4 ಅದಕ್ಕೆ ಅರಸನು ನನಗೆ, “ನಿನಗೆ ಬೇಕಾಗಿರುವುದೇನು?” ಎಂದನು.
6 ರಾಣಿಯು ಅವನ ಬಳಿಯಲ್ಲಿ ಕುಳಿತಿರುವಾಗ ಅರಸನು ನನಗೆ, “ನಿನ್ನ ಪ್ರಯಾಣ ಎಷ್ಟು ದಿವಸ? ನೀನು ತಿರುಗಿ ಯಾವಾಗ ಬರುತ್ತೀ?” ಎಂದನು. ನಾನು ಅರಸನಿಗೆ ಸಮಯ ಗೊತ್ತು ಮಾಡಿದೆನು. ಆಗ ಅರಸನು ನನ್ನನ್ನು ಕಳುಹಿಸಲು ಸಮ್ಮತಿಸಿದನು.
7 ತರುವಾಯ ನಾನು ಅರಸನಿಗೆ, “ಯೂಫ್ರೇಟೀಸ್ ನದಿ ಆಚೆಯ ರಾಜ್ಯಪಾಲರು ತಮ್ಮ ಪ್ರಾಂತಗಳಲ್ಲಿ ಹಾದು, ಯೆಹೂದದ ನಾಡಿಗೆ ಹೋಗುವುದಕ್ಕೆ ನನಗೆ ಅಪ್ಪಣೆ ಕೊಡಬೇಕಾಗುತ್ತದೆ. 8 ರಾಜವನಪಾಲಕನಾದ ಆಸಾಫನು, ದೇವಾಲಯದ ಕೋಟೆಯ ಬಾಗಿಲುಗಳನ್ನೂ, ಪಟ್ಟಣದ ಪೌಳಿಗೋಡೆಯನ್ನೂ, ನಾನು ಸೇರುವ ಮನೆಯನ್ನೂ, ಕಟ್ಟಲು ಬೇಕಾಗುವ ತೊಲೆಗಳಿಗಾಗಿ ಮರಗಳನ್ನೂ ಕೊಡಬೇಕಾಗುತ್ತದೆ. ಇದನ್ನೆಲ್ಲಾ ಕೊಡುವಂತೆ ರಾಜರು ನನ್ನ ಕೈಯಲ್ಲಿ ಪತ್ರಗಳನ್ನು ದಯಮಾಡಿ ನೀಡಬೇಕು,” ಎಂದು ಬಿನ್ನವಿಸಿದೆನು. ನನ್ನ ದೇವರ ಕೃಪಾಹಸ್ತ ನನ್ನ ಮೇಲೆ ಇದ್ದುದರಿಂದ, ರಾಜನು ಅವುಗಳನ್ನು ನನಗೆ ಕೊಟ್ಟನು. 9 ಆಗ ನಾನು ಯೂಫ್ರೇಟೀಸ್ ನದಿಯ ಆಚೆಯಲ್ಲಿರುವ ಅಧಿಪತಿಗಳ ಬಳಿಗೆ ಬಂದು, ಅರಸನ ಪತ್ರಗಳನ್ನು ಅವರಿಗೆ ಕೊಟ್ಟೆನು. ಅರಸನು ನನ್ನ ಸಂಗಡ ಸೈನ್ಯಾಧಿಪತಿಗಳನ್ನೂ, ಕುದುರೆ ಸವಾರರನ್ನೂ ಕಳುಹಿಸಿದನು.
10 ಇಸ್ರಾಯೇಲರ ಹಿತಚಿಂತಕನು ಒಬ್ಬನು ಬಂದನೆಂಬ ಸಮಾಚಾರ ಹೋರೋನಿನ ಸನ್ಬಲ್ಲಟನಿಗೂ, ಅಮ್ಮೋನ್ ದೇಶದವನಾದ ಟೋಬೀಯ ಎಂಬ ಅಧಿಕಾರಿಗೂ ಮುಟ್ಟಿತು. ಅವರು ತುಂಬಾ ವಿಚಲಿತರಾದರು.
13 ನಾನು ರಾತ್ರಿಯಲ್ಲಿ ಕಣಿವೆಯ ಬಾಗಿಲಿಂದ ಹೊರಟು, ಸರ್ಪದ ಬಾವಿಯನ್ನು ದಾಟಿ, ತಿಪ್ಪೆ ದಿಬ್ಬೆಯ ಬಾಗಿಲಿಗೆ ಬಂದು, ಯೆರೂಸಲೇಮಿನ ಕೆಡವಿ ಹಾಕಲಾದ ಗೋಡೆಗಳನ್ನೂ, ಬೆಂಕಿಯಿಂದ ಸುಡಲಾದ ಅದರ ಬಾಗಿಲುಗಳನ್ನೂ ಚೆನ್ನಾಗಿ ಕಂಡೆನು. 14 ಅಲ್ಲಿಂದ ಬುಗ್ಗೆಬಾಗಿಲನ್ನು ಹಾದು, ಅರಸನ ಕೊಳಕ್ಕೆ ಹೋದೆನು. ನನ್ನ ವಾಹನ ಪಶುವಿಗೆ ಅಲ್ಲಿಂದ ಮುಂದೆ ಹೋಗುವುದಕ್ಕೆ ಮಾರ್ಗವಿಲ್ಲದ್ದರಿಂದ, 15 ನಾನು ರಾತ್ರಿಯಲ್ಲಿ ಹಳ್ಳದ ಮಾರ್ಗದಿಂದ ಹತ್ತುತ್ತಾ ಗೋಡೆಯನ್ನು ಪರೀಕ್ಷಿಸಿದೆನು. ಆಮೇಲೆ ಪುನಃ ಕಣಿವೆಯ ಬಾಗಿಲಿನಿಂದ ಮನೆಗೆ ಬಂದೆನು. 16 ನಾನು ಎಲ್ಲಿ ಹೋದೆನೆಂದೂ, ಏನು ಮಾಡಿದೆನೆಂದೂ ಅಧಿಕಾರಿಗಳು ತಿಳಿಯದೆ ಇದ್ದರು. ಅಲ್ಲಿಯವರೆಗೆ ನಾನು ಯೆಹೂದ್ಯರಿಗಾದರೂ, ಯಾಜಕರಿಗಾದರೂ, ಶ್ರೀಮಂತರಿಗಾದರೂ, ಅಧಿಕಾರಿಗಳಿಗಾದರೂ, ಕೆಲಸ ಮಾಡುವ ಇತರ ಜನರಿಗಾದರೂ ಗೊತ್ತಿರಲಿಲ್ಲ.
17 ಬಳಿಕ ನಾನು ಅವರಿಗೆ, “ನಮ್ಮ ದುರವಸ್ಥೆ ನಿಮ್ಮ ಕಣ್ಣ ಮುಂದಿರುತ್ತದಲ್ಲವೇ? ಯೆರೂಸಲೇಮ್ ಪಟ್ಟಣ ಹಾಳುಬಿದ್ದಿದೆ; ಅದರ ಬಾಗಿಲುಗಳು ಬೆಂಕಿಯಿಂದ ಸುಟ್ಟುಹೋಗಿವೆ; ಬನ್ನಿ, ಯೆರೂಸಲೇಮಿನ ಗೋಡೆಯನ್ನು ಪುನಃ ಕಟ್ಟೋಣ. ಹೀಗೆ ಮಾಡಿದರೆ, ನಮ್ಮ ಮೇಲಿನ ನಿಂದೆ ನೀಗುವುದು,” ಎಂದು ಹೇಳಿದೆ. 18 ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ.
19 ಆದರೆ ಹೋರೋನಿನವನಾದ ಸನ್ಬಲ್ಲಟನೂ, ಅಮ್ಮೋನ್ಯ ದಾಸನಾದ ಟೋಬೀಯನೂ, ಅರಬಿಯನಾದ ಗೆಷೆಮನೂ ಇದನ್ನು ಕೇಳಿದಾಗ, ಅವರು ನಮ್ಮನ್ನು ಗೇಲಿಮಾಡಿ ತಿರಸ್ಕರಿಸಿ, “ನೀವು ಮಾಡುವ ಈ ಕಾರ್ಯವೇನು? ನೀವು ಅರಸನಿಗೆ ವಿರೋಧವಾಗಿ ತಿರುಗಿಬೀಳುವಿರೋ?” ಎಂದರು.
20 ಆಗ ನಾನು ಅವರಿಗೆ, “ಪರಲೋಕದ ದೇವರು ನಮಗೆ ಸಫಲತೆ ಅನುಗ್ರಹಿಸುವರು. ಅವರ ಸೇವಕರಾದ ನಾವು ಪುನಃ ಕಟ್ಟುವ ಕಾರ್ಯ ಪ್ರಾರಂಭಿಸುವೆವು. ಆದರೆ ನಿಮಗೆ ಯೆರೂಸಲೇಮಿನಲ್ಲಿ ಯಾವುದೇ ಪಾಲಾದರೂ ಹಕ್ಕಾದರೂ ಐತಿಹಾಸಿಕ ಬಾಧ್ಯತೆಯಾದರೂ ಇರುವುದಿಲ್ಲ,” ಎಂದು ಹೇಳಿದೆನು.
<- ನೆಹೆಮೀಯ 1ನೆಹೆಮೀಯ 3 ->