5 ಮೋಶೆಯು ಅವರ ವ್ಯಾಜ್ಯವನ್ನು ಯೆಹೋವ ದೇವರ ಮುಂದೆ ತಂದನು. 6 ಆಗ ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ, 7 ಚಲ್ಪಹಾದನ ಪುತ್ರಿಯರು ಹೇಳಿದ್ದು ಸರಿ, ನೀನು ಅವರಿಗೆ ಅವರ ತಂದೆಯ ಸಹೋದರರ ಮಧ್ಯದಲ್ಲಿ ಒಂದು ಸೊತ್ತನ್ನು ನಿಶ್ಚಯವಾಗಿ ಕೊಡಬೇಕು, ಅವರ ತಂದೆಯ ಸೊತ್ತನ್ನು ಅವರಿಗೆ ಸೇರಿಸಬೇಕು.
8 “ಇಸ್ರಾಯೇಲರ ಸಂಗಡ ಮಾಡನಾಡಿ ನೀನು ಹೇಳಬೇಕಾದದ್ದೇನೆಂದರೆ: ‘ಒಬ್ಬನು ಮಗನಿಲ್ಲದೆ ಸತ್ತರೆ, ನೀವು ಅವನ ಸೊತ್ತನ್ನು ಅವನ ಮಗಳಿಗೆ ಸೇರಿಸಬೇಕು. 9 ಅವನಿಗೆ ಸಹೋದರರು ಇಲ್ಲದಿದ್ದರೆ, ನೀವು ಅವನ ಸೊತ್ತನ್ನು ಅವನ ತಂದೆಯ ಸಹೋದರರಿಗೆ ಕೊಡಬೇಕು. 10 ಆದರೆ ಅವನ ತಂದೆಗೆ ಸಹೋದರರು ಇಲ್ಲದಿದ್ದರೆ, 11 ಅವನ ಕುಟುಂಬದೊಳಗೆ ಅವನಿಗೆ ಹೆಚ್ಚಾಗಿ ಸಮೀಪವಾದ ಬಂಧುವಿಗೆ ಅವನ ಸೊತ್ತನ್ನು ಕೊಡಬೇಕು. ಅವನೇ ಅದನ್ನು ಪಡೆದುಕೊಳ್ಳಲಿ. ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ, ಇದು ಇಸ್ರಾಯೇಲರಿಗೆ ನ್ಯಾಯದ ಕಟ್ಟಳೆಯಾಗಿರಬೇಕು,’ ” ಎಂದು ಹೇಳಿದರು.
15 ಮೋಶೆಯು ಯೆಹೋವ ದೇವರ ಸಂಗಡ ಮಾತನಾಡಿ, 16 “ಎಲ್ಲಾ ಮನುಷ್ಯರ ಆತ್ಮಗಳ ದೇವರಾದ ಯೆಹೋವ ದೇವರು ಈ ಜನಸಮೂಹದ ಮೇಲೆ ಒಬ್ಬ ಮನುಷ್ಯನನ್ನು ನೇಮಿಸಿ ಇಡಲಿ. 17 ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.
18 ಆಗ ಯೆಹೋವ ದೇವರು ಮೋಶೆಗೆ, “ಪವಿತ್ರಾತ್ಮವುಳ್ಳವನಾಗಿರುವ ನೂನನ ಮಗ ಯೆಹೋಶುವನನ್ನು ತೆಗೆದುಕೊಂಡು, ನಿನ್ನ ಕೈಯನ್ನು ಅವನ ಮೇಲೆ ಇಟ್ಟು, 19 ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, ಅವರಿಗೆದುರಾಗಿ ಅವನನ್ನು ನೇಮಿಸು. 20 ಇಸ್ರಾಯೇಲರ ಸಮಸ್ತ ಸಭೆಯು ಅವನಿಗೆ ವಿಧೇಯರಾಗುವಂತೆ, ನಿನಗಿರುವ ಗೌರವವನ್ನು ಅವನಿಗೆ ಕೊಡಬೇಕು. 21 ಅವನು ಯಾಜಕನಾದ ಎಲಿಯಾಜರನ ಮುಂದೆ ನಿಲ್ಲಬೇಕು. ಎಲಿಯಾಜರನು ಯೆಹೋವ ದೇವರ ಮುಂದೆ ಊರೀಮ್ ನ್ಯಾಯದ ಪ್ರಕಾರ ಅವನಿಗೋಸ್ಕರ ವಿಚಾರಣೆಯನ್ನು ಮಾಡಬೇಕು. ಯೆಹೋಶುವನ ಆಜ್ಞೆಯ ಪ್ರಕಾರವೇ ಅವನು ಮತ್ತು ಅವನ ಸಂಗಡ ಇರುವ ಸಮಸ್ತ ಇಸ್ರಾಯೇಲರ ಸಮೂಹವೂ ಹೊರಡಬೇಕು ಹಾಗು ಹಿಂದಿರುಗಬೇಕು,” ಎಂದರು.
22 ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನು ಮಾಡಿ, ಯೆಹೋಶುವನನ್ನು ತೆಗೆದುಕೊಂಡು, ಅವನನ್ನು ಯಾಜಕನಾದ ಎಲಿಯಾಜರನ ಮುಂದೆಯೂ, ಸಮಸ್ತ ಸಭೆಯ ಮುಂದೆಯೂ ನಿಲ್ಲಿಸಿ, 23 ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.
<- ಅರಣ್ಯಕಾಂಡ 26ಅರಣ್ಯಕಾಂಡ 28 ->