Link to home pageLanguagesLink to all Bible versions on this site
ಕೀರ್ತನೆ 8
ಸಂಗೀತ ನಿರ್ದೇಶಕನಿಗಾಗಿರುವ ಕೀರ್ತನೆ. ಗಿತ್ತೀ ರಾಗದಲ್ಲಿ ಹಾಡತಕ್ಕದ್ದು. ದಾವೀದನ ಕೀರ್ತನೆ.
1 ನಮ್ಮ ಕರ್ತ ಆಗಿರುವ ಯೆಹೋವ ದೇವರೇ,
ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ವೈಭವವುಳ್ಳದ್ದಾಗಿದೆ!
 
ನೀವು ನಿಮ್ಮ ಮಹಿಮೆಯನ್ನು
ಆಕಾಶಗಳಲ್ಲಿ ಸ್ಥಾಪಿಸಿದ್ದೀರಿ.
2 ಸಣ್ಣ ಮಕ್ಕಳ ಮತ್ತು ಹಾಲುಣ್ಣುವ ಕೂಸುಗಳ ಸ್ತೋತ್ರದ ಮೂಲಕ
ನಿಮ್ಮ ಶತ್ರುಗಳ ವಿರೋಧವಾಗಿ ಭದ್ರಕೋಟೆಯನ್ನು ಸ್ಥಾಪಿಸಿ,
ನಿಮ್ಮ ವೈರಿಗಳನ್ನೂ ಮುಯ್ಯಿ ತೀರಿಸುವವರನ್ನೂ ನೀವು ಸುಮ್ಮಗಿರಿಸಿದ್ದೀರಿ.
3 ನಿಮ್ಮ ಬೆರಳಿನ ಸೃಷ್ಟಿಯಾದ ಆಕಾಶಮಂಡಲವನ್ನೂ
ನೀವು ಉಂಟುಮಾಡಿದ ಚಂದ್ರನಕ್ಷತ್ರಗಳನ್ನೂ
ನಾನು ನೋಡಿದಾಗ,
4 ನೀವು ಮಾನವರನ್ನು ನೆನಸಲು ಅವರು ಎಷ್ಟರವರು?
ಮನುಷ್ಯಪುತ್ರನನ್ನು ಲಕ್ಷ್ಯವಿಡಲು ಅವನು ಯಾರು?
 
5 ನೀವು ಮನುಷ್ಯಪುತ್ರನನ್ನು ದೇವರಿಗಿಂತಲೂ*ದೇವರಿಗಿಂತಲೂ ಅಥವಾ ದೇವದೂತರಿಗಿಂತಲೂ ಸ್ವಲ್ಪ ಕಡಿಮೆ ಮಾಡಿ,
ಮಹಿಮೆಯನ್ನೂ ಮಾನವನ್ನೂ ಅವನಿಗೆ ಕಿರೀಟವಾಗಿಟ್ಟಿದ್ದೀರಿ.
6 ನೀವು ನಿಮ್ಮ ಕೈಕೃತಿಗಳ ಮೇಲೆ ಅವನನ್ನು ಅಧಿಕಾರಿಯನ್ನಾಗಿ ಮಾಡಿ,
ಸಮಸ್ತವನ್ನೂ ಅವನ ಪಾದಗಳ ಕೆಳಗೆ ಹಾಕಿದ್ದೀರಿ:
7 ಎಲ್ಲಾ ಕುರಿದನಗಳನ್ನೂ
ಅಡವಿಯ ಮೃಗಗಳನ್ನೂ
8 ಆಕಾಶದ ಪಕ್ಷಿಗಳನ್ನೂ
ಸಮುದ್ರದ ಮೀನುಗಳನ್ನೂ ಸಮುದ್ರದ ಹಾದಿಗಳಲ್ಲಿ ಸಂಚರಿಸುವ ಎಲ್ಲ ವಿಧವಾದ ಜೀವಜಂತುಗಳನ್ನೂ
ಅವನ ಪಾದಗಳ ಕೆಳಗೆ ಹಾಕಿದ್ದೀರಿ.
 
9 ನಮ್ಮ ಕರ್ತ ಆಗಿರುವ ಯೆಹೋವ ದೇವರೇ,
ನಿಮ್ಮ ಹೆಸರು ಭೂಮಿಯಲ್ಲೆಲ್ಲಾ ಎಷ್ಟೋ ಮಹಿಮೆಯುಳ್ಳದ್ದಾಗಿದೆ!

<- ಕೀರ್ತನೆಗಳು 7ಕೀರ್ತನೆಗಳು 9 ->