3 ಆರೋನನು ಹಾಗೆಯೇ ಮಾಡಿ, ದೀಪಸ್ತಂಭದ ಎದುರಿನ ಪ್ರದೇಶಕ್ಕೆ ಬೆಳಕುಕೊಡುವಂತೆ ಅದರ ದೀಪಗಳನ್ನು ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರವೇ ಹಚ್ಚಿದನು. 4 ದೀಪಸ್ತಂಭವೂ ಅದರ ಬುಡಭಾಗವೂ, ಪುಷ್ಪಾಲಂಕಾರಗಳೂ ಬಂಗಾರದ ನಕಾಸಿ ಕೆಲಸದಿಂದ ಹೊಡೆದು ಮಾಡಲಾಗಿತ್ತು. ಯೆಹೋವ ದೇವರು ಮೋಶೆಗೆ ತೋರಿಸಿದ ಮಾದರಿಯ ಪ್ರಕಾರವೇ ಅವನು ಅದನ್ನು ಮಾಡಿದನು.
12 “ಲೇವಿಯರು ತಮ್ಮ ಕೈಗಳನ್ನು ಆ ಹೋರಿಗಳ ತಲೆಗಳ ಮೇಲೆ ಇಡಬೇಕು. ಆಗ ನೀನು ಲೇವಿಯರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರಿಗೆ ಒಂದು ಹೋರಿಯನ್ನು ದೋಷಪರಿಹಾರಕ ಬಲಿಗಾಗಿಯೂ ಮತ್ತೊಂದು ಹೋರಿಯನ್ನು ದಹನಬಲಿಗಾಗಿಯೂ ಸಮರ್ಪಿಸಬೇಕು. 13 ತರುವಾಯ ನೀನು ಲೇವಿಯರನ್ನು ಆರೋನನ ಮುಂದೆಯೂ ಅವನ ಪುತ್ರರ ಮುಂದೆಯೂ ನಿಲ್ಲಿಸಿ, ಅವರನ್ನು ಯೆಹೋವ ದೇವರಿಗೆ ನೈವೇದ್ಯದಂತೆ ಸಮರ್ಪಿಸಬೇಕು. 14 ಹೀಗೆ ನೀನು ಲೇವಿಯರನ್ನು ಇಸ್ರಾಯೇಲರೊಳಗಿಂದ ಪ್ರತ್ಯೇಕಿಸಬೇಕು, ಆಗ ಲೇವಿಯರು ನನ್ನವರಾಗುವರು.
15 “ಅದರ ತರುವಾಯ ಲೇವಿಯರು ಸೇವೆ ಮಾಡವುದಕ್ಕೆ ದೇವದರ್ಶನದ ಗುಡಾರದೊಳಗೆ ಪ್ರವೇಶಿಸುವರು. ಆಗ ನೀನು ಅವರನ್ನು ಶುದ್ಧೀಮಾಡಿ, ನೈವೇದ್ಯದಂತೆ ಸಮರ್ಪಿಸಬೇಕು. 16 ಏಕೆಂದರೆ ಅವರು ಇಸ್ರಾಯೇಲರಲ್ಲಿ ನನಗೆ ಸಂಪೂರ್ಣವಾಗಿ ಸಮರ್ಪಿತರಾದವರು. ಚೊಚ್ಚಲು ಮಕ್ಕಳಿಗೆ ಬದಲಾಗಿ, ಅಂದರೆ ಇಸ್ರಾಯೇಲರ ಜೇಷ್ಠಪುತ್ರರಿಗೆ ಬದಲಾಗಿ ನಾನು ಅವರನ್ನೇ ನನಗೋಸ್ಕರ ತೆಗೆದುಕೊಂಡಿದ್ದೇನೆ. 17 ಏಕೆಂದರೆ ಇಸ್ರಾಯೇಲರಲ್ಲಿ ಮನುಷ್ಯರಾದರೂ ಪಶುಗಳಾದರೂ ಜೇಷ್ಠರಾದದ್ದೆಲ್ಲಾ ನನ್ನದೇ. ನಾನು ಈಜಿಪ್ಟ್ ದೇಶದಲ್ಲಿ ಚೊಚ್ಚಲಾದದ್ದನ್ನೆಲ್ಲಾ ನಾನು ಸಂಹರಿಸಿದಾಗ ಇಸ್ರಾಯೇಲರಲ್ಲಿ ಚೊಚ್ಚಲಾದದ್ದನ್ನು ನನ್ನ ಸ್ವಂತಕ್ಕಾಗಿ ಪ್ರತ್ಯೇಕಿಸಿಕೊಂಡೆನು. 18 ಇಸ್ರಾಯೇಲರಲ್ಲಿರುವ ಎಲ್ಲಾ ಜೇಷ್ಠಪುತ್ರರಿಗೆ ಬದಲಾಗಿ ಲೇವಿಯರನ್ನು ನಾನು ತೆಗೆದುಕೊಂಡೆನು. 19 ಅವರು ದೇವದರ್ಶನದ ಗುಡಾರದಲ್ಲಿ ಇಸ್ರಾಯೇಲರ ಸೇವೆಯನ್ನು ಮಾಡುವುದಕ್ಕೂ ಇಸ್ರಾಯೇಲರಿಗೋಸ್ಕರ ಪ್ರಾಯಶ್ಚಿತ್ತ ಮಾಡುವುದಕ್ಕೂ ಪರಿಶುದ್ಧ ಸ್ಥಳಕ್ಕೆ ಇಸ್ರಾಯೇಲರು ಸಮೀಪಿಸುವಾಗ ಇಸ್ರಾಯೇಲರೊಳಗೆ ವ್ಯಾಧಿಯು ಇರದಂತೆ ನಾನು ಲೇವಿಯರನ್ನು ಇಸ್ರಾಯೇಲರೊಳಗಿಂದ ಆರೋನನಿಗೂ, ಅವನ ಪುತ್ರರಿಗೂ ದಾನವಾಗಿ ಕೊಟ್ಟಿದ್ದೇನೆ.”
20 ಆಗ ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯದಲ್ಲಿ ಆಜ್ಞಾಪಿಸಿದಂತೆಯೇ ಮೋಶೆಯೂ ಆರೋನನೂ ಮತ್ತು ಇಸ್ರಾಯೇಲರ ಸಮೂಹದವರೆಲ್ಲರೂ ಮಾಡಿದರು. 21 ಲೇವಿಯರು ತಮ್ಮನ್ನು ಶುದ್ಧಿಮಾಡಿಕೊಂಡು, ತಮ್ಮ ವಸ್ತ್ರಗಳನ್ನು ತೊಳೆದುಕೊಂಡರು. ಆರೋನನು ಅವರನ್ನು ಯೆಹೋವ ದೇವರ ಮುಂದೆ ನೈವೇದ್ಯದಂತೆ ಅರ್ಪಿಸಿದನು. ಅವರು ಶುದ್ಧರಾಗುವ ಹಾಗೆ ಆರೋನನು ಅವರಿಗೋಸ್ಕರ ಪ್ರಾಯಶ್ಚಿತ್ತ ಮಾಡಿದನು. 22 ತರುವಾಯ ಲೇವಿಯರು ದೇವದರ್ಶನದ ಗುಡಾರದಲ್ಲಿ ಆರೋನನ ಮುಂದೆಯೂ, ಅವನ ಪುತ್ರರ ಮುಂದೆಯೂ ಅವರ ಸೇವೆ ಮಾಡುವುದಕ್ಕೆ ಒಳಗೆ ಪ್ರವೇಶಿಸಿದರು. ಯೆಹೋವ ದೇವರು ಮೋಶೆಗೆ ಲೇವಿಯರ ವಿಷಯವಾಗಿ ಹೇಗೆ ಆಜ್ಞಾಪಿಸಿದರೋ, ಹಾಗೆಯೇ ಮಾಡಿದನು.
23 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ, 24 “ಲೇವಿಯರಿಗೆ ಸಂಬಂಧಪಟ್ಟದ್ದು ಇದಾಗಿದೆ: ಇಪ್ಪತ್ತೈದು ವರ್ಷವೂ, ಅದಕ್ಕೆ ಮೇಲ್ಪಟ್ಟ ಪ್ರಾಯವುಳ್ಳವರೂ ದೇವದರ್ಶನದ ಗುಡಾರದ ಸೇವೆಗಾಗಿ ಒಳಗೆ ಸೇರಬೇಕು. 25 ಆದರೆ ಐವತ್ತು ವರ್ಷದವರಾದ ನಂತರ ಸೇವೆಯನ್ನು ಬಿಟ್ಟು ನಿವೃತ್ತರಾಗಬೇಕು ಮತ್ತು ತದನಂತರ ಕೆಲಸಮಾಡಬಾರದು. 26 ಆದರೆ ಅವರು ದೇವದರ್ಶನದ ಗುಡಾರದಲ್ಲಿ ಅಪ್ಪಣೆಯನ್ನು ಕೈಗೊಂಡು ತಮ್ಮ ಸಹೋದರರೊಂದಿಗೆ ಕೆಲಸಮಾಡಲಿ, ಆದರೆ ಅವರು ಸೇವೆಯನ್ನು ತಾವಾಗಿ ಮಾಡಬಾರದು. ಈ ಪ್ರಕಾರ ನೀನು ಲೇವಿಯರಿಗೆ ಕರ್ತವ್ಯಗಳನ್ನು ಆಜ್ಞಾಪಿಸಬೇಕು,” ಎಂಬುದು.
<- ಅರಣ್ಯಕಾಂಡ 7ಅರಣ್ಯಕಾಂಡ 9 ->