1 ವಿಶ್ವಾಸದಲ್ಲಿ ಬಲವುಳ್ಳವರಾದ ನಾವು ನಮ್ಮ ಸುಖವನ್ನು ನೋಡಿಕೊಳ್ಳದೆ, ಬಲಹೀನರ ಬಲಹೀನತೆಗಳನ್ನು ಸಹಿಸಿಕೊಳ್ಳಬೇಕು. 2 ನಮ್ಮಲ್ಲಿ ಪ್ರತಿಯೊಬ್ಬರು ತಮ್ಮ ನೆರೆಯವರ ಭಕ್ತಿವೃದ್ಧಿಯ ಹಿತಕ್ಕಾಗಿ ಅವರನ್ನು ಸುಖವನ್ನು ನೋಡಿಕೊಳ್ಳಲಿ. 3 “ನಿಮ್ಮನ್ನು ನಿಂದಿಸುವವರ ನಿಂದೆಗಳು ನನ್ನ ಮೇಲೆ ಬಂದವು,”[a] ಎಂದು ಬರೆದಿರುವಂತೆ ಕ್ರಿಸ್ತನು ಸಹ ತಮ್ಮ ಸುಖಕ್ಕಾಗಿ ಬಾಳಲಿಲ್ಲ. 4 ಪವಿತ್ರ ವೇದದಲ್ಲಿ ಮುಂಚಿತವಾಗಿ ಬರೆದಿರುವುದೆಲ್ಲವೂ ನಮ್ಮ ಬೋಧನೆಗಾಗಿಯೇ ಬರೆಯಲಾಗಿದೆ. ನಾವು ಆ ಬೋಧನೆಗಳ ಮೂಲಕ ಸಹನೆಯನ್ನೂ ಉತ್ತೇಜನೆಯನ್ನೂ ಹೊಂದಿಕೊಂಡು ನಿರೀಕ್ಷೆಯುಳ್ಳವರಾಗಿರಬೇಕೆಂದು ಬರೆಯಲಾಗಿದೆ.
5 ಸಹನೆಯನ್ನೂ ಉತ್ತೇಜನವನ್ನೂ ಕೊಡುವ ದೇವರು ನೀವು ಕ್ರಿಸ್ತ ಯೇಸುವನ್ನು ಹಿಂಬಾಲಿಸುವಂತೆ ನಿಮಗೆ ಒಂದೇ ಆತ್ಮವನ್ನು ಕೊಡಲಿ. 6 ಹೀಗೆ ನೀವು ಒಂದೇ ಮನಸ್ಸುಳ್ಳವರಾಗಿ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ತಂದೆಯಾದ ದೇವರನ್ನು ಒಂದೇ ಬಾಯಿಂದ ಮಹಿಮೆ ಪಡಿಸುವಿರಿ.
7 ದೇವರಿಗೆ ಮಹಿಮೆಯಾಗುವುದಕ್ಕಾಗಿ ಕ್ರಿಸ್ತನು ನಿಮ್ಮನ್ನು ಸ್ವೀಕರಿಸಿದಂತೆಯೇ ನೀವು ಒಬ್ಬರನ್ನೊಬ್ಬರು ಸ್ವೀಕರಿಸಿರಿ. 8 ನಾನು ನಿಮಗೆ ಹೇಳುವುದೇನೆಂದರೆ, ದೇವರು ನಂಬಿಗಸ್ತರು ಎಂದು ತೋರಿಸುವುದಕ್ಕಾಗಿ ಕ್ರಿಸ್ತ ಯೇಸು ಯೆಹೂದ್ಯರಿಗೆ ಸೇವಕರಾಗಿ ಬಂದರು. ಹೀಗೆ ದೇವರು ಪಿತೃಗಳಿಗೆ ಕೊಟ್ಟ ವಾಗ್ದಾನಗಳನ್ನು ದೃಢಪಡಿಸಿದರು. 9 ಇದಲ್ಲದೆ ಯೆಹೂದ್ಯರಲ್ಲದವರು ದೇವರ ಕರುಣೆಗಾಗಿ ದೇವರನ್ನು ಮಹಿಮೆ ಪಡಿಸುವಂತೆ ಹೀಗೆ ಮಾಡಿದರು. ಇದು ಪವಿತ್ರ ವೇದದಲ್ಲಿ ಹೀಗೆ ಬರೆದದ್ದನ್ನು ನೆರವೇರಿಸಿತು:
13 ನಿರೀಕ್ಷೆಯ ದೇವರು, ನೀವು ಪವಿತ್ರಾತ್ಮನ ಶಕ್ತಿಯಿಂದ ನಿಮ್ಮ ನಿರೀಕ್ಷೆಯನ್ನು ಹೆಚ್ಚಿಸಿ, ನೀವು ನಿಮ್ಮ ವಿಶ್ವಾಸದಿಂದ ಸಕಲ ಸಂತೋಷದಿಂದಲೂ ಸಮಾಧಾನದಿಂದಲೂ ಪ್ರವಾಹಿಸುವಂತೆ ಮಾಡಲಿ.
17 ಆದ್ದರಿಂದ ಕ್ರಿಸ್ತ ಯೇಸುವಿನಲ್ಲಿ ದೇವರ ಸೇವೆಯ ವಿಷಯವಾಗಿ ಹೊಗಳಿಕೊಳ್ಳುತ್ತೇನೆ. 18 ಯೆಹೂದ್ಯರಲ್ಲದವರನ್ನು ದೇವರಿಗೆ ವಿಧೇಯರಾಗುವುದಕ್ಕಾಗಿ ಕ್ರಿಸ್ತನು ನನ್ನ ಮೂಲಕ ಮಾತಿನಿಂದಲೂ ಕೃತ್ಯದಿಂದಲೂ 19 ಬಲವಾದ ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಪವಿತ್ರಾತ್ಮ ಶಕ್ತಿಯಿಂದಲೂ ಮಾಡಿದ ಕಾರ್ಯಗಳನ್ನೇ ಹೊರತು ಬೇರೆ ಯಾವ ಕಾರ್ಯಗಳನ್ನೂ ಹೇಳುವುದಕ್ಕೆ ನನಗೆ ಧೈರ್ಯ ಸಾಲದು. ಯೆರೂಸಲೇಮಿನಿಂದ ಪ್ರಾರಂಭಿಸಿ, ಇಲ್ಲುರಿಕದವರೆಗೆ ನಾನು ಕ್ರಿಸ್ತನ ಸುವಾರ್ತೆಯನ್ನು ಸಂಪೂರ್ಣವಾಗಿ ಸಾರಿದ್ದೇನೆ. 20 ಬೇರೊಬ್ಬರು ಹಾಕಿರುವ ಅಸ್ತಿವಾರದ ಮೇಲೆ ನಾನು ಕಟ್ಟಬಾರದೆಂದು, ಕ್ರಿಸ್ತನ ಹೆಸರು ತಿಳಿಯಪಡಿಸದೆ ಇರುವಲ್ಲಿ ಸುವಾರ್ತೆಯನ್ನು ಸಾರಬೇಕೆಂದು ಆತುರದಿಂದ ಹೋರಾಡುತ್ತಿದ್ದೇನೆ. 21 ಪವಿತ್ರ ವೇದದಲ್ಲಿ ಬರೆದಿರುವಂತೆ :
30 ಪ್ರಿಯರೇ, ನಮ್ಮ ಕರ್ತ ಆಗಿರುವ ಯೇಸುಕ್ರಿಸ್ತರ ಮೂಲಕವಾಗಿಯೂ ಪವಿತ್ರಾತ್ಮರ ಪ್ರೀತಿಯ ಮೂಲಕವಾಗಿಯೂ ನಾನು ನಿಮ್ಮನ್ನು ಬೇಡಿಕೊಳ್ಳುವುದೇನೆಂದರೆ, ನನಗೋಸ್ಕರ ದೇವರಲ್ಲಿ ಪ್ರಾರ್ಥಿಸಿ, ನನ್ನೊಂದಿಗೆ ಹೋರಾಡಿರಿ. 31 ನಾನು ಯೂದಾಯ ಪ್ರಾಂತದಲ್ಲಿ ಅವಿಶ್ವಾಸಿಗಳ ಕೈಯಿಂದ ಕಾಪಾಡಬೇಕೆಂತಲೂ ನನ್ನ ಸೇವೆಯು ಯೆರೂಸಲೇಮಿನಲ್ಲಿರುವ ದೇವಜನರಿಗೆ ಮೆಚ್ಚುಗೆಯಾಗಿರಬೇಕೆಂತಲೂ ಪ್ರಾರ್ಥಿಸಿರಿ. 32 ಆಗ ನಾನು ದೇವರ ಚಿತ್ತಾನುಸಾರ ನಿಮ್ಮ ಬಳಿಗೆ ಸಂತೋಷದಿಂದ ಬಂದು, ನಿಮ್ಮ ಸಂಗಡ ವಿಶ್ರಾಂತಿ ಹೊಂದುವೆನು. 33 ಸಮಾಧಾನದ ದೇವರು ನಿಮ್ಮೆಲ್ಲರೊಂದಿಗಿರಲಿ. ಆಮೆನ್.