ ನೀವು ಕಾಣುವುದಿಲ್ಲವೋ? ಕಿವಿಗಳಿದ್ದೂ ನೀವು ಕೇಳುವುದಿಲ್ಲವೋ? 19 ನಾನು ಆ ಐದು ರೊಟ್ಟಿಗಳನ್ನು ಐದು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ರೊಟ್ಟಿಯ ತುಂಡುಗಳನ್ನು ಕೂಡಿಸಿದಿರಿ ಎಂದು ನಿಮಗೆ ನೆನಪಿಲ್ಲವೇ?” ಎಂದು ಕೇಳಲು ಅವರು ಯೇಸುವಿಗೆ,
20 “ಆ ಏಳು ರೊಟ್ಟಿಗಳನ್ನು ನಾಲ್ಕು ಸಾವಿರ ಜನರ ಮಧ್ಯದಲ್ಲಿ ಮುರಿದಾಗ ಎಷ್ಟು ಬುಟ್ಟಿಗಳ ತುಂಬ ತುಂಡುಗಳನ್ನು ಕೂಡಿಸಿದಿರಿ?” ಎಂದು ಕೇಳಲು ಅವರು,
21 ಯೇಸು ಅವರಿಗೆ, “ಹಾಗಾದರೆ ನೀವು ಇನ್ನೂ ಗ್ರಹಿಸದೆ ಇರುವುದು ಹೇಗೆ?” ಎಂದು ಕೇಳಿದರು.
24 ಅವನು ಮೇಲಕ್ಕೆ ನೋಡಿ, “ಮನುಷ್ಯರು ಮರಗಳ ಹಾಗೆ ಕಾಣುತ್ತಿದ್ದಾರೆ. ಆದರೂ ಅವರು ನಡೆದಾಡುವುದನ್ನು ನೋಡುತ್ತಿದ್ದೇನೆ,” ಎಂದನು.
25 ತರುವಾಯ ಯೇಸು ತಿರುಗಿ ಅವನ ಕಣ್ಣುಗಳ ಮೇಲೆ ತಮ್ಮ ಕೈಗಳನ್ನಿಟ್ಟರು. ಆಗ ಅವನು ಗುಣಹೊಂದಿದವನಾಗಿ ಎಲ್ಲವನ್ನೂ ಬಹುಸ್ಪಷ್ಟವಾಗಿ ಕಂಡನು. 26 ಯೇಸು ಅವನಿಗೆ, “ನೀನು ಊರೊಳಕ್ಕೆ ಹೋಗಬೇಡ,” ಎಂದು ಹೇಳಿ ಅವನನ್ನು ಮನೆಗೆ ಕಳುಹಿಸಿಬಿಟ್ಟರು.
28 ಅವರು, “ಕೆಲವರು ಸ್ನಾನಿಕನಾದ ಯೋಹಾನನು, ಮತ್ತೆ ಕೆಲವರು ಎಲೀಯನು, ಇನ್ನು ಕೆಲವರು ಪ್ರವಾದಿಗಳಲ್ಲಿ ಒಬ್ಬನು ಎನ್ನುತ್ತಾರೆ,” ಎಂದು ಹೇಳಿದರು.
29 ಅದಕ್ಕೆ ಯೇಸು ಅವರಿಗೆ, “ಆದರೆ ನೀವು ನನ್ನನ್ನು ಯಾರೆನ್ನುತ್ತೀರಿ?” ಎಂದು ಕೇಳಲು,
30 ತಮ್ಮ ವಿಷಯವಾಗಿ ಅವರು ಯಾರಿಗೂ ಹೇಳಬಾರದೆಂದು ಯೇಸು ಅವರಿಗೆ ಖಂಡಿತವಾಗಿ ಹೇಳಿದರು.
33 ಆದರೆ ಯೇಸು ತಿರುಗಿ ತಮ್ಮ ಶಿಷ್ಯರ ಕಡೆಗೆ ನೋಡಿ ಪೇತ್ರನನ್ನು ಗದರಿಸಿ, “ಸೈತಾನನೇ, ನನ್ನಿಂದ ತೊಲಗಿಹೋಗು! ನಿನ್ನ ಆಲೋಚನೆ ಮನುಷ್ಯರದೇ ಹೊರತು ದೇವರದಲ್ಲ,” ಎಂದು ಹೇಳಿದರು.