Link to home pageLanguagesLink to all Bible versions on this site
ಕೀರ್ತನೆ 3
ದಾವೀದನ ಕೀರ್ತನೆ. ಅವನು ತನ್ನ ಮಗನಾದ ಅಬ್ಷಾಲೋಮನಿಂದ ಓಡಿಹೋದಾಗ ರಚಿಸಿದ್ದು.
1 ಯೆಹೋವ ದೇವರೇ, ನನ್ನ ವೈರಿಗಳು ಬಹುಜನ!
ನನಗೆ ವಿರೋಧವಾಗಿ ಏಳುವವರು ಎಷ್ಟೋ ಜನ!
2 “ದೇವರು ಅವನನ್ನು ಬಿಡುಗಡೆ ಮಾಡುವುದಿಲ್ಲ,” ಎಂದು
ಅನೇಕರು ನನ್ನ ಬಗ್ಗೆ ಹೇಳುತ್ತಾರೆ.
 
3 ಆದರೆ ಯೆಹೋವ ದೇವರೇ, ನೀವೇ ನನ್ನ ಸುತ್ತಲಿರುವ ಗುರಾಣಿಯೂ,
ನನ್ನ ಮಹಿಮೆಯೂ ನನ್ನ ತಲೆ ಮೇಲೆತ್ತುವವರೂ*ತಲೆ ಮೇಲೆತ್ತುವವರೂ ಇದರ ಅರ್ಥ ನೀವು ಜಯವನ್ನೂ ಮಹಾ ಘನತೆಯನ್ನೂ ಕೊಡುವವರಾಗಿದ್ದೀರಿ ಆಗಿದ್ದೀರಿ.
4 ನಾನು ನನ್ನ ಧ್ವನಿಯೆತ್ತಿ ಯೆಹೋವ ದೇವರಿಗೆ ಮೊರೆಯಿಡುವೆನು,
ಅವರು ತಮ್ಮ ಪರಿಶುದ್ಧ ಪರ್ವತದಿಂದ ನನಗೆ ಉತ್ತರಕೊಡುವರು.
 
5 ನಾನು ಮಲಗಿ ನಿದ್ರಿಸುವೆನು;
ಯೆಹೋವ ದೇವರು ನನ್ನನ್ನು ಕಾಪಾಡಿದ್ದರಿಂದ ನಾನು ಎಚ್ಚರಗೊಂಡೆನು.
6 ಸಾವಿರಾರು ಜನರು ನನಗೆ ವಿರೋಧವಾಗಿ
ನನ್ನ ಸುತ್ತುವರಿದರೂ ನಾನು ಭಯಪಡೆನು.
 
7 ಯೆಹೋವ ದೇವರೇ, ಏಳಿರಿ!
ನನ್ನ ದೇವರೇ, ನನ್ನನ್ನು ರಕ್ಷಿಸಿರಿ.
ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ;
ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.
 
8 ರಕ್ಷಣೆಯು ಯೆಹೋವ ದೇವರಿಂದಲೇ ಬರುವುದು.
ನಿಮ್ಮ ಜನರ ಮೇಲೆ ನಿಮ್ಮ ಆಶೀರ್ವಾದವಿರಲಿ.

<- ಕೀರ್ತನೆಗಳು 2ಕೀರ್ತನೆಗಳು 4 ->